ನ.10ರಂದು ಚಾಲನೆ; ಮೈಸೂರು-ಬೆಂಗಳೂರಿಗೂ ವಂದೇ ಭಾರತ್ ಎಕ್ಸ್‌ಪ್ರೆಸ್
Team Udayavani, Oct 15, 2022, 7:15 AM IST
ನವದೆಹಲಿ/ಮೈಸೂರು: ಈಗಾಗಲೇ ಉತ್ತರ ಭಾರತದಲ್ಲಿ ಓಡುತ್ತಿರುವ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು, ನವೆಂಬರ್ 10ರಂದು ದಕ್ಷಿಣ ಭಾರತದಲ್ಲೂ ಸಂಚಾರ ಶುರು ಮಾಡಲಿದೆ.
ನ.10ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಓಡಾಟ ನಡೆಸಲಿದೆ ಎಂದು ದಕ್ಷಿಣ ರೈಲ್ವೆಯ ವ್ಯವಸ್ಥಾಪಕರು ಹೇಳಿದ್ದಾರೆ. ಒಟ್ಟಾರೆ 483 ಕಿ.ಮೀ. ಮಾರ್ಗದಲ್ಲಿ ಈ ರೈಲು ಓಡಾಟ ನಡೆಸಲಿದೆ.
ಅಂದ ಹಾಗೆ, ಇದು ದೇಶದ ಐದನೇ ವಂದೇ ಭಾರತ್ ರೈಲಿನ ಸಂಚಾರವಾಗಲಿದೆ. ಅಲ್ಲದೇ, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಸಂಚಾರವಾಗಲಿದೆ.
ಸದ್ಯ ಭಾರತದಲ್ಲಿ ನಾಲ್ಕು ವಂದೇಭಾರತ್ ರೈಲುಗಳು ಸಂಚಾರ ಮಾಡುತ್ತಿವೆ. ಅಂದರೆ ಈ ಮೊದಲೇ ಎರಡು ಓಡುತ್ತಿದ್ದು, ಇತ್ತೀಚೆಗಷ್ಟೇ ಮೂರು ಮತ್ತು ನಾಲ್ಕನೇ ರೈಲುಗಳನ್ನು ಇನ್ನೇನು ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಓಡಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಗುರುವಾರವಷ್ಟೇ ಹಿಮಾಚಲ ಪ್ರದೇಶದ ಉನಾದಲ್ಲಿ ಈ ರೈಲಿಗೆ ಚಾಲನೆ ನೀಡಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.