ವಿಶ್ವದ ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ವಿಜಯಪುರದ ಡಾ.ಆರ್.ವಿ.ಕುಲಕರ್ಣಿ 2ನೇ ಬಾರಿಗೆ ಆಯ್ಕೆ
Team Udayavani, Oct 16, 2022, 1:11 PM IST
ವಿಜಯಪುರ: ಔಷಧ ವಿಜ್ಞಾನ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಅವರಿಗೆ 2022 ನೇ ಸಾಲಿನ ವಿಶ್ವದ ಉನ್ನತ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಸತತ 2ನೇ ಬಾರಿ ಸ್ಥಾನ ಪಡೆದಿದ್ದಾರೆ.
ಅಮೇರಿಕಾದ ಸ್ಟ್ಯಾನಫೋರ್ಡ್ ವಿಶ್ವವಿದ್ಯಾಲಯ ಹಾಗೂ ನೆದರಲ್ಯಾಂಡ್ ನ ಎಲ್ಸವಿಯರ್ ಪ್ರಕಾಶನ ಸಂಸ್ಥೆ ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಅವರಲ್ಲಿ ಶ್ರೇಷ್ಠ ಶೇ.2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ. ಸತತ 2ನೇ ಬಾರಿ ಡಾ. ರಾಘವೇಂದ್ರ ಕುಲಕರ್ಣಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಪಾಲಿಮರ್ ಆಧಾರಿತ ಔಷಧ ವಿಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೈದ ಭಾರತದ ಸಂಶೋಧಕರ ಪೈಕಿ 15 ನೇ ಸ್ಥಾನ ಹಾಗೂ ವಿಶ್ವದ 130 ನೇ ಸ್ಥಾನ ಪಡೆದಿದ್ದಾರೆ. ಡಾ. ಕುಲಕರ್ಣಿ ಅವರು 113 ಸಂಶೋಧನಾ ಪ್ರಕಟನೆಗಳು, 87 ಸಂಶೋಧನಾ ಪ್ರಭಂದಗಳು, 6 ಪುಸ್ತಕಗಳನ್ನು ರಚಿಸಿದ್ದಾರೆ ಮತ್ತು 7 ಪೇಟೆಂಟ್ ಗಳನ್ನು ಕೂಡ ಪಡೆದಿದ್ದಾರೆ. ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಮರೆವು ಕಾಯಿಲೆ ಹಾಗೂ ಕ್ಯಾನ್ಸರ್ ದಂಥ ರೋಗಗಳ ಔಷಧ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಅವರು, ರಾಜ್ಯ ಹಾಗೂ ಕೇಂದ್ರ ಸರಕಾರದಿಂದ 91 ಲಕ್ಷ ರೂಪಾಯಿ ಅನುದಾನವನ್ನೂ ಪಡೆದುಕೊಂಡಿದ್ದಾರೆ. ಡಾ. ಕುಲಕರ್ಣಿ ಅವರು ಅಂತಾರಾಷ್ಟ್ರೀಯ ವಿಜ್ಞಾನ ನಿಯತಕಾಲಿಕಗಳ ಸಂಪಾದಕಿಯ ಸದಸ್ಯ ಹಾಗೂ ವಿಮರ್ಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರ ಸಾಧನೆಗೆ ಬಿ.ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯದ ಅಧ್ಯಕ್ಷ, ಮಾಜಿ ಸಚಿವ ಶ್ರೀ ಎಂ. ಬಿ. ಪಾಟೀಲ, ಕುಲಪತಿ ಡಾ. ಆರ್. ಎಸ್. ಮುಧೋಳ ಹಾಗೂ ಅಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.