ಉಪ್ಪಿನಕುದ್ರು ಬೊಂಬೆಯಾಟಕ್ಕೆ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿ
Team Udayavani, Oct 15, 2022, 12:21 PM IST
ಉಡುಪಿ : ಆರು ತಲೆ ಮಾರುಗಳಿಂದ ಯಕ್ಷಗಾನ ಗೊಂಬೆಯಾಟ ನಡೆಸಿಕೊಂಡು ಬಂದಿರುವ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಬೊಂಬೆಯಾಟ ಟ್ರಸ್ಟ್ ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ವಿಶಿಷ್ಟ ಕೊಡುಗೆಯನ್ನು ಪರಿಗಣಿಸಿ ಈ ಬಾರಿ ಉಡುಪಿಯ ಯಕ್ಷಗಾನ ಕಲಾರಂಗ ನೀಡುವ ಶ್ರೀವಿಶ್ವೇಶತೀರ್ಥ ಪ್ರಶಸ್ತಿಗೆ ಆಯ್ಕೆಯಾಗಿದೆ.
ಪರಂಪರೆಯ ಹಾಡುಗಾರಿಕೆ ಮತ್ತು ಅರ್ಥಗಾರಿಕೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸಿದ ಈ ಸಂಸ್ಥೆ ಈ ಪ್ರದೇಶ ಮಾತ್ರವಲ್ಲದೇ ವಿವಿಧ ದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸಕ್ತ ಭಾಸ್ಕರ ಕೊಗ್ಗ ಕಾಮತರು ಇದರ ನಿರ್ದೇಶಕರಾಗಿದ್ದು, ಉಪ್ಪಿನ ಕುದ್ರು ವಿನಲ್ಲಿ ಎಲ್ಲ ಮೂಲ ಸೌಕರ್ಯಗಳನ್ನು ಹೊಂದಿರುವ ಸುಸಜ್ಜಿತ ರಂಗಮಂದಿರವನ್ನು ನಿರ್ಮಿಸಿ ಅದನ್ನು ಬೇರೆ ಬೇರೆ ಕಲಾಪ್ರಕಾರಗಳಿಗೂ ಉಚಿತವಾಗಿ ನೀಡುತ್ತ ವಿವಿಧ ಕಲಾ ಸಂವರ್ಧನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಪ್ರಶಸ್ತಿಯು 50,000 ರೂ. ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ನ.13ರಂದು ಮಂಗಳೂರಿನ ಟೌನ್ ಹಾಲ್‌ನಲ್ಲಿ ಜರಗಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಕಾವೂರು : ಅಂಗಡಿಯಲ್ಲಿ ಬಟ್ಟೆ ಎಗರಿಸಿದ ಬುರ್ಖಾಧಾರಿ ಮಹಿಳೆ… ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.