ಕಲಿಕಾ ಚೇತರಿಕೆಗೆ ಶೈಕ್ಷಣಿಕ ಕಾರ್ಯಪಡೆ
ಕಲಿಕಾ ಚೇತರಿಕೆ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ
Team Udayavani, Oct 17, 2022, 6:25 AM IST
ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೈಗೊಂಡ ಮಹತ್ವಾಕಾಂಕ್ಷಿ “ಕಲಿಕಾ ಚೇತರಿಕೆ’ ವಿಶೇಷ ಕಾರ್ಯಕ್ರಮವು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಮರ್ಪಕ ಅನುಷ್ಠಾನಗೊಳ್ಳದೆ ಇರು ವು ದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ, ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಶೈಕ್ಷಣಿಕ ಕಾರ್ಯಪಡೆ ರಚಿಸಲು ನಿರ್ಧರಿಸಿದೆ.
ಕೋವಿಡ್ನಿಂದಾಗಿ ಶಾಲೆಗಳಲ್ಲಿ ವ್ಯವಸ್ಥಿತವಾಗಿ ಬೋಧನೆ, ಕಲಿಕಾ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ. ಇದನ್ನು ಸರಿದೂಗಿಸಲು ಪ್ರಸಕ್ತ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ’ ವರ್ಷ ವೆಂದು ಘೋಷಿಸಿದೆ. ಆದರೆ ಕಲಿಕಾ ಚೇತ ರಿಕೆಯ ಉಪಕ್ರಮಗಳು ಸರಿಯಾಗಿ ಅನುಷ್ಠಾನ ಗೊಂಡಿರಲಿಲ್ಲ.
ಕಾರ್ಯಪಡೆಯಲ್ಲಿ ಯಾರಿರುತ್ತಾರೆ?
ಜಿಲ್ಲಾ ಮಟ್ಟದ ಶೈಕ್ಷಣಿಕ ಕಾರ್ಯಪಡೆಯಲ್ಲಿ ಡಯಟ್ ಪ್ರಾಂಶುಪಾಲರು ಅಧ್ಯಕ್ಷರಾಗಿರುತ್ತಾರೆ. ಡಯಟ್ ಹಿರಿಯ ಉಪನ್ಯಾಸಕರು ನೋಡಲ್ ಅಧಿಕಾರಿಯಾಗಿದ್ದು, ವಿಷಯ ಪರಿವೀಕ್ಷಕರು, ಬಿಆರ್ಪಿ, ಸಿಆರ್ಪಿ ಸದಸ್ಯರಾಗಿದ್ದಾರೆ.
ಕಾರ್ಯಪಡೆ ಜವಾಬ್ದಾರಿಗಳೇನು?
-ತರಗತಿಗಳಲ್ಲಿ ಕಲಿಕಾ ಚಟುವಟಿಕೆಗಳ ಅನುಷ್ಠಾನ ವನ್ನು ಖಾತ್ರಿಪಡಿಸಿಕೊಳ್ಳುವುದು
– ಸಿಆರ್ಪಿಗಳ ಮೂಲಕ ಪ್ರಗತಿ ವಿವರ ಪಡೆದು ಶೈಕ್ಷಣಿಕ ಬೆಂಬಲ ನೀಡುವುದು
– ಪ್ರತೀ ತಿಂಗಳು ಎಲ್ಲ ಹಂತದ ಶಿಕ್ಷಕರಿಗೆ ಕ್ಲಸ್ಟರ್ ಸಮಾಲೋಚನ ಸಭೆ ನಡೆಸುವುದು
– ಕಲಿಕಾ ಹಾಳೆ ಹಾಗೂ ಶಿಕ್ಷಕರ ಕೈಪಿಡಿಗಳ ಸಮರ್ಪಕ ಬಳಕೆ ಖಾತ್ರಿಪಡಿಸಿಕೊಳ್ಳುವುದು
– ಕಲಿಕಾ ಫಲ ಆಧಾರಿತ ತರಗತಿ ಪ್ರಕ್ರಿಯೆ ನಡೆಯು ವಂತೆ ನಿರಂತರ ಮಾರ್ಗದರ್ಶನ ನೀಡುವುದು
– ಶಿಕ್ಷಕರು ಹಾಗೂ ಅಧಿಕಾರಿಗಳ ಸಂದೇಹ ಪರಿಹಾರ
– ಮೌಲ್ಯಮಾಪನ ವಿಧಾನಗಳ ಬಗ್ಗೆ ಮಾರ್ಗ ದರ್ಶನ
– ಬ್ಲಾಕ್ ಹಾಗೂ ಜಿಲ್ಲಾ ಹಂತದಲ್ಲಿ ಸಹಾಯ ವಾಣಿಯ ಸಮರ್ಪಕ ನಿರ್ವಹಣೆ
– ಜಿಲ್ಲಾ ಹಂತದಲ್ಲಿ ನೀಡಿರುವ ದತ್ತು ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮಾರ್ಗದರ್ಶನ ನೀಡುವುದನ್ನು ಖಾತ್ರಿಪಡಿಸಿಕೊಳ್ಳುವುದು
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕರು (ಅಭಿವೃದ್ಧಿ) ಕೂಡಲೇ ಜಿಲ್ಲಾ ಹಂತದ ಶೈಕ್ಷಣಿಕ ಕಾರ್ಯಪಡೆ ರಚಿಸಬೇಕು. ಇದಕ್ಕಾಗಿ ಸೂಕ್ತ ಕ್ರಮ ಕೈಗೊಂಡು ಕಲಿಕಾ ಚೇತರಿಕೆ ಕಾರ್ಯ ಕ್ರಮದ ಉಪಕ್ರಮಗಳ ಪರಿಣಾಮ ಕಾರಿ ಅನುಷ್ಠಾನ ಕುರಿತ ವರದಿಯನ್ನು ಪ್ರತಿ ತಿಂಗಳು ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಗೆ ಕಳುಹಿಸಬೇಕು.
– ಬಿ.ಬಿ. ಕಾವೇರಿ, ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರು
-ಎಚ್.ಕೆ. ನಟರಾಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.