ಉಪನ್ಯಾಸಕನ ಉಚಿತ ‘ಅಕ್ಷರಯಾತ್ರೆ ‘

ಕಲಿತ ವಿದ್ಯೆ ವ್ಯರ್ಥವಾಗಬಾರದೆಂಬ ಉದ್ದೇಶ ; ನಿತ್ಯವೂ ನಾಲ್ಕೈದು ಗ್ರಾಮಗಳಿಗೆ ತೆರಳಿ ಉಚಿತ ಶಿಕ್ಷಣ

Team Udayavani, Oct 18, 2022, 3:59 PM IST

19

ಕುಳಗೇರಿ ಕ್ರಾಸ್‌: ಗ್ರಾಮದ ಉಪನ್ಯಾಸಕ ಶಂಕರ ತೆಗ್ಗಿ ನಿತ್ಯವೂ ಒಂದಿಲ್ಲೊಂದು ಗ್ರಾಮಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಸೇರಿಸಿ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ಗ್ರಾಮೀಣ ಭಾಗದಲ್ಲಿ ಮನೆ ಮಾತಾಗಿದ್ದಾರೆ.

ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಖಾಸಗಿ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಬೆಳಗ್ಗೆ-ಸಂಜೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಉಚಿತ ಶಿಕ್ಷಣ ನೀಡುತ್ತಿದ್ದಾರೆ.

ಅಕ್ಷರ ಯಾತ್ರೆ: ತಾನು ಪಡೆದ ಶಿಕ್ಷಣ ವ್ಯರ್ಥವಾಗಬಾರದು ಎಂಬ ಉದ್ದೇಶದಿಂದ “ಅಕ್ಷರ ಯಾತ್ರೆ’ ಶೀರ್ಷಿಕೆಯಡಿ ವಿವಿಧ ಗ್ರಾಮಗಳಿಗೆ ಹೋಗುವ ಉಪನ್ಯಾಸಕ ಶಂಕರ ತೆಗ್ಗಿಯವರು ಅಲ್ಲಿನ ಪ್ರಮುಖರನ್ನು ಭೇಟಿ ಮಾಡಿ ಮನೆ-ಮನೆಗಳಿಗೆ ತೆರಳಿ ಮಕ್ಕಳನ್ನು ಒಗ್ಗೂಡಿಸಿ ಶಾಲೆ ಅಥವಾ ದೇವಸ್ಥಾನ ಆವರಣದಲ್ಲಿ ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ನೂರಾರು ಮಕ್ಕಳು ಉಚಿತ ಶಿಕ್ಷಣದ ಸೌಲಭ್ಯ ಪಡೆಯುತ್ತಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಶಿಕ್ಷಣದ ಕೊರತೆ ಇದೆ. ಅನೇಕ ಮಕ್ಕಳು ಟ್ಯೂಷನ್‌ ಪಡೆಯಲು ಪಟ್ಟಣ ಪ್ರದೇಶಕ್ಕೆ ಬರಬೇಕು. ನಾನು ಸಹ ಬಡ ಕುಟುಂಬದಲ್ಲಿ ಜನಿಸಿದವನು. ಗ್ರಾಮೀಣ ಮಕ್ಕಳ ನೋವು ಅರಿತಿರುವೆ. ಸುಮಾರು ವರ್ಷಗಳಿಂದ “ಅಕ್ಷರ ಯಾತ್ರೆ’ ಆರಂಭಿಸಿದ್ದು, ನಿತ್ಯ ನಾಲ್ಕೈದು ಗ್ರಾಮಗಳಿಗೆ ತೆರಳಿ ಅಲ್ಲಿಯ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದೇನೆ. ಸಮಾಜಕ್ಕಾಗಿ ನಾನು ಏನನ್ನಾದರೂ ಕೊಡಬೇಕೆಂಬುದಿತ್ತು. ಹೀಗಾಗಿ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕೃತಿ-ಸಂಸ್ಕಾರ ಹೇಳಿ ಕೊಡುತ್ತಿದ್ದೇನೆ. ಮಕ್ಕಳು-ಪಾಲಕರು ಆಸಕ್ತಿ ತೋರುತ್ತಿದ್ದಾರೆ. ನನಗೆ ಖುಷಿ ತಂದಿದೆ ಎನ್ನುತ್ತಾರೆ ಉಪನ್ಯಾಸಕ ಶಂಕರ ತೆಗ್ಗಿ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವ ಶಂಕರ ತೆಗ್ಗಿ ಕಾರ್ಯ ಶ್ಲಾಘನೀಯ. ಗ್ರಾಮೀಣ ಮಕ್ಕಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಣ ಇಲಾಖೆ ಅಧಿಕಾರಿಗಳು ಇಂಥ ವ್ಯಕ್ತಿಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಇದರಿಂದ ಕಟ್ಟ ಕಡೆಯ ವಿದ್ಯಾರ್ಥಿಗಳಿಗೂ ಉತ್ತಮ ಶಿಕ್ಷಣ ದೊರೆಯುತ್ತದೆ. ಬೀರಪ್ಪ ದ್ಯಾವನಗೌಡ್ರ, ಗ್ರಾಮಸ್ಥ.

ನಾನು ಪಿಯುಸಿ ಓದುತ್ತಿದ್ದು, ಟ್ಯೂಷನ್‌ ಗಾಗಿ ಪಟ್ಟಣಕ್ಕೆ ಹೋಗಬೇಕು. ಅದರಲ್ಲೂ ಒಬ್ಬ ಉಪನ್ಯಾಸಕರು ನಮ್ಮ ಮನೆ ಬಾಗಿಲಿಗೆ ಬಂದು ಉಚಿತ ಶಿಕ್ಷಣ ನೀಡುತ್ತೇನೆ ಎಂದರೆ ನಮ್ಮ ಪುಣ್ಯ. ಶಿಕ್ಷಕ ಶಂಕರ ಅವರಿಗೆ ನಾವು ಚಿರಋಣಿ. ಸದ್ಯ ನಮ್ಮ ಗ್ರಾಮದಲ್ಲಿ ನೂರಾರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುತ್ತಿದ್ದೇವೆ.  –ಚೈತ್ರಾ ಮೂಗನೂರಮಠ, ವಿದ್ಯಾರ್ಥಿನಿ, ತಳಕವಾಡ.

„ಮಹಾಂತಯ್ಯ ಹಿರೇಮಠ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.