ಸರಕಾರಿ ಭೂಮಿ ಮಂಜೂರು: ಕಾನೂನು ಇಲಾಖೆಗೆ ನಿರ್ದೇಶನ: ಸಚಿವ ಅಶೋಕ್
Team Udayavani, Oct 11, 2022, 11:17 PM IST
ಬೆಂಗಳೂರು: ಕುಮ್ಕಿ, ಕಾನೆ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ದಶಕಗಳಿಂದ ಸಾಗುವಳಿ ಮಾಡುತ್ತಿರುವ ಅರ್ಹರಿಗೆ ಭೂಮಿ ಮಂಜೂರು ಮಾಡುವ ಸಂಬಂಧ ಕಾನೂನು ತಿದ್ದುಪಡಿಗೆ ಅಭಿಪ್ರಾಯ ಸಲ್ಲಿಸುವಂತೆ ಸಂಪುಟ ಉಪಸಮಿತಿ ಕಾನೂನು ಇಲಾಖೆಗೆ ನಿರ್ದೇಶನ ನೀಡಿದೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಅನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಮಲೆನಾಡು ಸೇರಿ ರಾಜ್ಯಾದ್ಯಂತ 60ರಿಂದ 70 ವರ್ಷ ಬಡ ರೈತರು ಸರಕಾರಿ ಭೂಮಿ, ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದಾರೆ.
ನ್ಯಾಯಾಲಯಗಳು ಅರಣ್ಯ ಪ್ರದೇಶವೆಂದು ಘೋಷಿಸಿದ್ದರೂ ಅಲ್ಲಿ ಅಡಿಕೆ, ತೆಂಗಿನ ಮರ ಬೆಳೆದಿವೆ. ದಶಕಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವವರಿಗೆ ಭೂಮಿ ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾನೂನು ತಿದ್ದುಪಡಿ ಆಗಬೇಕಿದ್ದು ಪರಾಮರ್ಶೆ ನಡೆಸಿ ಅಭಿಪ್ರಾಯ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು.
ಸಾಗುವಳಿದಾರರು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿದವರು ಹಾಗೂ ತಿರಸ್ಕೃತ ಅರ್ಜಿಗಳನ್ನು ಪರಿಗಣಿಸಿ ಅರ್ಹರಿಗೆ ಮಂಜೂರು ಮಾಡಲಾಗುವುದು. ರಾಜ್ಯಾದ್ಯಂತ ಲಕ್ಷಾಂತರ ಎಕರೆ ಭೂಮಿಯಲ್ಲಿ ಈ ರೀತಿ ಸಾಗುವಳಿಯಾಗಿದ್ದು, ಬಡ ರೈತರಿಗೆ ನೆರವಾಗಲು ತೀರ್ಮಾನಿಸಲಾಗಿದೆ ಎಂದರು. ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತರ ಗ್ರಾಮೀಣ ಪ್ರದೇಶದ ಸರಕಾರಿ ಭೂಮಿ ಮಂಜೂರು ಮಾಡುವ ಸಂಬಂಧ ನೀತಿ ರೂಪಿಸಲು ಸಂಪುಟ ಉಪ ಸಮಿತಿ ರಚನೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ
MUDA Case: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದ ರಾಜಕೀಯ ಪಿತೂರಿ: ಡಿಕೆಶಿ
Hubballi: ED ಬಿಜೆಪಿಯ ಅಂಗ ಸಂಸ್ಥೆಯೇ…? ಸಚಿವ ಎಚ್.ಕೆ.ಪಾಟೀಲ್ ಗರಂ
Republic Day Parade: ಗಣರಾಜ್ಯೋತ್ಸವ ಪರೇಡ್ ಗೆ ಚಾಮರಾಜನಗರದ ಕೃಷಿಕ ದಂಪತಿ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.