ಅಕಾಡೆಮಿ, ಪ್ರಾಧಿಕಾರದ ಅಧ್ಯಕ್ಷರ ಅವಧಿ ಪೂರ್ಣ: ಹೊಸಬರಿಗೆ ಮಣೆ ಹಾಕುವ ಸಾಧ್ಯತೆ
Team Udayavani, Oct 13, 2022, 10:00 PM IST
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಗೆ ಬರುವ 14ಅಕಾಡೆಮಿ ಮತ್ತು 2 ಪ್ರಾಧಿಕಾರದ ಅಧ್ಯಕ್ಷರ ಮತ್ತು ಸದಸ್ಯರ ಮೂರು ವರ್ಷದ ಅವಧಿ ಶುಕ್ರವಾರಕ್ಕೆ (ಇಂದಿಗೆ) ಪೂರ್ಣಗೊಳ್ಳಲಿದ್ದು ಆ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡುವ ಸಾಧ್ಯತೆ ಇದೆ.
ಆದರೆ, ಯಕ್ಷಗಾನ ಅಕಾಡೆಮಿ ಮತ್ತು ಬಯಲಾಟ ಅಕಾಡೆಮಿಗೆ ಹೊಸ ಅಧ್ಯಕ್ಷರು ಇತ್ತೀಚೆಗಷ್ಟೆ ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಅವಧಿ ಪೂರೈಸಲು ಅವಕಾಶ ಮಾಡಿಕೊಡುವ ನಿರೀಕ್ಷೆಯಿದೆ. ಇತ್ತೀಚೆಗೆ ಕೆಲವು ಅಕಾಡೆಮಿಗೆ ಹೊಸಬರನ್ನು ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಿದೆ. ಅವರನ್ನೂ ಮುಂದುವರಿಸುವ ಸಾಧ್ಯತೆ ಇದೆ.
ಯಕ್ಷಗಾನ ಅಕಾಡೆಮಿ, ಬಯಲಾಟ ಅಕಾಡೆಮಿ ಮತ್ತು ಲಂಬಾಣಿ ಅಕಾಡೆಮಿ ಹೊರತು ಪಡಿಸಿ ಉಳಿದ ಎಲ್ಲ ಅಕಾಡೆಮಿ ಮತ್ತು ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರು ಮತ್ತು ಸದಸ್ಯರನ್ನು ಸರ್ಕಾರ ಹೊಸದಾಗಿ ನೇಮಕ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತಕುಮಾರ್, ಶುಕ್ರವಾರಕ್ಕೆ ನಮ್ಮ ಆಡಳಿತ ಅವಧಿ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರದ ಹೊಸಬರಿಗೆ ಮಣೆ ಹಾಕುವ ಸಾಧ್ಯತೆ ಇದೆ. ನಮ್ಮ ಆಡಳಿತ ಅವಧಿಯಲ್ಲಿ ಕಾರ್ಯ ತೃಪ್ತಿ ತಂದಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.