ದೆಹಲಿ-ಕೋಲ್ಕತ್ತಾ ತುರಂತೋ ಎಕ್ಸ್‌ಪ್ರೆಸ್ ರೈಲಿನಲ್ಲಿ ದರೋಡೆ
Team Udayavani, Oct 16, 2022, 9:15 PM IST
ಪಾಟ್ನಾ: ದೆಹಲಿ-ಕೋಲ್ಕತ್ತಾ ನಡುವಿನ ತುರಂತೋ ಎಕ್ಸ್‌ಪ್ರೆಸ್ ರೈಲಿನ ಮೇಲೆ ಭಾನುವಾರ ಮುಂಜಾನೆ ದಾಳಿ ನಡೆಸಿದ 20 ಮಂದಿ ಶಸ್ತ್ರಸಜ್ಜಿತ ದರೋಡೆಕೋರರು ಪ್ರಯಾಣಿಕರಿಂದ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದಾರೆ.
ಬಿಹಾರದ ಪಾಟ್ನಾ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಪಾಟ್ನಾ ರೈಲು ನಿಲ್ದಾಣಕ್ಕೂ ಮೊದಲು ಯಾರೋ ಚೈನ್ ಎಳೆದು ರೈಲು ನಿಲ್ಲಿಸಿದರು.
ಈ ವೇಳೆ ಸುಮಾರು 20 ಶಸ್ತ್ರಸಜ್ಜಿತ ದರೋಡೆಕೋರರು ಆರು-ಏಳು ಬೋಗಿಗಳಿಗೆ ನುಗ್ಗಿ ಪ್ರಯಾಣಿಕರಿಂದ ಬೆಲೆಬಾಳುವ ವಸ್ತುಗಳು ಮತ್ತು ಸಾಮಾನುಗಳನ್ನು ಕಸಿದುಕೊಂಡು ಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಈ ಸಂಬಂಧ ಅನೇಕ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಹಿಂದೆ ದರೋಡೆಗಳಿಂದ ಕುಖ್ಯಾತಿ ಪಡೆದಿದ್ದ ಬಿಹಾರದಲ್ಲಿ ಮತ್ತೆ ಈ ರೀತಿಯ ಘಟನೆಗಳು ಹಿಂದಿನ ಪರಿಸ್ಥಿತಿಯನ್ನು ನೆನಪಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.