ಉಗ್ರರಿಗೆ ರಕ್ಷಣೆ ಬೇಡ; ಜಗತ್ತಿನ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಮನವಿ

Team Udayavani, Oct 18, 2022, 9:15 PM IST

ಉಗ್ರರಿಗೆ ರಕ್ಷಣೆ ಬೇಡ; ಜಗತ್ತಿನ ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಉಗ್ರರಿಗೆ, ಮಾದಕ ವಸ್ತುಗಳ ಪೂರೈಕೆದಾರರಿಗೆ ಭಯೋತ್ಪಾದಕರಿಗೆ ಜಗತ್ತಿನಲ್ಲಿ ಸುರಕ್ಷಿತ ವ್ಯವಸ್ಥೆ ಇದೆ ಎಂಬ ಭಾವನೆಯೇ ಮೂಡಿಸುವ ವಾತಾವರಣ ಇರಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜತೆಗೆ ಘಾತಕ ವ್ಯಕ್ತಿಗಳ ಪತ್ತೆಗೆ ನೀಡಲಾಗುವ ರೆಡ್‌ಕಾರ್ನರ್‌ ನೋಟಿಸ್‌ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಶುರುವಾದ ಇಂಟರ್‌ಪೋಲ್‌ನ 90ನೇ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಜಗತ್ತಿಗೆ ಭಯೋತ್ಪಾದನೆ, ಭ್ರಷ್ಟಾಚಾರ, ಮಾದಕ ವಸ್ತುಗಳ ಕಳ್ಳಸಾಗಣೆ, ಸಂಘಟಿತ ಅಪರಾಧ, ಕಳ್ಳ ಬೇಟೆ ಮಾರಕವಾಗಿದೆ. ಇಂಥ ಕೃತ್ಯಗಳನ್ನು ಎಸಗುವವರಿಗೆ ಜಗತ್ತಿನಲ್ಲಿ ಸುರಕ್ಷಿತ ವ್ಯವಸ್ಥೆ ಇದೆ ಎಂದು ಅನಿಸುವ ವ್ಯವಸ್ಥೆ ಇರಬಾರದು.

ಈ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಬದಲಾವಣೆಗಳು ನಿಜಕ್ಕೂ ಅಪಾಯಕಾರಿಯಾಗಿದೆ. ಜಗತ್ತಿನಾದ್ಯಂತ ಅವುಗಳ ಬೆದರಿಕೆ ಇರುವಾಗ ಕೇವಲ ಸ್ಥಳೀಯ ಮಟ್ಟದಲ್ಲಿ ಅದರ ವಿರುದ್ದ ಕಾರ್ಯಾಚರಣೆ ನಡೆದರೆ ಸಾಲದು’ ಎಂದರು.

ಹಲವು ದಶಕಗಳಿಂದ:
ಗಡಿಯಾಚೆಯಿಂದ ಭಾರತ ಹಲವು ದಶಕಗಳಿಂದ ಉಗ್ರವಾದದ ಸಮಸ್ಯೆ ಎದುರಿಸುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸಿದರು. ಜಗತ್ತಿನಲ್ಲಿ ಸುರಕ್ಷಿತ ಮತ್ತು ಸುಭದ್ರ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಜಗತ್ತಿನ ರಾಷ್ಟ್ರಗಳ ನಡುವೆ ನಿಕಟ ಸಹಕಾರ ಇದ್ದಾಗ, ಭಯೋತ್ಪಾದನೆ, ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಹಲವು ಕುಕೃತ್ಯಗಳು ನಡೆಯಲು ಅವಕಾಶವೇ ಇಲ್ಲ ಎಂದರು.

ತ್ವರಿತಗೊಳ್ಳಲಿ:
ಘಾತಕ ಕೃತ್ಯಗಳನ್ನು ಎಸಗಿದ ವ್ಯಕ್ತಿಗಳಿಗಾಗಿ ಇಂಟರ್‌ಪೋಲ್‌ ಹೊರಡಿಸುವ ರೆಡ್‌ಕಾರ್ನರ್‌ ನೋಟಿಸ್‌ ಪ್ರಕ್ರಿಯೆ ಮತ್ತಷ್ಟು ತ್ವರಿತಗೊಳ್ಳಬೇಕು. ಇದರಿಂದಾಗಿ ಅಪರಾಧಿಗಳನ್ನು ಕ್ಷಿಪ್ರವಾಗಿ ಹಿಡಿದು ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಪ್ರಶ್ನೆ ತಬ್ಬಿಬ್ಟಾದ ಪಾಕ್‌ ನಿಯೋಗ
“ನೀವು ಭೂಗತ ಪಾತಕಿ ದಾವೂದ್‌ ಇಬ್ರಾಹಿಂ, 26/11 ದಾಳಿಯ ರೂವಾರಿ ಮತ್ತು ಉಗ್ರ ಹಫೀಜ್‌ ಸಯೀದ್‌ನನ್ನು ಭಾರತಕ್ಕೆ ಯಾವಾಗ ಹಸ್ತಾಂತರ ಮಾಡುತ್ತೀರಿ?’- ಇಂಥ ಪ್ರಶ್ನೆಯನ್ನು ಎದುರಿಸಿದ್ದು ಪಾಕಿಸ್ತಾನದ ಫೆಡರಲ್‌ ಇನ್ವೆಸ್ಟಿಗೇಷನ್‌ (ಎಫ್ಐಎ)ನ ಮುಖ್ಯಸ್ಥ ಮೊಹ್ಸಿàನ್‌ ಬಟ್‌. ಅನಿರೀಕ್ಷಿತವಾಗಿ ಬಂದ ಆಘಾತಕಾರಿ ಪ್ರಶ್ನೆಗೆ ತಡಬಡಾಯಿಸುವ ಸ್ಥಿತಿ ಅವರದ್ದಾಗಿತ್ತು.

ನವದೆಹಲಿಯ ಪ್ರಗತಿ ಮೈದಾನದಲ್ಲಿ ಮಂಗಳವಾರದಿಂದ ನಾಲ್ಕು ದಿನಗಳ ಕಾಲ ಆಯೋಜನೆಗೊಂಡಿರುವ ಇಂಟರ್‌ಪೋಲ್‌ನ 90ನೇ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಅವರು ಆಗಮಿಸಿದ್ದರು. ಪತ್ರಕರ್ತರು ಅವರನ್ನು ಪ್ರಶ್ನೆ ಮಾಡಿದಾಗ ತುಟಿ ಪಿಟಕ್ಕೆನ್ನದೆ, ಮೌನವಹಿಸಬೇಕು ಎಂದು ಸನ್ನೆ ಮಾಡುವ ಮೂಲಕ ಸೂಚಿಸಿದರು.

ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಮಾತನಾಡಿದ ಬಳಿಕ ಪತ್ರಕರ್ತರು ಪಾಕಿಸ್ತಾನದ ನಿಯೋಗದ ಬಳಿ ತೆರಳಿದ್ದರು. 1993ರಲ್ಲಿ ಮುಂಬೈನಲ್ಲಿ ನಡೆದಿದ್ದ ಸ್ಫೋಟದ ರೂವಾರಿ ದಾವೂದ್‌ ಇಬ್ರಾಹಿಂ, 2008ರ ನ.26ರಂದು ಮುಂಬೈನಲ್ಲಿ ನಡೆದಿದ್ದ ಉಗ್ರ ದಾಳಿಯ ರೂವಾರಿ ಹಫೀಜ್‌ ಸಯೀದ್‌, ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನನ್ನು ಭಾರತಕ್ಕೆ ಯಾವಾಗ ಪಾಕಿಸ್ತಾನ ಹಸ್ತಾಂತರಿಸಲಿದೆ, ಈ ಬಗ್ಗೆ ನಿಮ್ಮ ಸರ್ಕಾರ ಯಾವ ನಿರ್ಧಾರ ಕೈಗೊಂಡಿದೆ ಎಂದು ಪ್ರಶ್ನೆ ಮಾಡಿದರು.
ಪತ್ರಕರ್ತರ ಪ್ರಶ್ನೆಗಳಿಂದ ಒಂದು ಕ್ಷಣ ಎಫ್ಐಎನ ಮುಖ್ಯಸ್ಥ ಮೊಹ್ಸಿನ್‌ ಬಟ್‌ ಅವಕ್ಕಾದರು. ಜತೆಗೆ ಅವರು ಮೌನವಹಿಸುವಂತೆ ಸೂಚಿಸಿದರು. ಪದೇ ಪದೆ ಪ್ರಶ್ನೆಗಳನ್ನು ಪತ್ರಕರ್ತರು ಕೇಳುತ್ತಿರುವಂತೆಯೇ ಅವರು ಸ್ಥಳದಿಂದ ಹೊರ ನಡೆದರು.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.