ಜಾಗತಿಕ ಹಸಿವಿನ ಸೂಚ್ಯಂಕ: ಭಾರತ 107ಕ್ಕೆ ಕುಸಿತ
ದೇಶದ ವರ್ಚಸ್ಸಿಗೆ ಕಳಂಕ ತರುವ ಯತ್ನ ಎಂದು ಸರ್ಕಾರ ಟೀಕೆ
Team Udayavani, Oct 16, 2022, 7:40 AM IST
ನವದೆಹಲಿ: ಜರ್ಮನಿ ಮತ್ತು ಐರ್ಲೆಂಡ್ ಸಂಸ್ಥೆಗಳು ಜಂಟಿಯಾಗಿ ಬಿಡುಗಡೆ ಮಾಡಿರುವ ಜಾಗತಿಕ ಹಸಿವಿನ ಸೂಚ್ಯಂಕ-2022ರಲ್ಲಿ ಭಾರತದ ರ್‍ಯಾಂಕಿಂಗ್ ಇನ್ನಷ್ಟು ಕುಸಿದಿದೆ. ಕಳೆದ ವರ್ಷ 101ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 107ಕ್ಕಿಳಿದಿದೆ.
ಐರ್ಲೆಂಡ್‌ನ ಕನ್ಸರ್ನ್ ವರ್ಲ್xವೈಡ್ ಮತ್ತು ಜರ್ಮನಿಯ ವೆಲ್ಟ್ ಹಂಗರ್ ಹಿಲ್ಫೆ ಸೇರಿ ತಯಾರಿಸಿರುವ ಈ ಸೂಚ್ಯಂಕ ಹಸಿವು ಮತ್ತು ಅಪೌಷ್ಟಿಕತೆಯ ಮಾಹಿತಿ ನೀಡುತ್ತದೆ. ಒಟ್ಟು 121 ರಾಷ್ಟ್ರಗಳ ಪೈಕಿ ಭಾರತ 107ನೇ ಸ್ಥಾನ ಪಡೆದಿದೆ. ಅಚ್ಚರಿಯೆಂದರೆ, ಹಸಿವಿನ ಮಟ್ಟದಲ್ಲಿ ಭಾರತ 29.1 ಸ್ಕೋರ್ ಗಳಿಸಿದ್ದು, ಇದನ್ನು “ಗಂಭೀರ’ ಎಂದು ಪರಿಗಣಿಸಲಾಗಿದೆ.
ಭಾರತವು ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕಾಗಿಂತಲೂ ಕಳಪೆ ಸಾಧನೆ ಮಾಡಿದೆ. ಏಷ್ಯಾದ ರಾಷ್ಟ್ರಗಳಲ್ಲಿ ಅಫ್ಘಾನಿಸ್ತಾನ ಮಾತ್ರವೇ ಭಾರತಕ್ಕಿಂತ ಕೆಳಗಿನ ಸ್ಥಾನದಲ್ಲಿದೆ.
ಕೇಂದ್ರದ ಮಾಜಿ ವಿತ್ತಸಚಿವ ಪಿ.ಚಿದಂಬರಂ ಈ ಕುಸಿತವನ್ನು ಕಟುವಾಗಿ ಟೀಕಿಸಿದ್ದು, ದೇಶದ 22.4 ಕೋಟಿ ಮಂದಿ ಅಪೌಷ್ಟಿಕತೆ ಹೊಂದಿದ್ದಾರೆ. ಮೋದಿಯವರು ಹಸಿವು, ಅಪೌಷ್ಟಿಕತೆಯಂತಹ ನಿಜವಾದ ವಿಷಯವನ್ನು ಯಾವಾಗ ಪರಿಗಣಿಸುವುದು ಎಂದು ಪ್ರಶ್ನಿಸಿದ್ದಾರೆ.
ಮಾನದಂಡವೇ ಸರಿಯಿಲ್ಲ: ಕೇಂದ್ರ
ಜಾಗತಿಕ ಹಸಿವು ಸೂಚ್ಯಂಕವನ್ನು ಸಿದ್ಧಪಡಿಸಿದ ಮಾನದಂಡವೇ ಸರಿಯಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತದ ವರ್ಚಸ್ಸಿಗೆ ಕಳಂಕ ತರಲು ಅವೈಜ್ಞಾನಿಕವಾಗಿ ಈ ಸೂಚ್ಯಂಕ ಸಿದ್ಧಪಡಿಸಲಾಗಿದೆ. ಈ ವಾರ್ಷಿಕ ವರದಿಯಲ್ಲಿ ತಪ್ಪು ಮಾಹಿತಿಗಳೇ ತುಂಬಿರುತ್ತವೆ ಎಂದೂ ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ವರ್ಷದ ಈ ಸೂಚ್ಯಂಕವನ್ನೂ ಕೇಂದ್ರ ಸರ್ಕಾರ ವಿರೋಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.