ಸೌಲಭ್ಯ ಕೊಡದ ಹಿಂದಿನ ಸರಕಾರಗಳು: ಪ್ರಧಾನಿ
Team Udayavani, Oct 14, 2022, 7:20 AM IST
ಶಿಮ್ಲಾ: ದೇಶದಲ್ಲಿ ಈ ಹಿಂದೆ ಇದ್ದ ಸರಕಾರಗಳು ಲಭ್ಯವಿದ್ದ ಸೌಲಭ್ಯಗಳನ್ನು ಜನರಿಗೆ ತಲುಪಿಸಲೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.
ಹಿಮಾಚಲ ಪ್ರದೇಶದ ಉನಾ ನಗರದಲ್ಲಿ ಗುರುವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಕೆಲವು ಯೋಜನೆಗಳನ್ನು ಲೋಕಾರ್ಪಣೆಗೊಳಿಸಿದ ಮೋದಿ ಈ ಮಾತುಗಳನ್ನಾಡಿದ್ದಾರೆ. “ನಮ್ಮ ಸರಕಾರ 21ನೇ ಶತಮಾನದ ಸೌಲಭ್ಯಗಳನ್ನು ಕೊಡುವುದರ ಜತೆ ಯಲ್ಲಿ ಈ ಹಿಂದಿನ ಸರಕಾರ ಕೊಡದೇ ಉಳಿಸಿಕೊಂಡ 20ನೇ ಶತಮಾನದ ಸೌಲಭ್ಯಗಳನ್ನೂ ಕೊಡುತ್ತಿದೆ’ ಎಂದು ಹೇಳಿದರು. ನೂತನ ಭಾರತವು ಹಿಂದಿನ ಸವಾಲು ಗಳನ್ನು ಎದುರಿಸುವ ಜತೆಯಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದೂ ಅವರು ಹೇಳಿದರು.
ಲೋಕಾರ್ಪಣೆ -ಶಂಕುಸ್ಥಾಪನೆ: ಇದೇ ವೇಳೆ ಪ್ರಧಾನಿ ಅವರು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ 3ನೇ ಹಂತವನ್ನು ಹಿಮಾಚಲದಲ್ಲಿ ಆರಂಭಿಸಿ ದ್ದಾರೆ. ಈ ಹಂತದಲ್ಲಿ ಗ್ರಾಮೀಣ ಭಾಗಗಳಲ್ಲಿ 3,125ಕಿ.ಮೀ ರಸ್ತೆ ನಿರ್ಮಿ ಸಲಾಗುವುದು. ಕಳೆದ 8 ವರ್ಷಗಳಲ್ಲಿ ಹಿಮಾಚಲದ ಗ್ರಾಮೀಣ ಭಾಗಗಳಲ್ಲಿ 12,000ಕಿ.ಮೀ ರಸ್ತೆ ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದರು. 2,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಬಲ್ಕ್ ಡ್ರಗ್ ಪಾರ್ಕ್ಗೂ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಪಾರ್ಕ್ 10,000 ಕೋಟಿ ಹೂಡಿಕೆ ಯನ್ನು ಆಕರ್ಷಿಸಲಿದೆ ಎಂದು ಹೇಳಿದ್ದಾರೆ.
4ನೇ ವಂದೇ ಭಾರತ್ ಹಳಿಗೆ: ಉನಾ ರೈಲ್ವೇ ನಿಲ್ದಾಣದಿಂದ ಹೊಸದಿಲ್ಲಿಗೆ ಸಂಚರಿಸುವ ವಂದೇ ಭಾರತ್ ರೈಲಿಗೆ ಪ್ರಧಾನಿ ಗುರುವಾರ ಹಸುರು ನಿಶಾನೆ ತೋರಿದ್ದಾರೆ. ದೇಶದ 4ನೇ ವಂದೇ ಭಾರತ್ ರೈಲಾಗಿರುವುದು. ಇದು ಬುಧವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ. ಈ ರೈಲಿ ನಿಂದಾಗಿ ರಾಜ್ಯದಲ್ಲಿ ಪ್ರವಾಸೋದ್ಯ ಮಕ್ಕೆ ಉತ್ತೇಜನ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.