ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪರೀಕ್ಷೆ ಪ್ರಕರಣ: ಮತ್ತಿಬ್ಬರ ಬಂಧನ
Team Udayavani, Oct 18, 2022, 11:29 PM IST
ಬೆಳಗಾವಿ: ಕೆಪಿಟಿ ಸಿಎಲ್ ಕಿರಿಯ ದರ್ಜೆ ಸಹಾಯಕ ಹುದ್ದೆ ಅಕ್ರಮ ಪರೀಕ್ಷೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಮತ್ತೆ ಇಬ್ಬರನ್ನು ಬಂಧಿಸಲಾಗಿದೆ.
ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ (26) ಹಾಗೂ ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ (27) ಎನ್ನುವವರನ್ನು ಬಂಧಿಸಲಾಗಿದೆ. ಬಂಧಿ ತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬಂಧಿತರ ಸಂಖ್ಯೆ 22ಕ್ಕೇರಿಕೆಯಾಗಿದೆ.
ಯಲ್ಲಪ್ಪ ರಕ್ಷಿ ಎಲೆಕ್ಟ್ರಾನಿಕ್ ಡಿವೈಸ್ಗಳನ್ನು ಅಭ್ಯರ್ಥಿಗಳಿಗೆ ಕೊಟ್ಟಿದ್ದ. ಶಿರಹಟ್ಟಿಯಲ್ಲಿ ಪ್ರಶ್ನೆ ಪತ್ರಿಕೆಗೆ ಉತ್ತರ ಹೇಳಿದ್ದ. ಈತನಿಂದ ಮೊಬೈಲ್ ಹಾಗೂ ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ನಾಗಪ್ಪ ದೊಡಮನಿ ಎಲೆಕ್ಟ್ರಾನಿಕ್ ಡಿವೈಸ್ ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದ. ಈತನಿಂದ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ.
ಜೈಲಿನಿಂದ ಬರುತ್ತಿದ್ದಂತೆ ಸೆರೆ
ಕೆಪಿಟಿಸಿಎಲ್ ಅಕ್ರಮ ಪರೀಕ್ಷೆ ಪ್ರಕರಣದಲ್ಲಿ ಜೈಲು ಸೇರಿದ್ದ ಮೂಡಲಗಿಯ ಸಂಜೀವ ಭಂಡಾರಿ ಜಾಮೀನಿನ ಮೇಲೆ ಹೊರ ಬರುತ್ತಿದ್ದಂತೆ ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿ ಸಿದ್ದಾರೆ. 2021ರಲ್ಲಿ ನಡೆದ ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆ ಅಕ್ರಮದಲ್ಲೂ ಈತ ಆರೋಪಿ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.