ಜ್ಞಾನವಾಪಿ ಮಸೀದಿ ಪ್ರಕರಣ : ಕಾರ್ಬನ್ ಡೇಟಿಂಗ್ ಗೆ ಕೋರ್ಟ್ ನಕಾರ
Team Udayavani, Oct 14, 2022, 3:03 PM IST
ವಾರಾಣಸಿ: ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗ ರೂಪದ ಕುರಿತಾಗಿ ಕಾರ್ಬನ್ ಡೇಟಿಂಗ್ ಪರೀಕ್ಷೆ ನಡೆಸಬೇಕು ಎಂಬ ಮನವಿಯನ್ನು ವಾರಾಣಸಿ ಜಿಲ್ಲಾ ಕೋರ್ಟ್ ಶುಕ್ರವಾರ (ಅ.14) ತಳ್ಳಿ ಹಾಕಿದೆ.
ಮಸೀದಿ ಸಂಕೀರ್ಣದಲ್ಲಿರುವ ಶಿವಲಿಂಗದ ಕಾರ್ಬನ್ ಡೇಟಿಂಗ್ ಮತ್ತು ವೈಜ್ಞಾನಿಕ ತನಿಖೆಗೆ ಕೋರಿ ಹಿಂದೂ ಕಡೆಯ ಬೇಡಿಕೆಯನ್ನು ವಾರಾಣಸಿ ನ್ಯಾಯಾಲಯ ತಿರಸ್ಕರಿಸಿ ತೀರ್ಪು ನೀಡಿದೆ.
ಇದನ್ನೂ ಓದಿ : ಜ್ಞಾನವ್ಯಾಪಿ ಮಸೀದಿ: ಕಾರ್ಬನ್ ಡೇಟಿಂಗ್ ಪರೀಕ್ಷೆ ಎಂದರೇನು?
ನ್ಯಾಯಾಲಯದ ಆದೇಶದ ನಂತರ ವಿಡಿಯೋಗ್ರಫಿ ಸಮೀಕ್ಷೆಯ ಬಳಿಕ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಐದು ಹಿಂದೂ ಅರ್ಜಿದಾರರು ಮಸೀದಿಯೊಳಗಿನ ರಚನೆಯ ಕಾರ್ಬನ್ ಡೇಟಿಂಗ್ ಗೆ ಕೋರಿ ಅರ್ಜಿ ಸಲ್ಲಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಈ ಹಿಂದೆ ಮುಸ್ಲಿಂ ಪರ ವಾದವನ್ನು ಆಲಿಸಿತ್ತು. ಜ್ಞಾನವಾಪಿ ಮಸೀದಿ ಸಮಿತಿಯು ಕಾರ್ಬನ್ ಡೇಟಿಂಗ್ ಮನವಿಯನ್ನು ವಿರೋಧಿಸಿತ್ತು.
ಹೈಕೋರ್ಟ್‌ಗೆ ಮೇಲ್ಮನವಿ
ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಿದ್ದ ನಮ್ಮ ಬೇಡಿಕೆಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ. ಆದೇಶ ಪ್ರತಿಗಾಗಿ ನಾವು ಕಾಯುತ್ತಿದ್ದೇವೆ. ಹೈಕೋರ್ಟ್‌ಗೆ ಹೋಗುವ ಆಯ್ಕೆಯು ನಮ್ಮ ಮಂದಿದೆ. ನಾವು ನಮ್ಮ ಅಭಿಪ್ರಾಯವನ್ನು ಹೈಕೋರ್ಟ್‌ನ ಮುಂದೆ ಇಡುತ್ತೇವೆ ಎಂದು ವಕೀಲ ಮದನ್ ಮೋಹನ್ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
India-China Border: ಉಭಯ ಸೇನಾ ವಾಪಸಾತಿ ಬೆನ್ನಲ್ಲೇ ಎಲ್‌ಎಸಿಯಲ್ಲಿ ಗಸ್ತು ಪುನಾರಂಭ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
Rocket launcher: ತಮಿಳುನಾಡಿನಲ್ಲಿ ಆತಂಕ ಸೃಷ್ಟಿಸಿದ ರಾಕೆಟ್ ಲಾಂಚರ್… ಪೊಲೀಸರಿಂದ ತನಿಖೆ
MUST WATCH
ಹೊಸ ಸೇರ್ಪಡೆ
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ
Horosocpe: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಲಾಭ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.