ಕಾಂಗ್ರೆಸ್‌ನ ಭಾರತ ಐಕ್ಯತಾ ಯಾತ್ರೆಗೆ ಬೀದರ ಬಲ!

2ರಿಂದ 3 ಸಾವಿರದಂತೆ ಜನರನ್ನು ಯಾತ್ರೆಯಲ್ಲಿ ಸೇರಿಸಲು ಗುರಿ ನೀಡಲಾಗಿದೆ.

Team Udayavani, Oct 15, 2022, 6:14 PM IST

ಕಾಂಗ್ರೆಸ್‌ನ ಭಾರತ ಐಕ್ಯತಾ ಯಾತ್ರೆಗೆ ಬೀದರ ಬಲ!

ಬೀದರ: ದೇಶದ ಜನರನ್ನು ಒಗ್ಗೂಡಿಸುವ ಸಂಕಲ್ಪದೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ “ಭಾರತ ಐಕ್ಯತಾ ಯಾತ್ರೆ’ ಅ. 21ಕ್ಕೆ ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಗೆ ಪ್ರವೇಶಿಸಲಿದ್ದು, ಬೃಹತ್‌ ಸಮಾವೇಶ ಹಾಗೂ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಗಡಿ ಜಿಲ್ಲೆ ಬೀದರನಿಂದ ಸಾವಿರಾರು ಜನರನ್ನು ಕರೆದೊಯ್ಯಲು ಭರದ ತಯಾರಿ ನಡೆದಿದೆ.

ಸೆ. 7ರಿಂದ ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ ಐಕ್ಯತಾ ಯಾತ್ರೆ ಕಾಶ್ಮೀರದವರೆಗೆ ನಡೆಯಲಿದ್ದು, ಸಧ್ಯ ಕರುನಾಡಿನಲ್ಲಿ ಸಂಚರಿಸುತ್ತಿದೆ. ಅ. 15ರಿಂದ ಗಣಿ ನಾಡು ಬಳ್ಳಾರಿ ಮೂಲಕ ಹಾದು ಹೋಗುವ ಯಾತ್ರೆಯು ಅ. 21ರಿಂದ ಮೂರು ದಿನಗಳ ಕಾಲ ರಾಯಚೂರಿನಲ್ಲಿ ಸಾಗಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಸಾಥ್‌ ನೀಡಲಿದ್ದಾರೆ. ಧರಿನಾಡು ಬೀದರ ಮೂಲಕ ಯಾತ್ರೆ ಸಾಗದಿದ್ದರೂ ಜಿಲ್ಲೆಯಲ್ಲಿ ಪಾದಯಾತ್ರೆ ಬಗ್ಗೆ ತೀವ್ರ ಕುತೂಹಲ ಮೂಡಿದ್ದು, ರಾಹುಲ್‌ ಗಾಂಧಿ ಅವರಿಗೆ ಶಕ್ತಿ ತುಂಬಲು ಇಲ್ಲಿನ ಆರು ಕ್ಷೇತ್ರಗಳಿಂದ 25ರಿಂದ 30 ಸಾವಿರ ಜನರನ್ನು ಸೇರಿಸಲು ಜಿಲ್ಲಾ
ಕಾಂಗ್ರೆಸ್‌ ಉತ್ಸುಕವಾಗಿದೆ.

ಭಾರತೀಯರನ್ನು ಒಂದುಗೂಡಿಸುವ ಘೋಷ ವಾಕ್ಯದೊಂದಿಗೆ ಕಾಂಗ್ರೆಸ್‌ ದೇಶದ್ಯಂತ ಈ ಭಾರತ ಐಕ್ಯತಾ ಯಾತ್ರೆ ನಡೆಸುತ್ತಿದ್ದು, ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ. ಯಾತ್ರೆ ಮೂಲಕ ಪಕ್ಷವನ್ನು ಬೇರು ಮಟ್ಟದಲ್ಲಿ ಬಲಪಡಿಸಿ, ಕರ್ನಾಟಕ ವಿಧಾನ ಸಭೆ ಚುನಾವಣೆ ಜತೆಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು ಕಾಂಗ್ರೆಸ್‌ ಶ್ರಮಿಸುತ್ತಿದೆ. ಯಾತ್ರೆ ಮಾರ್ಗದದಲ್ಲಿ ಬೃಹತ್‌ ಸಮಾವೇಶ ಮತ್ತು ಸಭೆಗಳನ್ನು ನಡೆಸಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಲಾಗುತ್ತಿದೆ. ಮತ್ತೂಂದೆಡೆ ಹಾಲಿ ಶಾಸಕರು ಮತ್ತು ಮುಂದಿನ ವಿಧಾನಸಭೆ ಚುನಾವಣೆ ಆಕಾಂಕ್ಷಿಗಳು ಯಾತ್ರೆಯಲ್ಲಿ ಸಾವಿರಾರು ಜನರನ್ನು ಕರೆದೊಯ್ದು ತಮ್ಮ ವರ್ಚಸ್ಸನ್ನೂ ಹೆಚ್ಚಿಸಿಕೊಳ್ಳಲು ಕಾತರರಾಗಿದ್ದಾರೆ.

ಐಕ್ಯಾತಾ ಯಾತ್ರೆ ಹಿನ್ನೆಲೆ ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸಿ, ಯಶಸ್ವಿಗಾಗಿನ ರೂಪುರೇಷಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕಾಂಗ್ರೆಸ್‌ ಶಾಸಕರು ಪ್ರತಿನಿಧಿಸುವ ಪ್ರತಿ ಕ್ಷೇತ್ರಕ್ಕೆ ಐದು ಸಾವಿರ ಮತ್ತು ಇತರ ಕ್ಷೇತ್ರಗಳಿಗೆ 2ರಿಂದ 3 ಸಾವಿರದಂತೆ ಜನರನ್ನು ಯಾತ್ರೆಯಲ್ಲಿ ಸೇರಿಸಲು ಗುರಿ ನೀಡಲಾಗಿದೆ. ಕಾಂಗ್ರೆಸ್‌ ಪಕ್ಷಕ್ಕೆ ಹೊಸ ಜೋಶ್‌ ನೀಡುತ್ತಿರುವ ಐತಿಹಾಸಿಕ ಪಾದಯಾತ್ರೆಯಲ್ಲಿ ಭಾಗಿಯಾಗಲು ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಕಾತುರರಾಗಿದ್ದಾರೆ. ರಾಯಚೂರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಅ. 21ರಂದು ಬೆಳಗ್ಗೆ ಜಿಲ್ಲೆಯ ವಿಧಾನ ಸಭೆ ಕ್ಷೇತ್ರಗಳಿಂದ ವಾಹನಗಳು ಹೊರಡಲಿದ್ದು, ಆಯಾ ಕ್ಷೇತ್ರದ ಶಾಸಕರು ಮತ್ತು ಮಾಜಿ ಶಾಸಕರು ಚಾಲನೆ ನೀಡಲಿದ್ದಾರೆ.

ರಾಹುಲ್‌ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ ಐಕ್ಯತಾ ಯಾತ್ರೆ ಅ. 21ರಂದು ರಾಯಚೂರು ಜಿಲ್ಲೆ ಪ್ರವೇಶಿಸಲಿದ್ದು, ಕರುನಾಡಿನ ಎಲ್ಲೆಡೆ ವ್ಯಾಪಕ ಜನ ಬೆಂಬಲ ಸಿಗುತ್ತಿದೆ. ರಾಯಚೂರು ಪಾದಯಾತ್ರೆಯಲ್ಲಿ ಬೀದರ ಜಿಲ್ಲೆಯಿಂದ 25 -30 ಸಾವಿರ ಜನರು ಭಾಗವಹಿಸುವ ಸಾಧ್ಯತೆ ಇದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಸರ್ಕಾರ ದುರಾಡಳಿತ, ಜನರ ಮಧ್ಯ ವಿಷ ಬೀಜ ಬಿತ್ತುತ್ತಿರುವ ಸ್ಥಿತಿಯಲ್ಲಿ ದೇಶದ ಏಕತೆ ಹಾಗೂ ಭಾರತೀಯರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದ್ದು, ಜನರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಕೈಜೋಡಿಸಿ.
ಈಶ್ವರ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ

*ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.