![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 12, 2022, 12:09 AM IST
ಸೈಫಾಯಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಹುಟ್ಟೂರು ಉ.ಪ್ರ.ದ ಸೈಫಾಯಿಯಲ್ಲಿ ಮಂಗಳವಾರ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಅವರ ಪುತ್ರ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖೀಲೇಶ್ ಯಾದವ್ ಅವರು ಚಿತೆಗೆ ಅಗ್ನಿಸ್ಪರ್ಶ ಮತ್ತು ಇತರ ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿದರು.
ಸೈಫಾಯಿಯಲ್ಲಿ ಸಾರ್ವಜನಿಕರಿಗೆ ಮತ್ತು ರಾಜಕೀಯ ಕ್ಷೇತ್ರದ ಮುಖಂಡ ರಿಗೆ ಸ್ಥಳೀಯ ಮೈದಾನದಲ್ಲಿ ಅನುವು ಮಾಡಿಕೊಡಲಾಗಿತ್ತು. ಸಂಜೆಯ ವೇಳೆ ಪುಷ್ಪಾಲಂಕೃತ ವಾಹನದಲ್ಲಿ ಹಿರಿಯ ನಾಯಕನ ಪಾರ್ಥಿವ ಶರೀರವನ್ನು ಚಿತಾಗರಕ್ಕೆ ತರಲಾಯಿತು. ಅಖೀಲೇಶ್ ಯಾದವ್, ಶಿವಪಾಲ್ ಯಾದವ್ ಸೇರಿದಂತೆ ಕುಟುಂಬದ ಪ್ರಮುಖರು ಅದರಲ್ಲಿದ್ದರು. ದಾರಿಯುದ್ದಕ್ಕೂ “ನೇತಾಜಿ ಅಮರ್ ರಹೇ’ ಎಂಬ ಘೋಷಣೆಯನ್ನೂ ಬೆಂಬಲಿಗರು ಮೊಳಗಿಸಿದರು.
ರಕ್ಷಣ ಸಚಿವ ರಾಜನಾಥ್ ಸಿಂಗ್, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಉ.ಪ್ರ. ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ರಾಜಕೀಯ ಮತ್ತು ಉದ್ದಿಮೆ ಕ್ಷೇತ್ರದ ಪ್ರಮುಖರು ಅಗಲಿದ ನಾಯಕ ನಿಗೆ ಅಂತಿಮ ನಮನ ಸಲ್ಲಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.