ಅ.15 ರಿಂದ ಅಮೃತ ಜ್ಯೋತಿ ನೋಂದಣಿ ಅಭಿಯಾನ ಪ್ರಾರಂಭ: ಸುನಿಲ್ ಕುಮಾರ್
Team Udayavani, Oct 13, 2022, 7:20 PM IST
ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ ದಾರರಿಗೆ ಎಪ್ಪತೈದು ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ” ಅಮೃತ ಜ್ಯೋತಿ” ಯೋಜನೆ ನೋಂದಣಿಗಾಗಿ ಅಕ್ಟೋಬರ್ 15 ರಿಂದ 30 ರವರೆಗೆ ಬೃಹತ್ ಅಭಿಯಾನ ನಡೆಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.
ಗುರುವಾರ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಇರುವ ತಾಂತ್ರಿಕ ಅಡಚಣೆ ವಿಚಾರದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆದ್ಯತೆಯ ಮೇಲೆ ಮಾಡಬೇಕಾದ ಯೋಜನೆಗಳಲ್ಲಿ ವಿಪರೀತ ತಾಂತ್ರಿಕ ಅಂಶಗಳನ್ನು ತುರುಕದಂತೆ ಸಲಹೆ ನೀಡಿದರು.
ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ನೋಂದಣಿಗೆ ಹದಿನೈದು ದಿನಗಳ ಅಭಿಯಾನ ನಡೆಸುವಂತೆ ಸೂಚನೆ ನೀಡಿದ ಅವರು, ಅಕ್ಟೋಬರ್ 15 ರಿಂದ 30 ರವರೆಗೆ ನೋಂದಣಿ ಕಾರ್ಯ ನಡೆಸಬೇಕು. ಎಷ್ಟು ಸಾಧ್ಯವೋ ಅಷ್ಟು ಹೆಚ್ಚಿನ ಪ್ರಮಾಣದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಈಗಾಗಲೇ 2.50 ಲಕ್ಷ ಅರ್ಜಿಗಳು ಸ್ವೀಕಾರವಾಗಿದೆ. ಅಭಿಯಾನ ಮುಕ್ತಾಯಗೊಳ್ಳುವವರೆಗೆ 10 ಲಕ್ಷ ಫಲಾನುಭವಿಗಳ ನೋಂದಣಿಯಾಗಬೇಕು ಎಂದು ಹೇಳಿದರು.
ಎಲ್ಲ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಫಲಾನುಭವಿಗಳ ಬೃಹತ್ ಸಮಾವೇಶ ನಡೆಸುವುದಕ್ಕೆ ಇಂದಿನಿಂದಲೇ ಸಿದ್ದತೆ ನಡೆಸಬೇಕು. ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಮಾವೇಶ ನಡೆಸಲಾಗುವುದು. ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಬೆಳಕು ನಿರಂತರ :
ಬೆಳಕು ಯೋಜನೆ ಅಡಿ ವಿದ್ಯುತ್ ಸಂಪರ್ಕ ನೀಡುವ ಪ್ರಕ್ರಿಯೆಯನ್ನು ಕಾಲ ಕಾಲಕ್ಕೆ ಪರಿಶೀಲನೆ ನಡೆಸಬೇಕು. ನವೆಂಬರ್ ಹದಿನೈದರೊಳಗೆ ಎಲ್ಲ ಜಿಲ್ಲೆಗಳಲ್ಲಿ ಇದುವರೆಗೆ ಬಂದ ಅರ್ಜಿಗಳಿಗೆ ಸಂಪರ್ಕ ನೀಡಬೇಕು. ಹೊಸ ಅರ್ಜಿಗಳಿಗೂ ಸಂಪರ್ಕ ಕೊಡುವಂತೆ ನಿರ್ದೇಶನ ನೀಡಿದರು.
ಮತ್ತೊಂದು ಅಭಿಯಾನ :
ಟಿಸಿ ಹಾಗೂ ಫೀಡರ್ ನಿರ್ವಹಣೆಗಾಗಿ ಮತ್ತೆ ಅಭಿಯಾನ ನಡೆಸಬೇಕು. ಇದರಿಂದ ತಾಂತ್ರಿಕ ವೆಚ್ಚ ಕಡಿಮೆ ಮಾಡುವುದಕ್ಕೆ ಸಾಧ್ಯವಿದೆ. ಹೀಗಾಗಿ ನವೆಂಬರ್ 1 ರಿಂದ 15 ರವರೆಗೆ ಹಾಗೂ,ಡಿಸೆಂಬರ್ 1ರಿಂದ 15 ರ ವರೆಗೆ ಟಿಸಿ ಹಾಗೂ ಫೀಡರ್ ನಿರ್ವಹಣಾ ಅಭಿಯಾನ ನಡೆಸುವಂತೆ ಸೂಚನೆ ನೀಡಿದರು. ಇಂಧನ ಇಲಾಖೆ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಜಿ.ಕುಮಾರನಾಯಕ್, ಎಲ್ಲ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು, ತಾಂತ್ರಿಕ ನಿರ್ದೇಶಕರು , ಮುಖ್ಯ ಎಂಜಿನಿಯರ್ ಗಳು ಭಾಗವಹಿಸಿದ್ದರು.
ಇ- ಗವರ್ನೆನ್ಸ್ ಕಾರ್ಯದರ್ಶಿಗೆ ಕರೆ ಮಾಡಿ ಕರೆಸಿದ ಸಚಿವ :
ಅಮೃತ ಜ್ಯೋತಿ ಅನುಷ್ಠಾನಕ್ಕೆ ಇ- ಗವರ್ನೆನ್ಸ್ ರೂಪಿಸಿರುವ ಸಾಫ್ಟ್ ವೇರ್ ನಿಂದ ತಾಂತ್ರಿಕ ಅಡಚಣೆಯುಂಟಾಗುತ್ತಿದೆ ಎಂದು ಅಧಿಕಾರಿಗಳು ಅಳಲು ತೋಡಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಇ- ಗವರ್ನೆನ್ಸ್ ಕಾರ್ಯದರ್ಶಿ ಪೊನ್ನುರಾಜು ಅವರಿಗೆ ಕರೆ ಮಾಡಿದ ಸಚಿವ ಸುನೀಲ್ ಕುಮಾರ್ ತಕ್ಷಣ ಸಭೆಗೆ ಹಾಜರಾಗುವಂತೆ ಸೂಚನೆ ನೀಡಿದರು.
ಕೆಲವೇ ನಿಮಿಷಗಳಲ್ಲಿ ಬೆಸ್ಕಾಂ ಬೆಳಕು ಭವನಕ್ಕೆ ಆಗಮಿಸಿದ ಪೊನ್ನುರಾಜ್ ಅವರಿಗೆ ತಾಂತ್ರಿಕ ಸಮಸ್ಯೆ ಸರಳಗೊಳಿಸುವಂತೆ ಸೂಚನೆ ನೀಡಿದರು. ಎರಡುಮೂರು ಹಂತದಲ್ಲಿ ಸರಳೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ಒಟಿಪಿ ಬದಲು ಆಧಾರ್ ಕಾರ್ಡ್ ನಲ್ಲಿ ಇರಿವ ಹೆಸರನ್ನು ಆಧರಿಸಿ ಫಲಾನುಭವಿಗಳ ಆಯ್ಕೆ ಮಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದಕ್ಕೆ ಸಂಬಂಧಪಟ್ಟಂತೆ ಡೆಮೊ ನಡೆಯುತ್ತಿದೆ. ಕೆಲವೇ ದಿನದಲ್ಲಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ ಎಂದು ಪೊನ್ನುರಾಜ್ ವಿವರಣೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.