ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ 40 ದಿನಗಳ ಪೆರೋಲ್
ಆದಂಪುರ ಉಪಚುನಾವಣೆಗೆ ಮುನ್ನ ಈ ಕ್ರಮ....
Team Udayavani, Oct 14, 2022, 2:15 PM IST
ಚಂಡೀಗಢ: ಹರಿಯಾಣದ ಸುನಾರಿಯಾ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.
ಇದನ್ನೂ ಓದಿ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಖರ್ಗೆ ಪರ ಪ್ರಚಾರ ಆರಂಭಿಸಿದ ಕಾಂಗ್ರೆಸ್ ನಾಯಕರು
ನವೆಂಬರ್ 3 ರಂದು ನಡೆಯಲಿರುವ ಆದಂಪುರ ಉಪಚುನಾವಣೆಗೆ ಮುನ್ನ ಈ ಕ್ರಮ ಕೈಗೊಳ್ಳಲಾಗಿದೆ. ಡೇರಾ ಮುಖ್ಯಸ್ಥ ಈ ಹಿಂದೆ ಜೂನ್‌ನಲ್ಲಿ ತಿಂಗಳ ಪೆರೋಲ್‌ನಲ್ಲಿ ಜೈಲಿನಿಂದ ಹೊರಬಂದಿದ್ದು, ಅದಕ್ಕೂ ಮೊದಲು, ಫೆಬ್ರವರಿಯಲ್ಲಿ ಅವರಿಗೆ ಮೂರು ವಾರಗಳ ಫರ್ಲೋ ನೀಡಲಾಗಿತ್ತು.
ಡೇರಾದ ಪ್ರಧಾನ ಕಚೇರಿ ಇರುವ ಸಿರ್ಸಾದಲ್ಲಿರುವ ತನ್ನ ಆಶ್ರಮದಲ್ಲಿ ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದು, ಆಗಸ್ಟ್ 2017 ರಲ್ಲಿ ಪಂಚಕುಲದ ವಿಶೇಷ ಸಿಬಿಐ ನ್ಯಾಯಾಲಯವು ದೋಷಿ ಎಂದು ಘೋಷಿಸಿತ್ತು.
2002 ರಲ್ಲಿ ಡೇರಾ ಮ್ಯಾನೇಜರ್ ರಂಜಿತ್ ಸಿಂಗ್ ಅವರನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಅವರು ಕಳೆದ ವರ್ಷ ಇತರ ನಾಲ್ವರೊಂದಿಗೆ ಅಪರಾಧಿ ಎಂದು ಘೋಷಿಸಲಾಗಿತ್ತು. 16 ವರ್ಷಗಳ ಹಿಂದೆ ಪತ್ರಕರ್ತನ ಹತ್ಯೆಗೆ ಡೇರಾ ಮುಖ್ಯಸ್ಥ ಮತ್ತು ಇತರ ಮೂವರನ್ನು 2019 ರಲ್ಲಿ ಶಿಕ್ಷೆ ವಿಧಿಸಲಾಗಿತ್ತು.
ಆಗಸ್ಟ್‌ನಲ್ಲಿ ಕುಲದೀಪ್ ಬಿಷ್ಣೋಯ್ ಅವರು ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.