ಕಟ್ಟು ಕಿ.ಪ್ರಾ. ಶಾಲೆ ದುರಸ್ತಿಗೆ ಮುಂದಾದ ಊರವರು

ಪಂಚಾಯತ್‌ನಿಂದ ಸಿಗದ ತ್ವರಿತ ಸ್ಪಂದನೆ; ಪಿಡಿಒ ಕಾರ್ಯ ವೈಖರಿಗೆ ಸದಸ್ಯರ ಆಕ್ರೋಶ

Team Udayavani, Oct 15, 2022, 8:55 AM IST

1

ಹೆಮ್ಮಾಡಿ: ಕಟ್ಟು ಸರಕಾರಿ ಕಿ. ಪ್ರಾ. ಶಾಲೆಯ ಇದ್ದ ಎರಡು ಕೊಠಡಿಗಳಲ್ಲಿ ಒಂದು ಕೊಠಡಿಯ ಮಾಡು ಶಿಥಿಲಾವಸ್ಥೆಯಲ್ಲಿದ್ದು, ಅದರ ದುರಸ್ತಿಗೆ ಪಂಚಾಯತ್‌ನಿಂದ ತುರ್ತು ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಊರವರೇ ಸೇರಿ ದುರಸ್ತಿಗೆ ಮುಂದಾಗಿದ್ದಾರೆ.

ಹೆಮ್ಮಾಡಿ ಕಟ್ಟುವಿನ ಸರಕಾರಿ ಕಿ.ಪ್ರಾ. ಶಾಲೆಯ ಒಂದು ಕೊಠಡಿಯ ಮಾಡಿನ ಪಕ್ಕಾಸಿ ಮುರಿದು ಕುಸಿದು ಬೀಳುವುದರಲ್ಲಿ ಇತ್ತು. ಈಗ ಶಾಲೆಗೆ ದಸರಾ ರಜೆ ಇರುವುದರಿಂದ ಮತ್ತೆ ಶಾಲೆ ಆರಂಭವಾಗುವುದರ ಮೊದಲು ದುರಸ್ತಿ ನಡೆಸುವಂತೆ ಶಾಲೆಯ ವತಿಯಿಂದ ಪಂಚಾಯತ್‌ಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಪಂಚಾಯತ್‌ ನಿಂದ ತುರ್ತು ಅನುದಾನ ಬಿಡುಗಡೆ ಆಗದ ಹಿನ್ನೆಲೆಯಲ್ಲಿ ವಿಳಂಬವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಿಡಿಒ ಕಾರ್ಯವೈಖರಿ ಬಗ್ಗೆ ಗ್ರಾ.ಪಂ. ಅಧ್ಯಕ್ಷ, ಸದಸ್ಯರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾನಿಗಳ ಸಹಕಾರ

ಈ ವಿಷಯ ಅರಿತ ದಾನಿಗಳು ಶಾಲೆಯ ಮಾಡನ್ನು ತುರ್ತಾಗಿ ದುರಸ್ತಿಪಡಿಸಲು ಧನ ಸಹಾಯ ನೀಡುವ ಮೂಲಕ ಸಹಕರಿಸಿದ್ದಾರೆ. ದಾನಿಗಳಾದ ಹೆಮ್ಮಾಡಿ ಗ್ರಾ.ಪಂ. ಅಧ್ಯಕ್ಷ ಸುಧಾಕರ ದೇವಾಡಿಗ, ಉಪಾಧ್ಯಕ್ಷೆ ಶೋಭಾ ಡಿ. ಕಾಂಚನ್‌, ಮಾಜಿ ಅಧ್ಯಕ್ಷ ಸತ್ಯನಾರಾಯಣ, ಸದಸ್ಯ ರಿಚರ್ಡ್‌ ಡಯಾಸ್‌, ಸುರೇಶ್‌ ಪೂಜಾರಿ ಹೆಮ್ಮಾಡಿ, ಚಂದ್ರ ಪೂಜಾರಿ, ಗುರುರಾಜ್‌, ರಾಘವೇಂದ್ರ ಕುಲಾಲ್‌ ಅವರು ನೆರವಾಗಿದ್ದಾರೆ.

ಈಗ ಶಾಲೆಯ ಶಿಥಿಲಾವಸ್ಥೆಯಲ್ಲಿದ್ದ ಕೊಠಡಿಯ ಮಾಡಿನ ದುರಸ್ತಿ ಕಾರ್ಯ ಆರಂಭಗೊಂಡಿದ್ದು, ಸಂಪೂರ್ಣ ಮಾಡು ದುರಸ್ತಿಯಾಗಲಿದೆ. ದಾನಿಗಳಿಂದ ಸಂಗ್ರಹ ವಾದ ಸುಮಾರು 40 ಸಾವಿರ ರೂ. ವೆಚ್ಚದಲ್ಲಿ ದುರಸ್ತಿ ನಡೆಯಲಿದೆ.

ಒಂದೇ ಕೊಠಡಿ

ಬೆಳ್ಳಿ ಹಬ್ಬ ವರ್ಷಾಚರಣೆ ಸಂಭ್ರಮದಲ್ಲಿರುವ ಈ ಶಾಲೆಯಲ್ಲಿ ಪ್ರಸ್ತುತ ಒಂದ ರಿಂದ 5ನೇ ತರಗತಿಯವರೆಗೆ 27 ಮಂದಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶೈಕ್ಷಣಿಕ ಸಾಲಿನಲ್ಲಿ 6 ಮಂದಿ ದಾಖಲಾತಿ ಮಾಡಿಕೊಂಡಿದ್ದಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಇಲ್ಲಿ ಆರಂಭ ದಿಂದ ಎರಡು ಕೊಠಡಿಯಿದೆ. ಎಲ್ಲ 5 ತರಗತಿಗಳಿಗೂ ಇಲ್ಲಿಯೇ ಪಾಠ- ಪ್ರವಚನ ನಡೆಯುತ್ತಿದೆ. ಇನ್ನು ಶಿಕ್ಷಕರ ಕೊಠಡಿಯೂ ಇಲ್ಲ. ಈಗ ಎರಡರಲ್ಲಿ ಒಂದರ ಮಾಡು ಕುಸಿಯುವ ಭೀತಿ ಇದ್ದುದರಿಂದ ಆ ಕೊಠಡಿಯಲ್ಲಿ ತರಗತಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಕೊಠಡಿ ಕೊರತೆ ಎದುರಾಗಿತ್ತು.

ಶಾಸಕರ ಅನುದಾನ

ಈ ಶಾಲೆಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಮುತುವರ್ಜಿಯಲ್ಲಿ ಶಾಸಕರ ನಿಧಿಯಡಿ ಅನುದಾನ ಮಂಜೂ ರಾಗಿದ್ದು, ಅದನ್ನು ಹೊಸ ಕೊಠಡಿ ನಿರ್ಮಾಣಕ್ಕೆ ಬಳಸಿಕೊಳ್ಳುವ ಉದ್ದೇಶವನ್ನು ಶಾಲಾಡಳಿತ ಹೊಂದಿದೆ.

ನನ್ನ ತೀರ್ಮಾನವಲ್ಲ: ಶಾಲೆಯ ದುರಸ್ತಿ ಬಗ್ಗೆ ಅಧ್ಯಕ್ಷರು, ಸದಸ್ಯರು ಸಭೆ ನಡೆಸಿ, ಆ ಸಭೆಯಲ್ಲಿ ತುರ್ತು ಅನುದಾನ ಬಿಡುಗಡೆ ಬಗ್ಗೆ ತೀರ್ಮಾನವಾಗಬೇಕು. ಆ ಸಭೆಯಲ್ಲಿ ತೀರ್ಮಾನ ಕೈಗೊಂಡ ಅನಂತರ ಅನುದಾನ ಬಿಡುಗಡೆಗೆ ಅವಕಾಶವಿದೆ. ತುರ್ತು ಅನುದಾನ ಬಿಡುಗಡೆ ಆಗದಿರುವ ಬಗ್ಗೆ ನನ್ನ ಪಾತ್ರವಿಲ್ಲ. – ಮಂಜು ಬಿಲ್ಲವ, ಹೆಮ್ಮಾಡಿ ಪಿಡಿಒ

ಮನವಿ ನೀಡಲಾಗಿದೆ: ಕಟ್ಟು ಶಾಲಾ ದುರಸ್ತಿ ಸಂಬಂಧ ಈಗ ರಜೆ ಇರುವುದರಿಂದ ತುರ್ತು ದುರಸ್ತಿಗೆ ಅನುದಾನ ಬಿಡುಗಡೆ ಬಗ್ಗೆ ಪಿಡಿಒ ಗಮನಕ್ಕೆ ಅಧ್ಯಕ್ಷರಾದಿಯಾಗಿ ನಾವೆಲ್ಲ ಗಮನಕ್ಕೆ ತಂದಿದ್ದೇವೆ. ಆದರೆ ಅವರು ಈ ಬಗ್ಗೆ ನಮಗೆ ಸಹಕಾರ ನೀಡದಿರುವುದರಿಂದ ನಾವೇ ವೈಯಕ್ತಿಕ ನೆಲೆಯಲ್ಲಿ ಹಣ ಸಂಗ್ರಹಿಸಿ, ದುರಸ್ತಿ ಮಾಡುತ್ತಿದ್ದೇವೆ. -ಸತ್ಯನಾರಾಯಣ, ಮಾಜಿ ಅಧ್ಯಕ್ಷರು, ಹೆಮ್ಮಾಡಿ ಗ್ರಾ.ಪಂ.

ಟಾಪ್ ನ್ಯೂಸ್

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

Kundapura: ಇಂದು ಉಳ್ಳೂರು ಕೆರೆಗದ್ದೆ ಕಂಬಳ

8

Kundapura: ದರ್ಲೆಗುಡ್ಡೆ ಕೊರಗ ಕಾಲನಿ; ಈಗಲೇ ಕುಡಿಯುವ ನೀರಿಗೆ ತತ್ವಾರ

7

Karkala: ಅನಂತಶಯನ ಗುಡ್ಡೆಯಂಗಡಿ ರಸ್ತೆ ದುಃಸ್ಥಿತಿ; ಸವಾರರಿಗೆ ಪ್ರಾಣಸಂಕಟ

6(1

Kundapura: ಹೆಮ್ಮಾಡಿ; 4 ರಸ್ತೆ ಸೇರುವಲ್ಲಿ ಒಂದೂ ತಂಗುದಾಣವಿಲ್ಲ!

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.