ಕೆರೆ-ಕಟ್ಟೆ ರಕ್ಷಣೆಯಲ್ಲಿ ನಿರ್ಲಕ್ಷ್ಯ


Team Udayavani, Oct 18, 2022, 4:30 PM IST

tdy-13

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಪ್ರಭಾವದಿಂದ ಬಹುತೇಕ ಕೆರೆ ಕುಂಟೆಗಳಿಗೆ ಕೋಡಿ ಹರಿಯುತ್ತಿದೆ ಭಾನುವಾರ ಜಿಲ್ಲೆಯ ಗೌರಿ ಬಿದನೂರು ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಯ ಕೆರೆಯ ಕಟ್ಟೆ ಹೊಡೆದು ಹೋಗಿ ಸುಮಾರು ನೂರಾರು ಎಕರೆ ಬೆಳೆ ನಾಶವಾಗಿ ಮನೆಗಳಿಗೆ ಹಾನಿಯಾಗಿದೆ.

ಸಣ್ಣ ನೀರಾವರಿ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಕೆರೆಯ ನೀರು ಹೊರಹರಿದಿದೆ. ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆ ಯ 201 ಕೆರೆಗಳು ಮತ್ತು ಜಿಪಂನ 1300ಕ್ಕೂ ಅಧಿಕ ಕೆರೆಗಳಿದ್ದು ಇತ್ತೀಚೆಗೆ ಸುರಿಯುತ್ತಿರುವ ಮಳೆ ಯಿಂದಾಗಿ ಕೆರೆ ಗಳು ಭರ್ತಿಯಾಗಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಇಲ್ಲದೆ ತನ್ನ ಅಸ್ತಿತ್ವ ಕಳೆದು ಕೊಳ್ಳುವ ಅಪಾಯ ತಲೆದೋರಿದೆ. ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿದ್ದು, ಕೆರೆಗಳು ಅಭದ್ರತೆಯಲ್ಲಿವೆ. ಸಣ್ಣ ನೀರಾ ವರಿ ಮತ್ತು ಜಿಪಂ ಅಧಿಕಾರಿಗಳು ಕೆರೆಗಳನ್ನು ಭದ್ರಗೊಳಿಸಿ ಅಭಿವೃದ್ಧಿ ಗೊಳಿಸಲು ನಿರ್ಲಕ್ಷ್ಯವಹಿಸಿದ್ದಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎಂ.ಎನ್‌ ನಾಗರಾಜ್‌ ಅವರು ಸೆಪ್ಟೆಂಬರ್‌ನಲ್ಲಿ ನಡೆಸಿದ ಕೆರೆಗಳನ್ನು ಸಂರಕ್ಷಣೆ ಮಾಡುವ ಕಾರ್ಯಪಡೆಯ ಸಭೆಯಲ್ಲಿ ಜಿಲ್ಲೆಯಲ್ಲಿರುವ ಕೆರೆ-ಕುಂಟೆಗಳು ಸ್ಥಿತಿಗಳು ಖುದ್ದು ಪರಿ ಶೀಲನೆ ನಡೆಸಿ ಯಾವುದಾದರೂ ಕೆರೆ ಶಿಥಿಲ ವ್ಯವಸ್ಥೆಯಲ್ಲಿ ಇದ್ದರೆ ಮಾಹಿತಿ ಯನ್ನು ನೀಡಬೇಕು ಎಂದು ಸೂಚಿಸಿದ್ದರು. ಆದರೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿ ಗಳು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ವ್ಯಾಪಕವಾಗಿರುವ ಕಾರಣ ಕೆರೆಗಳು ಭದ್ರವಾಗಿವೆ ಎಂದಿದ್ದರು. ಇತ್ತೀಚೆಗೆ ಜಿಲ್ಲೆಯ ಗೌರಿಬಿದನೂರು ಕೆರೆ ಒಡೆದಿದ್ದು, ಸುತ್ತಮುತ್ತಲ ಬೆಳೆ ನಷ್ಟವಾಗಿದೆ.

ಹಿರಿಯ ಅಧಿಕಾರಿಗಳ ಭೇಟಿ: ಸಣ್ಣ ನೀರಾವರಿ ಇಲಾಖೆಯ ಚೀಫ್‌ ಇಂಜಿನಿಯರ್‌ ರಾಘವನ್‌ ಅವರು ವಿಷಯ ತಿಳಿದ ಕೂಡಲೇ ತಾತ್ಕಾಲಿಕವಾಗಿ ಕೆರೆ ಯನ್ನು ಭದ್ರಗೊಳಿಸಲು ಕ್ರಮವಹಿಸಿ ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್‌ರೆಡ್ಡಿಗೆ ಸೂಚನೆ ನೀಡಿದ್ದರು. ನಿರೀಕ್ಷೆಗಿಂತ ಹೆಚ್ಚು ಮಳೆ ಪರಿಣಾಮ ಅಧಿಕಾರಿಗಳು ವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ, ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಅವರು ಭೇಟಿ ನೀಡಿ ಹೋದರೂ ಇದು ವರೆಗೂ ಕೆರೆಯನ್ನು ಅಭಿವೃದ್ಧಿಗೊಳಿಸಲು ಸಾಧ್ಯವಾಗಿಲ್ಲ ಜೊತೆಗೆ ರೈತರಿಗೆ ಪರಿ ಹಾರವೂ ಸಿಗಲಿಲ್ಲ ಎನ್ನುತ್ತಾರೆ ರೈತ ವಿಜಯಬಾವ ರೆಡ್ಡಿ.

ಜಿಲ್ಲೆಯ ಗೌರಿಬಿದನೂರು ತಾಲೂಕಿನಲ್ಲಿ ಕೆರೆಕಟ್ಟೆ ಒಡೆದುಗೋಗಿ ಬೆಳೆ ನಾಶವಾಗಿರುವ ಅಧಿಕಾರಿಗಳಿಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 128 ಎಕರೆ ಪ್ರದೇಶದಲ್ಲಿ ಬೆಳೆ ನಾಶವಾಗಿ ಸುಮಾರು 20 ಮನೆಗಳಿಗೆ ಜಖಂಗೊಂಡಿದೆ. ಕೂಡಲೇ ಪರಿಹಾರವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. – ಎನ್‌.ಎಂ.ನಾಗರಾಜ್‌ ಜಿಲ್ಲಾಧಿಕಾರಿ ಚಿಕ್ಕಬಳ್ಳಾಪುರ

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಬೀಳುತ್ತಿದೆ ಆದರೆ ಜಲ ಮೂಲಗಳಾದ ಕೆರೆ-ಕುಂಟೆಗಳನ್ನುಭದ್ರಗೊಳಿಸಿ ಅಭಿವೃಧಿœಗೊಳಿಸುವುದರಲ್ಲಿ ಸರ್ಕಾರ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ವಿಫಲರಾಗಿದ್ದಾರೆ ಅದರ ಪರಿಣಾಮ ಜಿಲ್ಲೆಯ ಗೌರಿಬಿದನೂರು ಮತ್ತು ಶಿಡ್ಲಘಟ್ಟ ತಾಲೂಕಿನ ರೈತರುಸಂಕಷ್ಟವನ್ನು ಅನುಭವಿಸಿದ್ದಾರೆ.-ಮುನೇಗೌಡ, ಜೆಡಿಎಸ್‌ ಅಧ್ಯಕ್ಷ

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.