ದಾದಿಯರ ಕುರಿತಾದ ‘ಸೆಪ್ಟೆಂಬರ್‌ 13′ ಸಿನಿಮಾ ನ.4ಕ್ಕೆ ರಿಲೀಸ್

Team Udayavani, Oct 14, 2022, 4:10 PM IST

Kannada cinema September 13

ಕೋವಿಡ್‌ ಸಂಕಷ್ಟದ ಸಮಯದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ನರ್ಸ್‌ಗಳು ಮಾಡುತ್ತಿದ್ದ ನಿಸ್ವಾರ್ಥ ಸೇವೆಯನ್ನು ಕಣ್ಣಾರೆ ನೋಡಿರುತ್ತೀರಿ. ಈಗ ಇದೇ ನರ್ಸ್‌ಗಳ ಸೇವೆಯನ್ನು ಕುರಿತಾದ ಸಿನಿಮಾವೊಂದು ತೆರೆಗೆ ಬರಲು ಸಿದ್ಧವಾಗಿದೆ. ಅಂದಹಾಗೆ, ಆ ಸಿನಿಮಾದ ಹೆಸರು “ಸೆಪ್ಟೆಂಬರ್‌ 13′.

ಕೋವಿಡ್‌ ಸಂಕಷ್ಟದ ಸಮಯದಲ್ಲಿ ನರ್ಸ್‌ಗಳು ಎದುರಿಸಿದ ಕಷ್ಟಗಳು, ಅವರ ತ್ಯಾಗ ಮತ್ತು ಸಾಧನೆಯ ಮೇಲೆ ಬೆಳಕು ಚೆಲ್ಲಲು ಹೊರಟಿರುವ “ಸೆಪ್ಟೆಂಬರ್‌ 13′ ಸಿನಿಮಾ ಇದೇ ನವೆಂಬರ್‌ 4ರಂದು ತೆರೆಗೆ ಬರುತ್ತಿದೆ.

“ರೂಬಿ ಫಿಲಂಸ್‌’ ಬ್ಯಾನರ್‌ನಲ್ಲಿ ತಯಾರಾಗಿರುವ “ಸೆಪ್ಟೆಂಬರ್‌ 13′ ಸಿನಿಮಾಕ್ಕೆ ಐವಾನ್‌ ನೆಗ್ಲಿ ಕಥೆ ಬರೆದು ನಿರ್ಮಾಣ ಮಾಡಿದ್ದಾರೆ. ಯುನೆಸ್ಕೋ ಸಂಬಂಧಿಸಿದಂತೆ ಹಲವು ಡಾಕ್ಯುಮೆಂಟರಿಗಳನ್ನು ನಿರ್ದೇಶಿಸಿದ ಅನುಭವವಿರುವ, ಡಾ. ರಾಜ ಬಾಲಕೃಷ್ಣನ್‌ “ಸೆಪ್ಟೆಂಬರ್‌ 13′ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

“ಸೆಪ್ಟೆಂಬರ್‌ 13′ ಚಿತ್ರದಲ್ಲಿ ಶ್ರೇಯಾ ರಿಧೀಬನ್‌, ಚಿಂತನ್‌ ರಾವ್‌ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಜೈ ಜಗದೀಶ್‌, ವಿನಯಾ ಪ್ರಸಾದ್‌, ಯಮುನಾ ಶ್ರೀನಿಧಿ, ನಾಗೇಶ್‌ ಮಯ್ಯ ಸೇರಿದಂತೆ ಸುಮಾರು 60ಕ್ಕೂ ಹೆಚ್ಚು ಕಲಾವಿದರು “ಸೆಪ್ಟೆಂಬರ್‌ 13′ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ

ಅಭಿನಯಿಸಿದ್ದಾರೆ. ಮಾಜಿ ಸಚಿವ ಯು. ಟಿ ಖಾದರ್‌ ಕೂಡ ಚಿತ್ರದಲ್ಲಿ ಶಾಸಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದು ವಿಶೇಷವೆಂದರೆ, “ಸೆಪ್ಟೆಂಬರ್‌ 13′ ಸಿನಿಮಾದ ಗೀತೆಯೊಂದರಲ್ಲಿ ಸುಮಾರು 100ಕ್ಕೂ ಹೆಚ್ಚು ನರ್ಸ್‌ಗಳು ಹೆಜ್ಜೆಹಾಕಿ, ತೆರೆಮೇಲೆ ಕಾಣಿಸಿಕೊಂಡಿದ್ದಾರೆ.

“ಕನ್ನಡದಲ್ಲಿ ಇಲ್ಲಿಯವರೆಗೆ ಬೇರೆ ಬೇರೆ ಕ್ಷೇತ್ರದಲ್ಲಿ ಕಷ್ಟಪಟ್ಟವರ, ಸಾಧನೆ ಮಾಡಿದವರ ನೂರಾರು ಸಿನಿಮಾಗಳು ಬಂದಿವೆ. ಆದರೆ ನರ್ಸಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಿದವರ, ಸಾಧಕರ ಕುರಿತು ಯಾವುದೇ ಸಿನಿಮಾಗಳು ಬಂದಿಲ್ಲ. ಹಾಗಾಗಿ ನರ್ಸ್‌ಗಳ ನಿಸ್ವಾರ್ಥ ಸೇವೆ ಮತ್ತು ಸಾಧನೆಯನ್ನು ಪರಿಚಯಿಸುವುದಕ್ಕಾಗಿ ಈ ಸಿನಿಮಾ ನಿರ್ಮಿಸಿದ್ದೇವೆ. ಇಡೀ ಕುಟುಂಬ ಕುಳಿತು ನೋಡಬಹುದಾದ ಜೊತೆಗೊಂದು ಸಂದೇಶ ಇರುವಂಥ ಸಿನಿಮಾ ಇದಾಗಿದೆ’ ಎನ್ನುವುದು ಚಿತ್ರತಂಡದ ಒಕ್ಕೊರಲ ಮಾತು.

ಈಗಾಗಲೇ “ಸೆಪ್ಟೆಂಬರ್‌ 13′ ಸಿನಿಮಾದ ಮೊದಲ ಪೋಸ್ಟರ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌, ಚಿತ್ರತಂಡದ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಸದ್ಯ ತನ್ನ ಪೋಸ್ಟರ್‌ ಬಿಡುಗಡೆ ಮೂಲಕ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ “ಸೆಪ್ಟೆಂಬರ್‌ 13′ ಚಿತ್ರವನ್ನು ಇದೇ ನವೆಂಬರ್‌ 4ರಂದು ತೆರೆಮೇಲೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಬಹಳ ಸಮಯದ ನಂತರ ವೈದ್ಯರು ಮತ್ತು ನರ್ಸಗಳ ವೃತ್ತಿ ಜೀವನವನ್ನು ತೆರೆಮೇಲೆ ತರಲು ಹೊರಟಿರುವ “ಸೆಪ್ಟೆಂಬರ್‌ 13′ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕರ ಮನ ಮತ್ತು ಗಮನ ಸೆಳೆಯಲಿದೆ ಎಂಬುದು ನವೆಂಬರ್‌ ಮೊದಲವಾರ ಗೊತ್ತಾಗಲಿದೆ.

ಟಾಪ್ ನ್ಯೂಸ್

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Vijaya Bhaskar: ಹೊಸತನಕ್ಕೆ ಹಂಬಲಿಸಿದ ಸ್ವರ ಸಾಮ್ರಾಟ

Karki kananda movie

Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.