ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡಿರುವ ಮೋದಿಗೆ ವೋಟ್ ಮುಖ್ಯವಲ್ಲ: ಪ್ರತಾಪಸಿಂಹ
ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ.
Team Udayavani, Oct 13, 2022, 5:48 PM IST
ಮೈಸೂರು: ಕೇಂದ್ರ ಸರ್ಕಾರದ 08 ವರ್ಷಗಳ ಸಾಧನೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಷನ್ 2047, ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಛಾಯಾಚಿತ್ರ ಪ್ರದರ್ಶನ ಹಾಗೂ ವಿಚಾರ ಸಂಕಿರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಚಾಲನೆ ನೀಡಿದರು.
ಕೇಂದ್ರ ಸಂವಹನ ಇಲಾಖೆ, ಮೈಸೂರು ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಹಾರಾಜ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ 7 ದಿನಗಳ ಛಾಯಾಚಿತ್ರ, ಪ್ರದರ್ಶನ ವಿಚಾರ ಸಂಕಿರಣದಲ್ಲಿ ಕೇಂದ್ರ ಸರ್ಕಾರದ ಸಾಧನೆ, ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟದ ಕೊಡುಗೆಯನ್ನು ಬಿಂಬಿಸುವ 64 ಛಾಯಾಚಿತ್ರಗಳ ಪ್ರದರ್ಶನ ಹಾಗೂ 6 ಮಳಿಗೆಗಳಲ್ಲಿ ರಕ್ತದಾನ ಸೇರಿದಂತೆ ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿ ಒದಗಿಸಲಾಗುತ್ತಿದೆ.
ಮೋದಿ ಕೊಡುಗೆ ಅಪಾರ:
ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ ಮಾತನಾಡಿ, ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 8 ವರ್ಷದಲ್ಲಿ ದೇಶಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಗಾಂಧಿಕನಸಿನ ಸ್ವಚ್ಛ ಭಾರತ ಯೋಜನೆಗೆ ಮುನ್ನುಡಿ ಬರೆದು ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು. ಮೈಸೂರಿನ ಸೂಯೇಜ್ ಫಾರಂ ಸೇರಿದಂತೆ ಕರ್ನಾಟಕದ ಹಲವೆಡೆ ಇರುವ ನೂರಾರು ಟನ್ ಕಸ ತೆರವಿಗೆ 2025ರ ಗಡುವು ನೀಡಿದ್ದಾರೆ. ಭವಿಷ್ಯದ ಮಕ್ಕಳಿಗೆ ಉತ್ತಮ ಪರಿಸರ ನೀಡುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡಿರುವ ಮೋದಿ ಅವರಿಗೆ ವೋಟ್ ಮುಖ್ಯವಲ್ಲ ಎಂದರು.
ಜನಧನ್ ಯೋಜನೆ, ಉಜ್ವಲ ಯೋಜನೆ, ಕಿಸಾನ್ ಸಮ್ಮಾನ್, ಆತ್ಮನಿರ್ಭರ, ಬೀದಿಬದಿ ವ್ಯಾಪಾರಿಗಳಿಗೆ ಸ್ವನಿಧಿ ಯೋಜನೆ ಜಾರಿಗೊಳಿಸಿ ಬಡವರಿಗೆ, ಧೀನದಲಿತರಿಗೆ ನೆರವಾಗಿದ್ದಾರೆ ಎಂದರು. ಇದೇ ವೇಳೆ ಐವರು ಫಲಾನು ಭವಿಗಳಿಗೆ ಶ್ರವಣದೋಷ ಉಪಕರಣ ನೀಡಲಾಯಿತು. ಚಾಮರಾಜ ಕ್ಷೇತ್ರದ ಕೋವಿಡ್‌ನಿಂದ ಮೃತಮಟ್ಟ ಕುಟುಂಬಸ್ಥರಿಗೆ ಒಂದು ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು.
ಶಾಸಕ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ. ರೂಪಾ, ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಂ.ಶಿವಕುಮಾರ್, ದಕ್ಷಿಣ ವಲಯ ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಮಹಾ ನಿರ್ದೇಶಕ ಎಸ್.ವೆಂಕಟೇಶ್ವರ, ಕರ್ನಾಟಕ ವಲಯ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ.ರವೀಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತರೆಡ್ಡಿ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ ಇದ್ದರು.
ಮೋದಿಗೆ ಮೈಸೂರಿನ ಬಗ್ಗೆ ಹೆಚ್ಚು ಪ್ರೀತಿ
ಮೈಸೂರಿನ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿರುವ ಮೋದಿ ಅವರು, ನಗರದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ನೀಡಿದ್ದಾರೆ. ಮೈಸೂರಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ, ಅಮೃತ ಯೋಜನೆಯಡಿ ಅನುದಾನ ನೀಡಿದ್ದಾರೆ. ಜಲಜೀವನ ಮಿಷನ್ ಅಡಿ ಮನೆ ಮನೆಗೆ ನಲ್ಲಿ ನೀರು ನೀಡಲಾಗುತ್ತಿದೆ. ವಿಮಾನ ನಿಲ್ದಾಣದ ಅಭಿವೃದ್ಧಿ, ರೈಲು ನಿಲ್ದಾಣದ ಅಭಿವೃದ್ಧಿಗೆ ಒತ್ತು ನೀಡಿದ್ದು, 10 ಹೊಸ ರೈಲು ನೀಡಿದ್ದಾರೆ. ಮನೆಮನೆಗೆ ಪೈಪ್ ಲೈನ್ ಮೂಲಕ ಗ್ಯಾಸ್ ತಲುಪಿಸುವ ಯೋಜನೆ ಪ್ರಗತಿಯಲ್ಲಿದೆ. ಮೈಸೂರಿನ ಸಂಪರ್ಕ ವ್ಯವಸ್ಥೆ ಉತ್ತಮಗೊಳಿಸಿ ಹೊಸ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡುತ್ತಿದ್ದು, 75 ಸಾವಿರ ಕೋಟಿ ಮೊತ್ತದ ಸೆಮಿ ಕಂಡಕ್ಟರ್ ಯೋಜನೆ ನೀಡಿದ್ದಾರೆ ಎಂದು ಸಂಸದ ಸಿಂಹ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.