ಟರ್ಕಿ: ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ, 15ಕ್ಕೂ ಹೆಚ್ಚು ಮಂದಿ ಸಾವು, ರಕ್ಷಣಾ ಕಾರ್ಯ ಚುರುಕು
Team Udayavani, Oct 15, 2022, 7:51 AM IST
ಅಂಕಾರಾ : ಟರ್ಕಿಯ ಕಲ್ಲಿದ್ದಲು ಗಣಿಯಲ್ಲಿ ಸ್ಫೋಟಸಂಭವಿಸಿ ಹದಿನೈದಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು ಡಜನ್ ಗಟ್ಟಲೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಬಾರ್ಟಿನ್ ಪ್ರಾಂತ್ಯದ ಅಮ್ಸಾರಾ ನಗರದ ಗಣಿಯಲ್ಲಿ ಸ್ಫೋಟ ಸಂಭವಿಸಿದ್ದು. ಕಲ್ಲಿದ್ದಲು ಗಣಿಯಿಂದ ಇದುವರೆಗೆ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಟರ್ಕಿಯ ಆರೋಗ್ಯ ಸಚಿವ ಫಹ್ರೆಟಿನ್ ಕೋಕಾಸ್ ಹೇಳಿದ್ದಾರೆ. ಸ್ಫೋಟದ ಸಮಯದಲ್ಲಿ ಸುಮಾರು 110 ಜನರು ಗಣಿಯಲ್ಲಿ ಕೆಲಸ ಮಾಡುತ್ತಿದ್ದರು, ಅವರಲ್ಲಿ ಅರ್ಧದಷ್ಟು ಜನರು 300 ಮೀಟರ್ ಆಳದ ಗಣಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು ಇನ್ನೂ ಹಲವಾರು ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ಟರ್ಕಿಯ ವಿಪತ್ತು ನಿರ್ವಹಣಾ ಸಂಸ್ಥೆ ಹೇಳಿದೆ.
ದಹನಕಾರಿ ಅನಿಲಗಳಿಂದ ಉಂಟಾದ ಸ್ಫೋಟದಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕಲ್ಲಿದ್ದಲು ಗಣಿ 300 ರಿಂದ 350 ಮೀಟರ್ ಆಳದಲ್ಲಿದೆ, ಇದು ಅಪಾಯಕಾರಿ ಪ್ರದೇಶವಾಗಿದೆ.
ಇದನ್ನೂ ಓದಿ : ನಿಷೇಧ ಬಳಿಕದ ಮೊದಲ ಮತಾಂತರ ಪ್ರಕರಣ: ಹಿಂದೂ ಯುವತಿಯನ್ನು ಇಸ್ಲಾಂಗೆ ಮತಾಂತರಿಸಿದ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.