ಹೆಚ್ಚುತ್ತಿದೆ ಡೆಂಗ್ಯೂ! ಪ್ರಸ್ತುತ ರಾಜ್ಯದಲ್ಲಿ 7,024 ಡೆಂಗ್ಯೂ ಪ್ರಕರಣ ಸಕ್ರಿಯ

ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

Team Udayavani, Oct 17, 2022, 6:55 AM IST

ಹೆಚ್ಚುತ್ತಿದೆ ಡೆಂಗ್ಯೂ! ಪ್ರಸ್ತುತ ರಾಜ್ಯದಲ್ಲಿ 7,024 ಡೆಂಗ್ಯೂ ಪ್ರಕರಣ ಸಕ್ರಿಯ

ಬೆಂಗಳೂರು: ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಜತೆಗೆ ಡೆಂಗ್ಯೂ ಅಬ್ಬರ ಹೆಚ್ಚಾಗಿದ್ದು, ಜನಸಾಮಾನ್ಯರಲ್ಲಿ ಆತಂಕ ಹುಟ್ಟಿಸಿದೆ.

ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,024ಕ್ಕೆ ತಲುಪಿವೆ. 23 ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿವೆ. ಕಳೆದ ವರ್ಷ ರಾಜ್ಯದಲ್ಲಿ ಜನವರಿಯಿಂದ ಡಿಸೆಂಬರ್‌ವರೆಗೆ 7,189 ಪ್ರಕರಣಗಳು ವರದಿಯಾಗಿ ಐವರು ಮೃತಪಟ್ಟಿದ್ದರು. ಆದರೆ ಈ ವರ್ಷ ಜನವರಿಯಿಂದ ಈವರೆಗೆ ಪ್ರಕರಣಗಳ ಸಂಖ್ಯೆ 7,024ರ ಗಡಿ ದಾಟಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಸೋಂಕು ಹೆಚ್ಚಾಗಿದೆ. ಈ ವರ್ಷ 1.45 ಲಕ್ಷಕ್ಕೂ ಅಧಿಕ ಡೆಂಗ್ಯೂ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ.

ರಾಜ್ಯದಲ್ಲಿ ದೃಢಪಟ್ಟಿರುವ ಡೆಂಗ್ಯೂ ಪ್ರಕರಣಗಳಲ್ಲಿ ಬಹುತೇಕ ಪ್ರಕರಣಗಳು ಬೆಂಗಳೂರಿನಲ್ಲಿ (1,227) ವರದಿ ಯಾಗಿವೆ. ಉಳಿದಂತೆ ಮೈಸೂರು 605, ಉಡುಪಿ 476, ಚಿತ್ರದುರ್ಗ 328, ದಕ್ಷಿಣ ಕನ್ನಡ 316, ವಿಜಯಪುರ 341, ಕಲಬುರಗಿ 278, ಬೆಳಗಾವಿ 265, ಶಿವಮೊಗ್ಗ 263, ಮಂಡ್ಯ 249, ಚಿಕ್ಕಬಳ್ಳಾಪುರ 237, ಹಾಸನ 217, ಕೋಲಾರ 200, ಧಾರವಾಡ 199, ಚಾಮರಾಜನಗರ 197, ದಾವಣಗೆರೆ 195, ಕೊಪ್ಪಳ 162, ಬಳ್ಳಾರಿ 143, ತುಮಕೂರು 140, ಚಿಕ್ಕಮಗಳೂರು 138, ಬಾಗಲಕೋಟೆ 129, ರಾಮನಗರ 119, ಗದಗ 109 ಡೆಂಗ್ಯೂ ಸೋಂಕು ಪ್ರಕರಣಗಳು ವರದಿಯಾಗಿವೆ.

62,174 ರಕ್ತದ ಮಾದರಿ ಸಂಗ್ರಹ
ಉಡುಪಿಯಲ್ಲಿ 2, ವಿಜಯಪುರ ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಇಬ್ಬರು ಡೆಂಗ್ಯೂ ನಿಂದ ಮೃತಪಟ್ಟಿದ್ದಾರೆ. ಡೆಂಗ್ಯೂ ಲಕ್ಷಣ ಇರುವ 62,174 ವ್ಯಕ್ತಿಗಳ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸ ಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮೇ ತಿಂಗಳಿನಲ್ಲಿ ಡೆಂಗ್ಯೂ ಪ್ರಕರಣಗಳು ಒಂದೂವರೆ ಸಾವಿರ ಆಸುಪಾಸಿ ನಲ್ಲಿದ್ದವು. ಈಗ ಇದರ ಪ್ರಮಾಣ ಹೆಚ್ಚಾಗಿವೆ. ಈಗ ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದ ಬೆನ್ನಲ್ಲೇ ಡೆಂಗ್ಯೂ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜನರು ಮನೆಯ ಸುತ್ತಮುತ್ತ ನೀರು, ತ್ಯಾಜ್ಯ ಶೇಖರಣೆ ಆಗದಂತೆ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

1,700 ಚಿಕನ್‌ ಗುನ್ಯ ಸಕ್ರಿಯ
ಚಿಕೂನ್‌ ಗುನ್ಯಾ ಪ್ರಕರಣಗಳಲ್ಲೂ ಏರಿಕೆ ಕಂಡು ಬರುತ್ತಿದ್ದು, ರಾಜ್ಯದಲ್ಲಿ 29 ಜಿಲ್ಲೆ ಗಳಲ್ಲಿ 1,700 ಮಂದಿ ಚಿಕನ್‌ ಗುನ್ಯಾದಿಂದ ಬಳಲು ತ್ತಿದ್ದಾರೆ. 50 ಸಾವಿರಕ್ಕೂ ಅಧಿಕ ಮಂದಿ ಚಿಕನ್‌ ಗುನ್ಯಾ ಶಂಕಿತರನ್ನು ಗುರುತಿಸಿ ತಪಾಸಣೆಗೆ ಒಳಪಡಿಸಲಾಗಿತ್ತು. 27,122 ಮಂದಿಯ ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಅವರಲ್ಲಿ 1,700 ಮಂದಿ ಈ ಜ್ವರಕ್ಕೆ ಒಳಗಾಗಿರುವುದು ದೃಢಪಟ್ಟಿದೆ. ವಿಜಯಪುರದಲ್ಲಿ 297, ಕೋಲಾರದಲ್ಲಿ 197, ಹಾಸನದಲ್ಲಿ 132, ಚಿತ್ರದುರ್ಗದಲ್ಲಿ 118 ಪ್ರಕರಣ ಪತ್ತೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಪ್ರಕರಣ ಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹಠಾತ್‌ ಜ್ವರ, ಕೀಲುನೋವು, ಸ್ನಾಯುನೋವು, ಆಯಾಸ, ತಲೆನೋವು ಈ ಜ್ವರದ ಲಕ್ಷಣವಾಗಿದೆ.

ಡೆಂಗ್ಯೂ ಲಕ್ಷಣಗಳೇನು ?
ತೀವ್ರ ಜ್ವರ, ಅತಿಯಾದ ಆಯಾಸ, ತಲೆನೋವು, ಕಣ್ಣು ನೋವು, ಸ್ನಾಯು, ಕೀಲು ಅಥವಾ ಮೂಳೆ ನೋವು, ವಾಕರಿಕೆ, ವಾಂತಿ, ದದ್ದುಗಳು, ರಕ್ತದಲ್ಲಿ ಪ್ಲೇಟ್‌ಲೆಟ್‌ ಕಡಿಮೆ ಆಗುವುದು ಡೆಂಗ್ಯೂ ಜ್ವರದ ಲಕ್ಷಣ ಗಳಾಗಿವೆ. ಕೆಲವೊಮ್ಮೆ 2-3 ದಿನ ಜ್ವರ ಬಂದ ಬಳಿಕ ಜ್ವರ ಏರುತ್ತದೆ. ಈ ಲಕ್ಷಣ ಕಂಡು ಬಂದಲ್ಲಿ ತತ್‌ಕ್ಷಣ ವೈದ್ಯರ ಸಲಹೆಯನ್ನು ಪಡೆಯಬೇಕು ಎಂದು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಪ್ರೊಫೆಸರ್‌ ಹಾಗೂ ಮಕ್ಕಳ ವೈದ್ಯಶಾಸ್ತ್ರ ವಿಭಾಗದ ವೈದ್ಯ ಡಾ| ಎನ್‌. ನಿಜಗುಣ “ಉದಯವಾಣಿ’ಗೆ ಮಾಹಿತಿ ನೀಡಿದ್ದಾರೆ.

ಮುನ್ನೆಚ್ಚರಿಕೆಗಳೇನು?
-ಸೊಳ್ಳೆ ಉತ್ಪತ್ತಿಯಾಗದಂತೆ ನೋಡಿಕೊಳ್ಳಿ.
-ಸೊಳ್ಳೆಗಳ ಕಡಿತ ತಡೆಗಟ್ಟಲು ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಬಟ್ಟೆ ಧರಿಸಿ.
-ಮನೆಯಿಂದ ಹೊರಬರುವ ಮೊದಲು ಸೊಳ್ಳೆ ನಿವಾರಕ ಬಳಸಿ.
-ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಿ.
-ಸೂರ್ಯಾಸ್ತದ ಮೊದಲೇ ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ಮುಚ್ಚಿ ಸೊಳ್ಳೆಗಳು ಬರದಂತೆ ನೋಡಿಕೊಳ್ಳಿ.
-ಮನೆ ಬಳಿಯ ಟಯರ್‌, ಮಡಿಕೆ, ಹೂದಾನಿ, ಡ್ರಮ್‌, ಅಂಗಳದಲ್ಲಿ ಅಥವಾ ಹೊಂಡ ಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಿ.
-ಮನೆ ಸಮೀಪ ತ್ಯಾಜ್ಯ ಸಂಗ್ರಹಿಸಬೇಡಿ.
-ಜ್ವರ ಬಂದಾಗ ಸೂಕ್ತ ಚಿಕಿತ್ಸೆ ಪಡೆಯಿರಿ.

ಜನಸಾಮಾನ್ಯರು ಡೆಂಗ್ಯೂ ಜ್ವರದ ಲಕ್ಷಣ ಕಂಡು ಬಂದರೆ ವೈದ್ಯರನ್ನು ಭೇಟಿಯಾಗಿ ಸಮಯಕ್ಕೆ ಸರಿಯಾಗಿ ಔಷಧ ತೆಗೆದುಕೊಳ್ಳಬೇಕು. ಮನೆ ಸಮೀಪದಲ್ಲಿ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು.
-ಡಾ| ಎನ್‌. ನಿಜಗುಣ,
ಇಂದಿರಾ ಗಾಂಧಿ ಮಕ್ಕಳ
ಆರೋಗ್ಯ ಸಂಸ್ಥೆ ವೈದ್ಯರು


- ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.