ನ.11ರಂದು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ

ಅ.21ರಂದು ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಸಿಎಂ ಚಾಲನೆ

Team Udayavani, Oct 19, 2022, 1:36 PM IST

8

ಬೆಂಗಳೂರು: ನ.11ರಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅ.21 ರಿಂದ ನ.7ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ 20 ‘ನಾಡಪ್ರಭು ಕೆಂಪೇಗೌಡ ರಥ’ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು ಎಂದರು.

ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯ ಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗ ನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.

ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್‌ ಪಾರ್ಕ್‌ನಲ್ಲಿ ಬಳಸಿಕೊಳ್ಳಲಾಗುವುದು. ಇಡೀ ಕಾರ್ಯಕ್ರಮ ಮತ್ತು ಅಭಿಯಾನಗಳು ಪಕ್ಷಾತೀತವಾದ ಕಾರ್ಯಕ್ರಮವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು ಎಂದು ಹೇಳಿದರು.

ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡಲಾಗಿದೆ. ಇದಕ್ಕೆ ಜಿಪಂ ಸಿಇಒಗಳು ನೋಡಲ್‌ ಅಧಿಕಾರಿಗಳಾಗಿರುತ್ತಾರೆ ಎಂದರು.

ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ ಎಂದು ಹೇಳಿದರು.

ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನು ಮುಂದೆ ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್‌ದೀಪ್‌, ಸದಸ್ಯರಾದ ತಲಕಾಡು ಚಿಕ್ಕರಂಗೇಗೌಡ, ಗಂಗಹನುಮಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.