176 ಕ್ರೀಡಾ ಕೋಚ್‌ಗಳ ಹುದ್ದೆ ಮಂಜೂರು: ಸಚಿವ ಡಾ. ನಾರಾಯಣ ಗೌಡ
Team Udayavani, Oct 19, 2022, 4:39 PM IST
ಬೆಂಗಳೂರು: ತಾಲೂಕು ಮಟ್ಟದ 176 ಕೋಚ್ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಿಗಬೇಕೆಂಬ ಉದ್ದೇಶದಿಂದ ಪ್ರತಿ ತಾಲೂಕಿಗೆ ಒಬ್ಬರಂತೆ 235 ಕೋಚ್ ಹುದ್ದೆಗಳ ಸೃಜನೆಗೆ ಸಚಿವರ ನಿರ್ದೇಶನದಂತೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹಲವು ಸುತ್ತಿನ ಸಭೆ, ಚರ್ಚೆಗಳು ನಡೆದ ಬಳಿಕ ಆರ್ಥಿಕ ಇಲಾಖೆ ಹಳೇ ತಾಲೂಕುಗಳನ್ನು ಪರಿಗಣಿಸಿ 176 ಕೋಚ್ ಕಂ ಸಂಯೋಜಕರ ಹುದ್ದೆಗಳನ್ನು ಮಂಜೂರು ಮಾಡಿದೆ.
ಕ್ರೀಡಾ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ತಾಲೂಕು ಮಟ್ಟದ ಹುದ್ದೆಗಳನ್ನು ಸೃಜಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮ ಸರ್ಕಾರ ಕ್ರೀಡೆಗೆ, ಕ್ರೀಡಾಪಟುಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿದೆ. ಗ್ರಾಮೀಣ ಪ್ರತಿಭೆಗಳಿಗೂ ಸೂಕ್ತ ತರಬೇತಿ ಹಾಗೂ ಹೆಚ್ಚಿನ ಅವಕಾಶ ಸಿಗಬೇಕು. ಆ ನಿಟ್ಟಿನಲ್ಲಿ ತಾಲೂಕು ಮಟ್ಟದ ಕೋಚ್ ಗಳನ್ನ ನೇಮಕ ಮಾಡಲು ತೀರ್ಮಾನಿಸಿದ್ದು 176 ಹುದ್ದೆಗಳಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ. ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಸಚಿವ ಡಾ.ನಾರಾಯಣ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.