ವಿದ್ಯುತ್ ಖಾಸಗೀಕರಣಕ್ಕೆ ಖಂಡನೆ, ಪ್ರತಿಭಟನೆ
Team Udayavani, Oct 12, 2022, 3:51 PM IST
ತುಮಕೂರು: ಕೇಂದ್ರ ಸರ್ಕಾರ ವಿದ್ಯುತ್ ಖಾಸಗೀ ಕರಣಕ್ಕೆ ಮುಂದಾಗಿರುವುದನ್ನು ಖಂಡಿಸಿ, ಅಡಕೆ ಅಮದು ಮಾಡಿಕೊಳ್ಳುವುದನ್ನು ವಿರೋಧಿಸಿ ಜೊತೆಗೆ ರೈತರ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ನೇತೃತ್ವದಲ್ಲಿ ಬೆಸ್ಕಾಂ ಎಇಇ ಕಚೇರಿ ಎದುರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
ನಗರದ ಕರಿಬಸವೇಶ್ವರ ವೃತ್ತದಿಂದ ತುಮಕೂರು ತಾಲೂಕು ಎಇಇ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ರೈತ ಸಂಘದ ಕಾರ್ಯಕರ್ತರು, ಸರ್ಕಾರ ವಿದ್ಯುತ್ ಇಲಾಖೆ ಯನ್ನು ಖಾಸಗೀಕರಣ ಮಾಡಲು ಹೊರಟಿರುವ ಕ್ರಮವನ್ನು ವಿರೋಧಿಸಿ, ಘೋಷಣೆ ಕೂಗಿದರು. ಎಇಇ ಕಚೇರಿ ಬಳಿ ಸಮಾವೇಶಗೊಂಡ ರೈತರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ವಿದ್ಯುತ್ ಖಾಸಗೀಕರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಸಂಸತ್ತಿನ ಉಪಸಮಿತಿಯ ಮುಂದೆ ಬಿಲ್ ಮಂಡಿಸಿದೆ. ವಿದ್ಯುತ್ ಖಾಸಗಿ ಬಿಲ್ ಜಾರಿಗೆ ಬಂದರೆ, ಇಡೀ ದೇಶದಲ್ಲಿ ಆಹಾರ ಸ್ವಾವಲಂಬನೆ ಹಾಳಾಗು ವುದಲ್ಲದೆ, ರೈತರು, ಬಡವರು ವಿದ್ಯುತ್ ಬಿಲ್ ಭರಿಸಲಾಗದೆ ಬೀದಿಗೆ ಬೀಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದರು.
ಈ ಸಂಬಂಧ ಮನವಿಯನ್ನು ಎಇಇ ಅವರಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಜಿಲ್ಲಾ ಸಂಘಟನಾ ಕಾರ್ಯ ದರ್ಶಿ ರವೀಶ್, ಪ್ರಧಾನ ಕಾರ್ಯದರ್ಶಿ ಟಿ.ಎಂ. ತಿಮ್ಮೇಗೌಡ, ಸಿ.ಎಸ್. ರಂಗಸ್ವಾಮಯ್ಯ, ಪುಟ್ಟಸ್ವಾಮಿ, ಈಶ್ವರಪ್ಪ, ಕೃಷ್ಣಪ್ಪ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷಿ¾ಕುಮಾರ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.