ಸಿಡ್ನಿ: ಭಾರತದ ಪಿಎಚ್‌ಡಿ ವಿದ್ಯಾರ್ಥಿಗೆ 11 ಬಾರಿ ಚಾಕು ಇರಿತ ; ಸ್ಥಿತಿ ಗಂಭೀರ
ಅಧಿಕಾರಿಗಳೊಂದಿಗೆ ಭಾರತೀಯ ಹೈಕಮಿಷನ್ ನಿಕಟ ಸಂಪರ್ಕ...
Team Udayavani, Oct 14, 2022, 6:07 PM IST
ಲಕ್ನೋ /ಸಿಡ್ನಿ : ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಮೇಲೆ 11 ಬಾರಿ ಚಾಕುವಿನಿಂದ ಇರಿಯಲಾಗಿದ್ದು,ಆತ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ಕುಟುಂಬ ಇದೊಂದು ದ್ವೇಷದ ದಾಳಿ ಎಂದು ಆರೋಪಿಸಿದೆ.
ಸಿಡ್ನಿಯ ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿದ್ದ ಐಐಟಿ ಪದವೀಧರ ಶುಭಂ ಗರ್ಗ್ (28) ಅವರ ಮೇಲೆ ಅಕ್ಟೋಬರ್ 6 ರಂದು ದಾಳಿ ನಡೆದಿತ್ತು.ದಾಳಿ ನಡೆದ ಒಂದು ವಾರದ ನಂತರ ಉತ್ತರ ಪ್ರದೇಶದ ಆಗ್ರಾದಲ್ಲಿರುವ ಅವರ ಕುಟುಂಬಕ್ಕೆ ಇಂದು ವೀಸಾ ನೀಡಲಾಗಿದೆ. ಶುಭಂ ಸಹೋದರನಿಗೆ ಆಸ್ಟ್ರೇಲಿಯಾಕ್ಕೆ ತೆರಳಲು ವೀಸಾ ಸೌಲಭ್ಯ ಕಲ್ಪಿಸುವಂತೆ ಸರಕಾರಕ್ಕೆ ಮನವಿ ಮಾಡಿದ್ದರು.
ಐಐಟಿ-ಮದ್ರಾಸ್‌ನಲ್ಲಿ ಪದವಿ ಪಡೆದ ನಂತರ ಶುಭಂ ಸೆಪ್ಟೆಂಬರ್ 1 ರಂದು ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಅಕ್ಟೋಬರ್ 6ರಂದು ರಾತ್ರಿ 10.30ರ ಸುಮಾರಿಗೆ ಎಟಿಎಂನಿಂದ ಹಣದೊಂದಿಗೆ ವಾಪಸಾಗುತ್ತಿದ್ದಾಗ ವ್ಯಕ್ತಿಯೊಬ್ಬ ಹಣಕ್ಕೆ ಬೇಡಿಕೆಯಿಟ್ಟು ಚಾಕು ತೋರಿಸಿ ಬೆದರಿಸಿದ್ದು, ಹಣ ನೀಡಲು ನಿರಾಕರಿಸಿದಾಗ ದಾಳಿಕೋರ ಪದೇ ಪದೇ ಇರಿದು ಓಡಿಹೋಗಿದ್ದಾನೆ.
ಭಾರತೀಯ ಹೈಕಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. “ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮತ್ತು ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ನಾವು ನಿರೀಕ್ಷಿಸುತ್ತೇವೆ” ಎಂದು ಹೇಳಿದ್ದಾರೆ.
ಶುಭಂ ಅವರ ಮುಖ, ಎದೆ ಮತ್ತು ಹೊಟ್ಟೆಗೆ ಹಲವು ಗಂಭೀರ ಗಾಯಗಳಾಗಿವೆ. ಆ ಸ್ಥಿತಿಯಲ್ಲಿ, ಅವರು ಹತ್ತಿರದ ಮನೆಗೆ ಹೋಗಲು ಯಶಸ್ವಿಯಾಗಿದ್ದು, ಆ ಬಳಿಕ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದು ಬಂದಿದೆ.
ನನ್ನ ಕರೆಗೆ ಉತ್ತರಿಸದಿದ್ದಾಗ ನಾವು ಅಕ್ಟೋಬರ್ 8 ರಂದು ವಿಷಯ ತಿಳಿದಿದೆ. ನಾವು ಅವರ ಸ್ನೇಹಿತರಿಗೆ ಕರೆ ಮಾಡಿ ದಾಳಿ ನಡೆದಿರುವ ಕುರಿತು ತಿಳಿದುಕೊಂಡಿದ್ದೇವೆ. 11 ಗಂಟೆಗಳ ಶಸ್ತ್ರಚಿಕಿತ್ಸೆಯಾಗಿದೆ. ನನ್ನ ಮಗನ ಚಿಕಿತ್ಸೆ ಮತ್ತು ನನ್ನ ಕಿರಿಯ ಮಗನಿಗೆ ವೀಸಾಕ್ಕೆ ಸಹಾಯ ಮಾಡಲು ನಾನು ಸರಕಾರವನ್ನು ಕೋರುತ್ತೇನೆ” ಎಂದು ಶುಭಂ ಅವರ ತಂದೆ ರಾಮ್ನಿವಾಸ್ ಗರ್ಗ್ ಹೇಳಿದರು.
ಕೃತ್ಯಕ್ಕೆ ಸಂಬಂಧಿಸಿ 27 ವರ್ಷದ ಯುವಕನನ್ನು ಬಂಧಿಸಲಾಗಿದ್ದು, ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ವರದಿಗಳ ಪ್ರಕಾರ ದಾಳಿಕೋರ ಶುಭಂ ಅವರಿಗೆ ತಿಳಿದಿರಲಿಲ್ಲ. ಇದು ಜನಾಂಗೀಯ ದಾಳಿ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ.
ಶುಭಂ ಅವರಿಗೆ ಹಲವು ಶಸ್ತ್ರಚಿಕಿತ್ಸೆಗಳ ಅಗತ್ಯವಿದೆ ಎಂದು ಅವರ ಸಹೋದರಿ ಕಾವ್ಯಾ ಗರ್ಗ್ ಟ್ವೀಟ್‌ಗಳಲ್ಲಿ ತುರ್ತು ವೀಸಾಗಳನ್ನು ನೀಡಿ ಕುಟುಂಬಕ್ಕೆ ಸಹಾಯ ಮಾಡುವಂತೆ ಸರಕಾರಕ್ಕೆ ಮನವಿ ಮಾಡಿದ್ದರು.
ಸರಕಾರ ಶುಭಂ ಅವರ ಕಿರಿಯ ಸಹೋದರನಿಗೆ ತುರ್ತು ವೀಸಾ ನೀಡಿದ ಬೆನ್ನಲ್ಲೇ ,”ಎಲ್ಲರಿಗೂ ಧನ್ಯವಾದಗಳು. ನನ್ನ ಸಹೋದರನ ವೀಸಾವನ್ನು ಇಂದು ಅನುಮೋದಿಸಲಾಗಿದೆ ಮತ್ತು ಅವರು ಮುಂದಿನ 2-3 ದಿನಗಳಲ್ಲಿ ಆಸ್ಟ್ರೇಲಿಯಾಕ್ಕೆ ಹೋಗುತ್ತಾರೆ ಧನ್ಯವಾದಗಳು ಡಾ.ಎಸ್. ಜೈಶಂಕರ್(ವಿದೇಶಾಂಗ ಸಚಿವ) ಮತ್ತು ಈ ಕಷ್ಟದ ಹಂತದಲ್ಲಿ ನಮ್ಮಸಹಾಯಕ್ಕೆ ಬಂದ ಇತರ ಜನರಿಗೆ. ದಯವಿಟ್ಟು ಅವನು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿ, ಅವನನ್ನು ಆಶೀರ್ವದಿಸಿ” ಎಂದು ಕಾವ್ಯಾ ಗರ್ಗ್ ಟ್ವೀಟ್ ಮಾಡಿದ್ದಾರೆ.
Thanks to all. My brother’s visa has been approved today and he will be heading to Australia in next 2-3 days Thanks @DrSJaishankar @meaMADAD @EthnicLinkGuru and the other people who come to us through anything in this hard phase.Please wish him for speedy recovery, bless him?
— Kavya Garg (@KGARG1205) October 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.