ಗಂಗೊಳ್ಳಿ ಕ್ರಿಮಿನಲ್ ಪ್ರಕರಣ: ರೌಡಿಗೆ ಗಡಿಪಾರು ಆದೇಶ
Team Udayavani, Oct 18, 2022, 7:07 PM IST
ಗಂಗೊಳ್ಳಿ: ಗ್ರಾಮದ ಮೀನು ಮಾರ್ಕೆಟ್ ಬಳಿಯ ಜಾಮಿಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಸುಭಾನ್ (25) ಎಂಬಾತನನ್ನು ಉಪವಿಭಾಗ ದಂಡಾಧಿಕಾರಿಯವರು 6 ತಿಂಗಳ ಕಾಲ ಚಳ್ಳಕೆರೆ ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
6 ತಿಂಗಳ ಒಳಗೆ ಅನುಮತಿ ಪಡೆಯದೆ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಕಂಡು ಬಂದಲ್ಲಿ ಈತನನ್ನು ಬಂಧಿಸುವಂತೆ ಗಂಗೊಳ್ಳಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಿಗೆ ಆದೇಶ ಮಾಡಿದ್ದಾರೆ.
ಈತನು ರೌಡಿಯಾಗಿದ್ದು ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. 20ನೇ ವಯಸ್ಸಿನಲ್ಲಿಯೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಲು ಪ್ರಾರಂಭಿಸಿದ್ದು, ಸಹಚರರೊಂದಿಗೆ ಸೇರಿ ತಂಡ ಕಟ್ಟಿಕೊಂಡು, ಹೊಡೆದಾಟ, ದನ ಕಳ್ಳತನ, ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಕಳೆದ 5 ವರ್ಷಗಳಿಂದ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದು ಹಲವು ಕಾನೂನು ಕ್ರಮ ಜರುಗಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಬಂಧಿಸಲ್ಪಟ್ಟಿದ್ದರೂ ನಡವಳಿಕೆಯಲ್ಲಿ ಬದಲಾವಣೆ ತಂದುಕೊಂಡಿಲ್ಲ. ಗಂಗೊಳ್ಳಿ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿವೆ.
ಜಾಮೀನು ಪಡೆದು ಹೊರ ಬಂದ ನಂತರವೂ ಪುನಃ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಎಸ್‌ಐ ಉಪವಿಭಾಗಾಧಿಕಾರಿಗಳಿಗೆ ಸಲ್ಲಿಸಿದ ವರದಿಯಂತೆ ಗಡಿಪಾರು ಆದೇಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.