ನೂತನ ಸೆಂಟ್ರಲ್‌ ಮಾರುಕಟ್ಟೆ; ಶೀಘ್ರ ಕಾಮಗಾರಿ ಆರಂಭ ನಿರೀಕ್ಷೆ


Team Udayavani, Oct 16, 2022, 12:22 PM IST

6

ಸ್ಟೇಟ್‌ಬ್ಯಾಂಕ್‌: ಕೆಲವು ತಿಂಗಳಿನಿಂದ ಬಾಕಿಯಾಗಿರುವ ಹೊಸ ಸೆಂಟ್ರಲ್‌ ಮಾರುಕಟ್ಟೆ ನಿರ್ಮಾಣ ಕಾಮಗಾರಿಗೆ ಕೆಲವೇ ದಿನಗಳಲ್ಲಿ ಚಾಲನೆ ದೊರೆಯುವ ನಿರೀಕ್ಷೆಯಿದೆ.

ಒಟ್ಟು 3.61 ಎಕರೆ ಸ್ಥಳದಲ್ಲಿ ಸರಕಾರಿ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಒಟ್ಟು 114 ಕೋ. ರೂ. ವೆಚ್ಚದಲ್ಲಿ ಹೊಸ ಮಾರುಕಟ್ಟೆ ನಿರ್ಮಿಸಲು ಸ್ಮಾರ್ಟ್‌ ಸಿಟಿ ಉದ್ದೇಶಿಸಿದೆ. ಹೊಸ ಮಾರುಕಟ್ಟೆಯಲ್ಲಿ ನೆಲ ಅಂತಸ್ತು ಮತ್ತು ಅದರ ಮೇಲ್ಗಡೆ 5 ಮಹಡಿ ಗಳಿರುತ್ತವೆ. ತಳ ಭಾಗದ ಎರಡು ಅಂತಸ್ತುಗಳು ವಾಹನ ಪಾರ್ಕಿಂಗ್‌ಗೆ ಮೀಸಲಾಗಿರುತ್ತದೆ. ಮೂರು ವರ್ಷ ಗಳ ಒಳಗೆ ಈ ಕಾಮಗಾರಿಯನ್ನು ಪೂರ್ಣಗೊಳಿಸಬೇಕಾಗಿದೆ.

ಸೆಂಟ್ರಲ್‌ ಮಾರುಕಟ್ಟೆ ನಿರ್ಮಾಣ ವಾಗುವ ಸ್ಥಳದಲ್ಲಿ ಕಾಮಗಾರಿ ಸಂದರ್ಭ ಬೇಸ್‌ಮೆಂಟ್‌ಗಾಗಿ ಅಗೆಯಲಾ ಗುತ್ತದೆ. ಈ ವ್ಯಾಪ್ತಿ ಹಾಗೂ ಇದರ ಸುತ್ತಲೂ ಶೀಟ್‌ ಅಳವಡಿಸಿ ಬಂದ್‌ ಮಾಡಲಾಗುತ್ತದೆ. ಇದರಿಂದಾಗಿ ಸದ್ಯ ರಸ್ತೆ ಬದಿ ವ್ಯಾಪಾರ ಮಾಡುವವರಿಗೆ ಮುಂದೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ಈ ಮಧ್ಯೆ ಕಾಮಗಾರಿ ವೇಳೆ ವಾಹನ ಸಂಚಾರಕ್ಕೂ ಇಲ್ಲಿ ಸಮಸ್ಯೆ ಆಗಲಿದೆ.

ತಡ ಯಾಕೆ?

ಲಾಕ್‌ಡೌನ್‌ಗೂ ಮುನ್ನವೇ ನೂತನ ಸೆಂಟ್ರಲ್‌ ಮಾರುಕಟ್ಟೆ ಕಾಮಗಾರಿಯ ಟೆಂಡರ್‌ ಅಂತಿಮವಾಗಿ ಗುತ್ತಿಗೆದಾರರ ನೇಮಕವಾಗಿತ್ತು. ಆದರೆ ಆಗ ನಿಗದಿ ಮಾಡಿದ ಮೊತ್ತ, ಲಾಕ್‌ಡೌನ್‌ ಬಳಿಕದ ಮೊತ್ತದಲ್ಲಿ ವ್ಯತ್ಯಾಸವಾದ ಕಾರಣದಿಂದ ಟೆಂಡರ್‌ ವಹಿಸಿದವರು ಕೊಂಚ ಸಮಯ ನಿರಾಸಕ್ತಿ ತೋರಿದ್ದರು ಎನ್ನಲಾಗಿದೆ. ಬಳಿಕ ಮಾತುಕತೆ ನಡೆಸಿ ಸರಿಪಡಿಸಲಾಗಿತ್ತು. ಜತೆಗೆ ಕಾಮಗಾರಿಯ ಪ್ರಾರಂಭದಲ್ಲಿ ಬೇಸ್‌ ಮೆಂಟ್‌ ಮಾಡಲು ಬೃಹತ್‌ ಹೊಂಡ ಮಾಡಬೇಕಾಗುತ್ತದೆ. ಮಳೆ ಕೂಡ ಜೋರಾಗಿದ್ದರಿಂದ ಕೆಲಸ ನಡೆಸುವುದು ಕಷ್ಟ ಎಂಬ ಕಾರಣದಿಂದ ಕಾಮಗಾರಿ ತಡವಾಗಿದೆ ಎನ್ನಲಾಗಿದೆ.

ಹಳೆಯ ಮಾರ್ಕೆಟ್‌ ನೆನಪು ಮಾತ್ರ!

ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡಕ್ಕೆ (ತರಕಾರಿ/ ಹಣ್ಣು ಹಂಪಲು ಮತ್ತು ಮೀನು/ ಮಾಂಸದ ಮಾರ್ಕೆಟ್‌ನ 2 ಕಟ್ಟಡಗಳು) ಸುಮಾರು 62 ವರ್ಷಗಳ ಇತಿಹಾಸವಿದೆ. ಹಳೆಯದಾದ ಈ ಕಟ್ಟಡ ಶಿಥಿಲವಾಗಿತ್ತು.

ಇಲ್ಲಿರುವ ಮೀನು/ ಮಾಂಸದ ಮಾರ್ಕೆಟ್‌ ಕಟ್ಟಡದ ಕೆಲವು ಭಾಗಗಳು ಕೆಲವು ವರ್ಷಗಳ ಹಿಂದೆಯೇ ಕುಸಿದಿದ್ದು, ಬಳಿಕ ಅದಕ್ಕೆ ತೇಪೆ ಹಚ್ಚಲಾಗಿತ್ತು. ಬಳಿಕ ಮಾರುಕಟ್ಟೆಯನ್ನು ಆಧುನೀಕರಿಸಬೇಕಾದ ಕಾರಣ ಸ್ಮಾರ್ಟ್‌ ಸಿಟಿ ಯೋಜನೆಯಡಿ ನೂತನ ಮಾರ್ಕೆಟ್‌ ಕಟ್ಟಡ ಕಟ್ಟಲು 2016 ಜೂ. 29ರಂದು ನಡೆದ ಮಹಾನಗರ ಪಾಲಿಕೆ ಸಭೆಯಲ್ಲಿ ನಿರ್ಣಯಿಸಲಾಗಿತ್ತು. ಬಳಿಕ ಸ್ಮಾರ್ಟ್‌ ಸಿಟಿ ಮಂಡಳಿ ಸಭೆಯಲ್ಲಿ ಅನುಮೋದನೆ ಪಡೆಯಲಾಗಿತ್ತು. 2018 ಸೆ. 22ರಂದು ನಡೆದ ಉನ್ನತಾಧಿಕಾರ ಕಮಿಟಿ ಸಭೆಯಲ್ಲಿ ಮಂಜೂರಾತಿ ನೀಡಲಾಗಿತ್ತು.

ಬಳಿಕ ಟೆಂಡರ್‌ ಪ್ರಕ್ರಿಯೆಯೂ ಮುಗಿದು, ಪಿಪಿಪಿ ಪಾಲುದಾರಿಕೆಯನ್ನೂ ಅಂತಿಮಗೊಳಿಸಲಾಗಿತ್ತು. ಈ ಮಧ್ಯೆ ಕೊರೊನಾ ತೀವ್ರವಾದಾಗ 2020 ಎ. 2ರಂದು ಕಟ್ಟಡ ಪುನಃ ನಿರ್ಮಾಣಕ್ಕೆ ಇದು ಸೂಕ್ತ ಸಮಯ ಎಂದು ತೀರ್ಮಾನಿಸಿ ಮಾರ್ಕೆಟ್‌ನಲ್ಲಿ ವ್ಯಾಪಾರ ಚಟುವಟಿಕೆಗಳನ್ನು ನಿಷೇಧಿಸಿ, ಶಿಥಿಲವಾದ ಹಳೆಯ ಕಟ್ಟಡವನ್ನು ಕೆಡಹಲು ನಿರ್ಧರಿಸಿ ಎ. 4ರಂದು ಸಾರ್ವಜನಿಕ ಪ್ರಕಟನೆ ಹೊರಡಿಸಿತ್ತು. ಕೆಡಹುವ ಕಾಮಗಾರಿಯನ್ನೂ ಆರಂಭಿಸಲಾಗಿತ್ತು.

ಇದನ್ನು ಆಕ್ಷೇಪಿಸಿ ಕೆಲವು ಮಂದಿ ವ್ಯಾಪಾರಿಗಳು ಹೈಕೋರ್ಟ್‌ ನಿಂದ ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ 2021ರ ಮೇ 29ರಂದು ಕಾಮಗಾರಿ ನಿಲ್ಲಿಸಲಾಗಿತ್ತು. ಈ ವರ್ಷದ ಎಪ್ರಿಲ್‌ ನಲ್ಲಿ ನ್ಯಾಯಾಲಯ ತಡೆಯಾಜ್ಞೆ ತೆರವು ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಮತ್ತೆ ಕಾರ್ಯಾಚರಣೆ ನಡೆಸಿ ಹಳೆಯ ಕಟ್ಟಡ ಸಂಪೂರ್ಣ ತೆರವು ಮಾಡಲಾಗಿದೆ. ಶೀಘ್ರ ಕಾಮಗಾರಿ ಆರಂಭ ಹೊಸದಾಗಿ ಸೆಂಟ್ರಲ್‌ ಮಾರುಕಟ್ಟೆ ನಿರ್ಮಾಣ ಮಾಡಲು ಕೆಳ ಅಂತಸ್ತಿಗಾಗಿ ಬೃಹತ್‌ ಹೊಂಡ ಮಾಡಬೇಕಾಗುತ್ತದೆ. ಆದರೆ ಮಳೆಯ ಕಾರಣದಿಂದ ಅದರ ಕಾಮಗಾರಿ ನಡೆಸಲು ಸಾಧ್ಯವಾಗಿರಲಿಲ್ಲ. ಟೆಂಡರ್‌ ದಾರರ ಜತೆಗೆ ಇದೀಗ ಎಲ್ಲ ಹಂತದ ಮಾತುಕತೆ ನಡೆಸಲಾಗಿದ್ದು, ಕೆಲವೇ ದಿನದಲ್ಲಿ ಕಾಮಗಾರಿ ಆರಂಭ ಮಾಡಲಾಗುವುದು. – ಅಕ್ಷಯ್‌ ಶ್ರೀಧರ್‌, ಆಯುಕ್ತರು, ಮಂಗಳೂರು ಪಾಲಿಕೆ

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.