ಸುನಿಲ್ ಕುಮಾರ್ಗೆ ಪ್ರಾಧಿಕಾರದ ಹೊಣೆ
Team Udayavani, Oct 18, 2022, 10:55 PM IST
ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅಧಿಕಾರ ಅವಧಿ ಅ. 14ಕ್ಕೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷ ರಾಗುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಅವರು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಸಂಬಂಧ ಸರಕಾರ ಆದೇಶ ಹೊರಡಿಸಿದ್ದು, ರಾಜ್ಯಪಾಲರು ಈ ಆದೇಶಕ್ಕೆ ಅಂಕಿತ ಹಾಕಿದ್ದಾರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟನೆ ತಿಳಿಸಿದೆ. ಈ ಹಿಂದೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಡಾ| ಬಿ.ವಿ. ವಸಂತಕುಮಾರ್, ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಡಿ. ಮಹೇಂದ್ರ, ಕರ್ನಾಟಕ ನಾಟಕ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಪ್ರೊ| ಭೀಮಸೇನ ಆರ್. ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಲಕ್ಷ್ಮೀನಾರಾಯಣ ಕಜೆಗದ್ದೆ ಅವರನ್ನು ರಾಜೋತ್ಸವ ಪ್ರಶಸ್ತಿಯ ಆಯ್ಕೆ ಸಲಹಾ ಸಮಿತಿಗೆ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿತ್ತು.
ಇದೀಗ ಇವರ ಅಧಿಕಾರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಮುಗಿಯುವವರೆಗೂ ಅವರು ಸಲಹಾ ಸಮಿತಿಯ ಸದಸ್ಯರಾಗಿ ಮುಂದುವರಿಯಲಿದ್ದಾರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.