ಎಲ್ಲರಿಗೂ ಮಾನಸಿಕ ಆರೋಗ್ಯ ಮುಖ್ಯ

Team Udayavani, Oct 15, 2022, 2:37 PM IST

ಎಲ್ಲರಿಗೂ ಮಾನಸಿಕ ಆರೋಗ್ಯ ಮುಖ್ಯ

ರಾಮನಗರ: ಜಾಗತಿಕ ಮಟ್ಟದಲ್ಲಿ ಎಲ್ಲರಿಗೂ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿದೆ. ಆದ್ದರಿಂದ ಆರೋಗ್ಯದತ್ತ ಎಲ್ಲರೂ ಹೆಚ್ಚಿನ ಗಮನಹರಿಸುವ ಮೂಲಕ ಮಹತ್ವ ನೀಡಬೇಕು. ವಿಶೇಷವಾಗಿ ಪೊಲೀಸ್‌, ನ್ಯಾಯಾಲಯ ಮತ್ತು ವೈದ್ಯಕೀಯ ಇಲಾಖೆಗಳು ದಿನದ 24 ಗಂಟೆಯೂ ಸೇವೆ ಸಲ್ಲಿಸುವ ಅನಿವಾರ್ಯವಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಅನಿತಾ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್‌ ತರಬೇತಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಾಮಾನ್ಯವಾಗಿ ಎಲ್ಲರೂ ಒತ್ತಡದ ಬದುಕು ನಡೆಸುತ್ತಿದ್ದೇವೆ. ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲೂ ಒಂದಲ್ಲಾ ಒಂದು ಒತ್ತಡ ಸಾಮಾನ್ಯವಾಗಿದೆ. ಇದರಿಂದಾಗಿ ಹಲವಾರು ಖಾಯಿಲೆಗಳು ಬರಲಾರಂಭಿಸಿವೆ. ಬಿಪಿ, ಶುಗರ್‌ ಹೆಚ್ಚಾಗಿ ಮಧ್ಯಮ ವಯಸ್ಸಿನಲ್ಲಿಯೇ ಕಾಣಿಸುತ್ತಿದೆ. ಅದಕ್ಕೆ ಕಾರಣ ಮಾನಸಿಕ ಆರೋಗ್ಯ ಹದಗೆಟ್ಟಿರುವುದರ ಜೊತೆಗೆ ಅನವಶ್ಯಕವಾಗಿ ಒತ್ತಡದ ಬದುಕು ನಡೆಸುತ್ತಿರುವುದಾಗಿದೆ ಎಂದು ಹೇಳಿದರು.

ಒತ್ತಡ ಕಡಿಮೆ ಮಾಡಿಕೊಳ್ಳಿ: ಪೊಲೀಸರು, ನ್ಯಾಯಾಲಯ ಸಿಬ್ಬಂದಿ ಹಾಗೂ ವೈದ್ಯಕೀಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡ ಹೆಚ್ಚಾಗಿರುತ್ತದೆ. ಏಕೆಂದರೆ ಪ್ರಕರಣಗಳ ತನಿಖೆ ನಡೆಸುವುದು ಮತ್ತು ನ್ಯಾಯ ನೀಡುವುದು ಮತ್ತು ರೋಗಿಗಳಿಗೆ ಚಿಕಿತ್ಸೆ ನೀಡುವ ಜವಾಬ್ದಾರಿಯಲ್ಲಿ ಮಾನಸಿಕವಾಗಿ ಒತ್ತಡ ಹೆಚ್ಚಾಗಿರುತ್ತದೆ. ಆದ್ದರಿಂದ ಒತ್ತಡವಿಲ್ಲದೆ ಕೆಲಸವಾಗಲು ಸಾಧ್ಯವಿಲ್ಲ. ಅತಿಯಾದ ಒತ್ತಡ ಮಾಡಿಕೊಳ್ಳದೆ, ಕೆಲಸ ಮಾಡಬೇಕು. ಜೊತೆಗೆ ನ್ಯಾಯಾಲಯದಲ್ಲಿರುವ ಪ್ರಕರಣಗಳಿಗೆ ಕಾನೂನು ಸೇವಾ ಪ್ರಾಧಿಕಾರದ ಉಚಿತ ಸಲಹೆ ಪಡೆದು, ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬಹುದು. ಒಟ್ಟಾರೆ ಎಲ್ಲರೂ ಮಾನಸಿಕ ಆರೋಗ್ಯ ಮತ್ತು ಯೋಗ ಕ್ಷೇಮಕ್ಕೆ ಮಹತ್ವ ನೀಡಬೇಕು. ಈ ಮೂಲಕ ನೆಮ್ಮದಿಯ ಬದುಕು ಕಂಡುಕೊಳ್ಳಬಹುದು ಎಂದು ತಿಳಿಸಿದರು.

ಮಾನಸಿಕ ಆರೋಗ್ಯ ಶಿಬಿರ ಆಯೋಜನೆ: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ್‌ ಮಾತನಾಡಿ, ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ವಿಭಾಗದಿಂದ ಜಿಲ್ಲೆ, ತಾಲೂಕು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಆಯ್ದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ, ಮಾನಸಿಕ ತೊಂದರೆಗಳಿಂದ ಬಳಲುತ್ತಿರುವವರನ್ನು ಪತ್ತೆ ಮಾಡುವ ಮೂಲಕ ಅವರಿಗೆ ಉಚಿತವಾಗಿ ಆಪ್ತ ಸಮಾಲೋಚನೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಮಾನಸಿಕ ಸಮಸ್ಯೆಗೆ ತುತ್ತು: ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ಜಿ.ಎಲ್‌.ಪದ್ಮಾ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕುಟುಂಬ, ಮಕ್ಕಳು, ನಿರ್ವಹಣೆ ಮತ್ತು ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದು, ಹಲವಾರು ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಾರೆ. ಕೆಲವೊಮ್ಮೆ ಹಾರ್ಮೋನ್‌ ವ್ಯತ್ಯಾಸದಿಂದ ಆರೋಗ್ಯದಲ್ಲಿ ಮಾನಸಿಕ ಒತ್ತಡದ ಸಮಸ್ಯೆಗಳಿಗೆ ಸಿಲುಕುತ್ತಿದ್ದಾರೆ. ಇಂತಹ ಮಹಿಳೆಯರು ಆಪ್ತ ಸಮಾಲೋಚನೆ ಮೂಲಕ ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯವಿದೆ. ಆದ್ದರಿಂದ ಎಲ್ಲರೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಿ, ಉಚಿತವಾಗಿ ಆಪ್ತ ಸಮಾಲೋಚನೆ ನೀಡಲಾಗುತ್ತದೆ. ಅದರ ಸದುಪಯೋಗ ಪಡೆದುಕೊಳ್ಳುವ ಮೂಲಕ ಒತ್ತಡ ನಿವಾರಣೆ ಮಾಡಿಕೊಂಡು ಉತ್ತಮ ಆರೋಗ್ಯವಂತರಾಗಿರಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೊಲೀಸ್‌ ತರಬೇತಿ ಶಾಲೆಯ ಪ್ರಾಂಶುಪಾಲರಾದ ವಿ.ಶೈಲೇಂದ್ರ, ಡಿವೈಎಸ್‌ಪಿ. ರಮೇಶ್‌, ಮನೋರೋಗ ತಜ್ಞರಾದ ಚಂದ್ರಶೇಖರ್‌, ಡಿಎಸ್‌ಒ ಡಾ.ಕಿರಣ್‌ ಶಂಕರ್‌, ಆರ್‌ಸಿಎಚ್‌ ಡಾ.ರಾಜು, ಡಿಟಿಒ ಡಾ.ಕುಮಾರ್‌, ಡಿಎಂಒ ಡಾ.ಶಶಿಧರ್‌, ಮನೋರೋಗ ತಜ್ಞ ಡಾ.ಆದರ್ಶ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್‌.ಗಂಗಾಧರ್‌, ಮನೋರೋಗ ಸಾಮಾಜಿಕ ಕಾರ್ಯಕರ್ತೆ ಪದ್ಮರೇಖಾ ಮತ್ತು ಆರೋಗ್ಯ ಸಿಬ್ಬಂದಿ, ಪೊಲೀಸ್‌ ತರಬೇತಿ ಶಾಲೆಯ ಅಧಿಕಾರಿಗಳು, ಶಿಬಿರಾರ್ಥಿಗಳು ಹಾಜರಿದ್ದರು.

ಪ್ರತಿಯೊಬ್ಬರಲ್ಲೂ ಒತ್ತಡದ ಬದುಕು ಅನಿವಾರ್ಯವಾಗಿದೆ. ಆದ್ದರಿಂದ ಯಾವುದೇ ವ್ಯಕ್ತಿ ಮಾನಸಿಕ ಆರೋಗ್ಯವಾಗಿದ್ದರೆ, ಎಲ್ಲವನ್ನೂ ಜೈಯಿಸಬಹುದು. ಅದರಲ್ಲೂ ಪೊಲೀಸರು, ನ್ಯಾಯಾಲಯ ಸಿಬ್ಬಂದಿ ಮತ್ತು ವೈದ್ಯ ಸಿಬ್ಬಂದಿಗಳದ್ದು, ಒತ್ತಡದ ಕಾರ್ಯ ಪ್ರವೃತ್ತಿಯಾಗಿದ್ದು, ಆದರಿಂದ ಮೊದಲು ಹೊರಬಂದರಷ್ಟೇ ನೀವು ಸಮಾಜಕ್ಕೆ ಸೇವೆ ಮತ್ತು ಕೊಡುಗೆ ನೀಡಬಹುದು. ಆದ್ದರಿಂದ ಮಾನಸಿಕ ಆರೋಗ್ಯದತ್ತ ಆದ್ಯತೆ ನೀಡಿ. ನ್ಯಾ. ಅನಿತಾ, ಸದಸ್ಯ ಕಾರ್ಯದರ್ಶಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಟಾಪ್ ನ್ಯೂಸ್

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.