ಶುಕ್ರವಾರದ ರಾಶಿ ಫಲ; ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ, ಸಾಲಗಾರರ ಬಲೆಗೆ ಸಿಲುಕದಿರಿ
Team Udayavani, Oct 14, 2022, 7:00 AM IST
ಮೇಷ: ಕ್ರಯ ವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ. ಸಂದರ್ಭೋಚಿತ ಗುಣ ಪವೃತ್ತಿ. ಅನೇಕ ವಿಚಾರಗಳಲ್ಲಿ ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹೆಚ್ಚಿದ ಪರಿಶ್ರಮ. ಹಠ ಮಾಡದೇ ತಾಳ್ಮೆಯಿಂದ ಕಾರ್ಯವೆಸಗಿ.
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಆರ್ಥಿಕ ಸುದೃಢತೆ. ಉತ್ತಮ ವಾಕ್‌ಚತುರತೆಯಿಂದ ಜನಮನ್ನಣೆ. ಸ್ತ್ರೀಪುರುಷರು ಜೀವನದಲ್ಲಿ ಪರಸ್ಪರ ಪ್ರೋತ್ಸಾಹಿಸಿ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರದಲ್ಲಿ ಖರ್ಚು ವೆಚ್ಚ ಅಧಿಕ.
ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಗುರುಹಿರಿಯರ ಆಜ್ಞಾಪಾಲನೆಯಲ್ಲಿ ಆಸಕ್ತಿ. ಮಕ್ಕಳ ನಿಮಿತ್ತ ಹೆಚ್ಚಿನ ಶ್ರಮ.
ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಆಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ.
ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರೀ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುದಾರಣೆ.
ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ. ಸುದೃಢ ಆರೋಗ್ಯ.
ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಕಾರ್ಯ ಸಾಧಿಸಿದ ಸಂತೋಷ. ನಿರàಕ್ಷಿತ ಸ್ಥಾನ ಗೌರವಾದಿ ಲಭ್ಯ. ದೂರದ ವ್ಯವಹಾರಗಳಿಂದ ಅಧಿಕ ಧನಾರ್ಜನೆ. ಉತ್ತಮ ವಾಕ್‌ಚತುರತೆ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಗೆ ಹೆಚ್ಚಿದ ಜವಾಬ್ದಾರಿ.
ವೃಶ್ಚಿಕ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಉದಾಸೀನ ಪ್ರವೃತ್ತಿ ಸಲ್ಲದು. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿ ಬರುವುದು. ಗೃಹೋಪಕರಣಗಳ ಸಂಗ್ರಹ.
ಧನು: ಸರಿಯಾದ ನಿಯಮ ಪಾಲನೆಯಿಂದ ಆರೋಗ್ಯ ವೃದ್ಧಿ. ಉತ್ತಮ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಸಣ್ಣ ಪ್ರಯಾಣ ಯೋಗ. ಸಾಂಸಾರಿಕ ಸುಖ ಮಧ್ಯಮ. ವಿದ್ಯಾರ್ಥಿಗಳು ಪರರ ಸಹಾಯ ಪಡೆದು ನಿರೀಕ್ಷಿತ ಗುರಿ ಸಾಧಿಸಿರಿ. ಧಾರ್ಮಿಕ ಕಾರ್ಯಗಳಿಗೆ ಹೆಚ್ಚಿನ ಶ್ರಮ.
ಮಕರ: ಆರೋಗ್ಯ ಸುಧಾರಣೆ. ದೂರದ ವ್ಯವಹಾರಗಳಿಂದ ಉತ್ತಮ ಧನಾರ್ಜನೆ. ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಬಗ್ಗೆ ಹೆಚ್ಚಿದ ಗಮನ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಒದಗುವ ಸಂಭವ.
ಕುಂಭ: ದೀರ್ಘ ಪ್ರಯಾಣದಲ್ಲಿ ನಿರೀಕ್ಷಿತ ಸಫಲತೆ. ಉತ್ತಮ ಸ್ಥಾನ ಗೌರವಾದಿ ಲಭ್ಯ. ಅಧಿಕ ಧನಾರ್ಜನೆ. ನೂತನ ಮಿತ್ರರ ಭೇಟಿ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ದಾಂಪತ್ಯ ಸುಖ ಉತ್ತಮ.
ಮೀನ: ಹಣಕಾಸಿನ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ದಾಖಲಾತಿಯೊಂದಿಗೆ ವ್ಯವಹರಿಸಿ. ದೂರದ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.