ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ಸಾವಿರಾರು ಭಕ್ತರ ಸಂಭ್ರಮ
Team Udayavani, Oct 17, 2022, 7:21 PM IST
ಮಡಿಕೇರಿ: ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಸೋಮವಾರ ಪವಿತ್ರ ತೀರ್ಥೋದ್ಭವವಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯದ ಸಾವಿರಾರು ಭಕ್ತರು ಆಗಮಿಸಿ ಪವಿತ್ರ ತೀರ್ಥ ವನ್ನು ಪಡೆಯುತ್ತಿದ್ದಾರೆ.
ಕಾವೇರಿ ತುಲಾ ಸಂಕ್ರಮಣ ಶುಭ ದಿನದಂದು ರಾತ್ರಿ 7.21 ಕ್ಕೆ ಮೇಷ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವವಾಗಿದ್ದು, ಪುಣ್ಯಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.
ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ದೇವಾಲಯ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಅವರ ನೇತೃತ್ವದಲ್ಲಿ ಭಾಗಮಂಡಲದಿಂದ ತಲಕಾವೇರಿಗೆ ಶಾಸ್ತ್ರೋಕ್ತವಾಗಿ ಚಿನ್ನಾಭರಣ ತೆಗೆದುಕೊಂಡು ಹೋಗಿ ತಾಯಿ ಶ್ರೀ ಕಾವೇರಿ ಮಾತೆಗೆ ತೊಡಿಸಿ. ಕ್ಷೇತ್ರದ ತುಂಬಾ ಹೂವಿನ ಅಲಂಕಾರ ಮಾಡಲಾಗಿದೆ.
ಭಾಗಮಂಡಲದಲ್ಲಿ ಪಿಂಡ ಪ್ರದಾನ, ಕೇಶ ಮುಂಡನಕ್ಕೆ ಪ್ರತ್ಯೇಕ ಸ್ಥಳಗಳನ್ನು ನಿಗದಿಪಡಿಸಲಾಗಿತ್ತು. ಪುಣ್ಯ ಸ್ನಾನಕ್ಕೆ ಅನುಕೂಲ ಮಾಡುವ ದೃಷ್ಟಿಯಿಂದ ತ್ರಿವೇಣಿ ಸಂಗಮದಲ್ಲಿ ಮರಳು ಮಿಶ್ರಿತ ಹೂಳನ್ನು ತೆಗೆದು, ಸೇತುವೆ ಬಳಿ ಮರದ ಹಲಗೆಗಳನ್ನು ಬಳಸಿ ನೀರನ್ನು ತಡೆ ಹಿಡಿಯಲಾಗಿತ್ತು.
ನಡೆದುಕೊಂಡು ಕ್ಷೇತ್ರಕ್ಕೆ ಬರುವ ಭಕ್ತರಿಗೆ ಅನುಕೂಲವಾಗಲು ಭಾಗಮಂಡಲದಿಂದ ತಲಕಾವೇರಿವರೆಗಿನ ರಸ್ತೆ ಬದಿಯಲ್ಲಿ ಬೆಳೆದಿದ್ದ ಕುರುಚಲು ಕಾಡುಗಳನ್ನು ತೆರವು ಮಾಡಿ 8 ಕಿ.ಮೀ ರಸ್ತೆ ಉದ್ದಕ್ಕೂ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಲಾಗಿದ್ದು, ವಾಹನ ಸವಾರರು ಸಂಚರಿಸಲು ಅನುಕೂಲ ಕಲ್ಪಿಸಲಾಗಿದೆ. ಕ್ಷೇತ್ರಕ್ಕೆ ಬರುವ ಭಕ್ತರಿಗೆ ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.