“ರೂಪಾಯಿ ಕುಸಿಯುತ್ತಿಲ್ಲ, ಡಾಲರ್ ಮೌಲ್ಯ ಹೆಚ್ಚುತ್ತಿದೆ’: ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Oct 16, 2022, 9:45 PM IST
ವಾಷಿಂಗ್ಟನ್: ಭಾರತದ ರೂಪಾಯಿ ಮೌಲ್ಯದಲ್ಲಿ ಕುಸಿತ ಉಂಟಾಗುತ್ತಿಲ್ಲ. ಆದರೆ ಅಮೆರಿಕದ ಡಾಲರ್ ಮೌಲ್ಯದಲ್ಲಿ ಏರಿಕೆ ಕಾಣುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಗಣನೀಯ ಇಳಿಕೆ ಕಂಡುಬರುತ್ತಿರುವ ಬೆನ್ನಲ್ಲೇ ಸಚಿವೆ ಈ ಹೇಳಿಕೆ ಕೊಟ್ಟಿದ್ದಾರೆ.
ಅಮೆರಿಕದ ವಾಷಿಂಗ್ಟನ್‌ನಲ್ಲಿ ಅಂತಾರಾಷ್ಟ್ರಿಯ ಹಣಕಾಸು ನಿಧಿ(ಐಎಂಎಫ್) ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ ಅವರು ಅಲ್ಲಿನ ಸುದ್ದಿಗಾರರೊಂದಿಗೆ ಈ ಮಾತನ್ನಾಡಿದ್ದಾರೆ. “ಭಾರತ ಮಾತ್ರವಲ್ಲ, ಹಲವು ರಾಷ್ಟ್ರಗಳು ಡಾಲರ್ ಎದುರು ಗಟ್ಟಿಯಾಗಿ ನಿಲ್ಲಲು ಹೋರಾಡುತ್ತಿವೆ. ಭಾರತ ಈ ವಿಚಾರದಲ್ಲಿ ಹಲವು ರಾಷ್ಟ್ರಗಳಿಗಿಂತ ಉತ್ತಮ ಮಟ್ಟದಲ್ಲಿದೆ’ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಶೇ.8ರಷ್ಟು ಕುಸಿತಗೊಂಡ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ನಿರ್ಮಲಾ ಈ ರೀತಿ ಉತ್ತರಿಸಿದ್ದಾರೆ.
ಇದೇ ವೇಳೆ ಜಾರಿ ನಿರ್ದೇಶನಾಲಯವು ಸರ್ಕಾರದ ನಿರ್ದೇಶನದಲ್ಲಿದೆ ಎನ್ನುವ ಆರೋಪದ ಬಗ್ಗೆ ಬಗ್ಗೆ ಮಾತನಾಡಿದ ಸಚಿವೆ, “ಇ.ಡಿ ಸಂಪೂರ್ಣವಾಗಿ ಸ್ವತಂತ್ರವಾದದ್ದು. ಬೇರೊಂದು ಏಜೆನ್ಸಿ ತೆಗೆದುಕೊಂಡಿರುವ ಪ್ರಕರಣಕ್ಕೇ ಇ.ಡಿ ಆಗಮನವಾಗುತ್ತದೆಯೇ ಹೊರತು ಪ್ರಕರಣ ಮೊದಲನೇ ಹಂತದಲ್ಲೇ ಇ.ಡಿ ಅಲ್ಲಿರುವುದಿಲ್ಲ. ಆದರೆ ಒಮ್ಮೆ ಈ ಇಲಾಖೆಯ ಕೈ ಸೇರಿದರೆ ಅಲ್ಲಿ ಬಲವಾದ ಸಾಕ್ಷಿ ಇದ್ದೇ ಇರುತ್ತದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.