ಶಿರೂರು: ಒತ್ತುವರಿ ಜಾಗ ತೆರವಿಗೆ ಆದ್ಯತೆ: ಜಿಲ್ಲಾಧಿಕಾರಿ ಕೂರ್ಮಾ ರಾವ್
ಜಿಲ್ಲಾಧಿಕಾರಿ ನಡೆ ಹಳ್ಳಿ ನಡೆ
Team Udayavani, Oct 15, 2022, 4:24 PM IST
ಉಡುಪಿ: ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳ ಒತ್ತುವರಿ ಕಾರ್ಯವನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಅದ್ಯತೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಭೈರಂಪಳ್ಳಿ ಗ್ರಾಮ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಶನಿವಾರ ನಡೆದ “ಜಿಲ್ಲಾಧಿಕಾರಿ ನಡೆ ಹಳ್ಳಿ ನಡೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕ ಉದ್ದೇಶದಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲೆಯಲ್ಲಿ ವಿವಿಧ ಪ್ರದೇಶದಲ್ಲಿ ಜಾಗಗಳನ್ನು ಕಾಯ್ದಿರಿಸಲಾಗಿದೆ. ಇಂತಹ ಜಾಗಗಳನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ದ ಕ್ರಮ ಕೈಗೊಂಡು, ಒತ್ತುವರಿ ತೆರವು ಕಾರ್ಯಾಚರಣೆಗೆ ಆದ್ಯತೆ ನೀಡಿ, ತೆರವುಗೊಂಡ ಜಾಗಗಳನ್ನು ಸಾರ್ವಜನಿಕ ಉದ್ದೇಶಗಳಿಗಾಗಿಯೇ ಬಳಸಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರತೀ ತಿಂಗಳ 3ನೇ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ಯವ್ಯ ಕಾರ್ಯಕ್ರಮ ನಡೆಸುತ್ತಿದ್ದು, ಕಾರ್ಯಕ್ರಮದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೆ ಪರಿಹಾರ ಒದಗಿಸುವ ಜತೆಗೆ ವಿವಿಧ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರು ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು.
ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ಆರೋಗ್ಯ ಇಲಾಖೆ ಮತ್ತು ಆಯುಷ್ ಇಲಾಖೆವತಿಯಿಂದ ಆರೋಗ್ಯ ಶಿಬಿರ, ಕಾರ್ಮಿಕ ಇಲಾಖೆ ವತಿಯಿಂದ ಇ-ಶ್ರಮ್ ನೋಂದಣಿ ಏರ್ಪಡಿಸಲಾಗಿತ್ತು.
ಶಿರೂರು ಗ್ರಾ.ಪಂ.ಅಧ್ಯಕ್ಷ ಜಿಯಾನಂದ ಹೆಗಡೆ, ಜಿ.ಪಂ.ಸಿಇಓ ಪ್ರಸನ್ನ ಎಚ್., ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಭೂ ದಾಖಲೆಗಳ ಉಪ ನಿರ್ದೇಶಕ ರವೀಂದ್ರ, ಆಹಾರ ಇಲಾಖೆ ಉಪ ನಿರ್ದೇಶಕ ಮೊಹಮದ್ ಇಸಾಕ್, ಡಿಎಚ್‌ಓ ಡಾ|ನಾಗಭೂಷಣ ಉಡುಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ಡಾ| ಶಂಕರ ಶೆಟ್ಟಿ, ಜಿಲ್ಲಾಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಉಡುಪಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮಂಜುಳಾ, ಕ್ಷೇತ್ರ ಶಿಕ್ಷಣಾಧಿಕಾರಿ ರಂಗನಾಥ್, ಪ್ರಭಾರ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.