ರಿಷಬ್, ನಿಮ್ಮ ಬಗ್ಗೆ ನೀವು ತುಂಬಾ ಹೆಮ್ಮೆಪಡಬೇಕು..: ಕಾಂತಾರ ಮೆಚ್ಚಿದ ನಟ ಧನುಷ್
Team Udayavani, Oct 14, 2022, 4:57 PM IST
ಸೆ.30ರಂದು ತೆರೆಗೆ ಬಂದ ‘ಕಾಂತಾರ’ ಸಿನಿಮಾ ಇದೀಗ ದೇಶದಲ್ಲಿ ಸಂಚಲನ ಉಂಟು ಮಾಡಿದೆ. ಸ್ಯಾಂಡಲ್ ವುಡ್ ನಲ್ಲಿ ಸೂಪರ್ ಹಿಟ್ ಆಗಿರುವ ರಿಷಬ್ ಶೆಟ್ಟಿಯವರ ‘ಕಾಂತಾರ’ ಇದೀಗ ಬೇರೆ ಭಾಷೆಗಳಲ್ಲೂ ಡಬ್ ಆಗಿ ಬಿಡುಗಡೆಯಾಗುತ್ತಿದೆ.
‘ಕಾಂತಾರ’ ಚಿತ್ರವನ್ನು ನೋಡಿದ ಸ್ಟಾರ್ ಗಳು ಹೊಗಳಿಕೆಯ ಮಾತುಗಳನ್ನಾಡುತ್ತಿದ್ದಾರೆ. ಕಿಚ್ಚ ಸುದೀಪ್ ಅವರು ಚಿತ್ರ ನೋಡಿ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರಿಗೆ ಪ್ರೀತಿಯ ಪತ್ರ ಬರೆದಿದ್ದರು. ಬಾಹುಬಲಿ ಸ್ಟಾರ್ ಪ್ರಭಾಸ್ ಕೂಡಾ ಚಿತ್ರ ನೋಡಿ ಸಂತಸ ವ್ಯಕ್ತ ಪಡಿಸಿದ್ದರು. ಇದೀಗ ತಮಿಳಿನ ಖ್ಯಾತ ನಟ ಧನುಷ್ ಅವರು ಚಿತ್ರವನ್ನು ಕಂಡು ಮೆಚ್ಚುಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಕಳ್ಳ..ಕಳ್ಳ..; ಪಾಕ್ ಹಣಕಾಸು ಸಚಿವನಿಗೆ ಅಮೆರಿಕದಲ್ಲಿ ಘೇರಾವ್ !
ಈ ಬಗ್ಗೆ ಟ್ವೀಟ್ ಮಾಡಿರುವ ಧನುಷ್, “ಕಾಂತಾರ.. ಅದ್ಭುತ! ನೋಡಲೇ ಬೇಕಾದ ಸಿನಿಮಾ. ರಿಷಬ್ ಶೆಟ್ಟಿಯವರೆ ನಿಮ್ಮ ಬಗ್ಗೆ ನೀವು ತುಂಬಾ ಹೆಮ್ಮೆ ಪಡಬೇಕು. ಹೊಂಬಾಳೆ ಫಿಲಂಸ್ ಗೆ ಅಭಿನಂದನೆಗಳು. ನಿಮ್ಮ ಮಿತಿಯನ್ನು ತಳ್ಳುತ್ತಲೇ ಇರಿ. ಚಿತ್ರದ ಎಲ್ಲಾ ನಟರು ಮತ್ತು ತಂತ್ರಜ್ಞರಿಗೆ ಒಂದು ದೊಡ್ಡ ಹಗ್. ದೇವರು ಒಳ್ಳೆಯದು ಮಾಡಲಿ” ಎಂದರು.
ತೆಲುಗು ನಟ ರಾಣಾ ದಗ್ಗುಬಾಟಿ ಕೂಡಾ ‘ಕಾಂತಾರ’ ಚಿತ್ರವನ್ನು ನೋಡಿ ಮೆಚ್ಚುಕೊಂಡಿದ್ದಾರೆ. “ ಕಾಂತಾರ ಎಂತಹ ಅಸಾಧಾರಣ ಚಿತ್ರ! ಚಿತ್ರದ ಭಾಗವಾಗಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು! ರಿಷಬ್ ಶೆಟ್ಟಿಯವರೇ ನೀವು ನಿಜವಾಗಿಯೂ ಸ್ಫೂರ್ತಿ!” ಎಂದು ಟ್ವೀಟ್ ಮಾಡಿದ್ದಾರೆ.
Kannada’s @shetty_rishab and @hombalefilms are on ??? what an extraordinary film #Kantara is!! Congratulations to each and everyone who was part of the film! @shetty_rishab truly inspired!!? pic.twitter.com/ypZcsMLeCh
— Rana Daggubati (@RanaDaggubati) October 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.