ಗುಬ್ಬಿ: ಪತ್ನಿ ಮತ್ತು ನಾಲ್ಕು ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆಗೈದ ಕ್ರೂರಿ

Team Udayavani, Oct 19, 2022, 7:16 PM IST

1-saddsadas

ಗುಬ್ಬಿ : ತಾಲೂಕಿನ ನಿಟ್ಟೂರು ಹೋಬಳಿ ಮಾವಿನಹಳ್ಳಿ ಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಹಾಗೂ ತನ್ನ ನಾಲ್ಕು ವರ್ಷದ ಮಗುವನ್ನು ಬರ್ಬರವಾಗಿ ಕಬ್ಬಿಣದ ಅರೆಕೋಲಿನಿಂದ ಹೊಡೆದು ಹತ್ಯೆಗೈದಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ.

ಕೊಲೆಯಾದ ದುರ್ದೈವಿಗಳಾದ ಕಾವ್ಯ (25) ಹಾಗೂ ಜೀವನ್ (4) ಕಬ್ಬಿಣದ ಅರೆಕೋಲಿನಿಂದ ಹೊಡೆದ ತಕ್ಷಣವೇ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬದುಕನ್ನು ಕಟ್ಟಿಕೊಳ್ಳಬೇಕಾಗಿದ್ದ ಮುದ್ದಾದ ನಾಲ್ಕು ವರ್ಷದ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡ ಇಡೀ ಗ್ರಾಮವೇ ಮಮ್ಮಲ ಮರುಗಿದೆ. ಮೋಹನ್ ಕುಮಾರ್ ಎಂಬಾತ ಹತ್ಯೆ ಮಾಡಿದ ಆರೋಪಿ.

ಕಳೆದ ಐದು ವರ್ಷಗಳಿಂದಲೂ ಕಾವ್ಯ ಹಾಗೂ ಮೋಹನ್ ಕುಮಾರ್ ನಡುವೆ ವಾದವಿವಾದಗಳು, ಜಗಳ ನಿರಂತರವಾಗಿದ್ದು ಕುಟುಂಬ ಕಲಹದಿಂದಾಗಿ ಮೋಹನ್ ಕುಮಾರ್ ಜತೆ ಕಾವ್ಯ ಸುಮಾರು ವರ್ಷಗಳಿಂದ ದೂರವಿದ್ದರು.ಕಳೆದ ಎರಡು ದಿನದ ಹಿಂದೆ ಗಂಡನ ಮನೆಗೆ ಆಗಮಿಸಿದಂತಹ ಕಾವ್ಯ ಹಾಗೂ ಮಗು ಜೀವನ್ ಬುಧವಾರ ಮುಂಜಾನೆ ಹೆಣವಾಗಿ ಬಿದ್ದಿರುವುದು ನೋಡಿ ಇಡೀ ಗ್ರಾಮವೇ ಭಯ ಬಿದ್ದಿದೆ.

ಮೋಹನ್ ಕುಮಾರ್ ಕಳೆದ ಐದಾರು ವರ್ಷಗಳ ಹಿಂದೆ ಅದೇ ಗ್ರಾಮದ ಶ್ರೀ ಕರಿಯಮ್ಮ ದೇವಾಲಯದ ದೇವಸ್ಥಾನದಲ್ಲಿ ಹಣ ಕದ್ದು ಸಿಕ್ಕಿಬಿದ್ದಿದ್ದ. ಗ್ರಾಮಸ್ಥರೆಲ್ಲಾ ಸೇರಿ ಆತನ ಬಳಿ ಮುಚ್ಚಳಿಕೆ ಪತ್ರ ಬರೆಸಿಕೊಂಡು ಪೊಲೀಸರಿಂದ ಬಿಡಿಸಿಕೊಂಡು ಬಂದಿದ್ದರು. ಮದುವೆಯಾದ ನಂತರ ಕುಟುಂಬದಲ್ಲಿ ಸಾಕಷ್ಟು ಕಲಹಗಳು ನಿರ್ಮಾಣವಾಗಿ ಹಾಗಾಗಿ ಕುಟುಂಬದಲ್ಲಿ ಜಗಳ ಮಾಡುತ್ತಲೇ ಇದ್ದರು.

15 ದಿನ ಗಂಡನ ಮನೆಯಲ್ಲಿದ್ದರೆ ಇನ್ನ 15 ದಿನ ತವರು ಮನೆಯಲ್ಲಿ ಇರುತ್ತಿದ್ದು ಕಾವ್ಯ ಎರಡು ದಿನದ ಹಿಂದೆ ತವರು ಮನೆ ಚಿಕ್ಕನಾಯಕನಹಳ್ಳಿಯಿಂದ ಗಂಡನ ಮನೆಗೆ ಬಂದಿದ್ದರು. ಬುಧವಾರ ಬೆಳ್ಳಂಬೆಳಗ್ಗೆ ಪತ್ನಿ ಜೊತೆ ಗಲಾಟೆ ತೆಗೆದಿದ್ದು  ವಿಕೋಪಕ್ಕೆ ತಿರುಗಿ ಕೊಲೆ ನಡೆದಿದೆ.

ಆರೋಪಿ ತಪ್ಪಿಸಿಕೊಂಡು ಹೋಗದಂತೆ ಗ್ರಾಮದ ಜನರು ಹಗ್ಗದಿಂದ ಕೈ ಕಾಲು ಕಟ್ಟಿ ಹಾಕಿ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿರುವ ಚೇಳೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಸಿಪಿಐ ನದಾಫ್, ಚೇಳೂರು ಪಿಎಸ್ಐ ನವೀನ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.