ಹತ್ತು ವರ್ಷ ಪೂರೈಸಿದ ಆಧಾರ್ ನವೀಕರಣಕ್ಕೆ ಸೂಚನೆ
ನಾಗರಿಕರಿಗೆ ಗುರುತಿನ ಚೀಟಿ ಪ್ರಾಧಿಕಾರ ಮನವಿ ಆನ್‌ಲೈನ್‌ನಲ್ಲೂ ನವೀಕರಣಕ್ಕೆ ಇದೆ ಅವಕಾಶ
Team Udayavani, Oct 13, 2022, 7:20 AM IST
ಹೊಸದಿಲ್ಲಿ: ನೀವು ಆಧಾರ್ ಕಾರ್ಡ್ ಅನ್ನು ಪಡೆದು ಹತ್ತು ವರ್ಷಗಳಾಗಿದೆಯೇ? ಹಾಗಿದ್ದರೆ ಅದರಲ್ಲಿನ ಮಾಹಿತಿಯನ್ನು ಅಪ್‌ಡೇಟ್ ಮಾಡಬೇಕು. ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಬುಧವಾರ ಮನವಿ ಮಾಡಿದೆ. ಅದಕ್ಕೆ ಪೂರಕವಾದ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದೆ,
ಆನ್‌ಲೈನ್ ಮೂಲಕ ಅಥವಾ ಆಧಾರ್ ಕೇಂದ್ರಗಳಲ್ಲಿ ಮಾಹಿತಿಯನ್ನು ನವೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕೇಂದ್ರಕ್ಕೆ ತೆರಳಿ ಮಾಹಿತಿ ಅಪ್‌ಡೇಟ್ ಮಾಡುವುದಿದ್ದರೆ ಸರಕಾರ ನಿಗದಿಪಡಿಸಿದ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
“ಕಳೆದ 10 ವರ್ಷಗಳಿಂದ ಆಧಾರ್ ಸಂಖ್ಯೆಯು ವ್ಯಕ್ತಿಯ ಗುರುತಿನ ದಾಖಲೆ ಯಾಗಿ ಹೊರಹೊಮ್ಮಿದೆ. ಸರಕಾರದ ವಿವಿಧ ಯೋಜನೆಗಳು ಮತ್ತು ಸೇವೆಗಳ ಉಪಯೋಗ ಪಡೆಯಲು ಆಧಾರ್ ಸಂಖ್ಯೆಯನ್ನು ನೀಡಲಾಗುತ್ತದೆ. ಸರಕಾರಿ ಯೋಜನೆಗಳ ಫಲವನ್ನು ಪಡೆಯಲು ಸಾರ್ವಜನಿಕರು ತಮ್ಮ ಇತ್ತೀಚಿನ ವೈಯಕ್ತಿಕ ಮಾಹಿತಿಗಳೊಂದಿಗೆ ಆಧಾರ್ ಅಪ್‌ಡೇಟ್ ಮಾಡುವುದು ಅಗತ್ಯವಾಗಿದೆ. ಅಲ್ಲದೆ, ಇದರಿಂದ ಆಧಾರ್ ದೃಢೀಕರಣದಲ್ಲಿ ಅನಾನುಕೂಲತೆ ತಪ್ಪಿಸಬಹುದಾಗಿದೆ,’ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ತಿಳಿಸಿದೆ.
“ಈ ಹಿನ್ನೆಲೆಯಲ್ಲಿ 10 ವರ್ಷಗಳ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದಿದ್ದವರು, ಈವರೆಗೆ ತಮ್ಮ ಮಾಹಿತಿಗಳ ಬಗ್ಗೆ ಅಪ್‌ಡೇಟ್ ಮಾಡದೇ ಇದ್ದರೆ, ಕೂಡಲೇ ತಮ್ಮ ದಾಖಲಾತಿಗಳನ್ನು ಅಪ್ಡೆàಟ್ ಮಾಡಬೇಕು,’ ಎಂದು ಸಚಿವಾಲಯ ವಿನಂತಿಸಿದೆ.
ವ್ಯಕ್ತಿಯ ಗುರುತು, ವಾಸದ ಸ್ಥಳವನ್ನು ದೃಢೀಕರಿಸಲು ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಮಾಹಿತಿ ನವೀಕರಣಕ್ಕೆ ಈ ವೆಬ್‌ಸೈಟ್ ಲಾಗಿನ್ ಮಾಡಬಹುದು. https://myaadhaar.uidai.gov.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.