ಕೌಟುಂಬಿಕ ಕಲಹ; 9 ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ ; ಪತಿ ಪೊಲೀಸರ ವಶಕ್ಕೆ
Team Udayavani, Oct 20, 2022, 10:11 AM IST
ಮಹದೇವಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಬೇಸರಗೊಂಡು ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ ಕಟ್ಟಡದ 9 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಿಶಾ ಅಪಾರ್ಟ್ಮೆಂಟ್ ನ ನಿವಾಸಿ ಉಪಾಸನಾ ರಾವತ್ (30) ಮೃತ ದುರ್ದೈವಿ.
ಈ ಘಟನೆ ಸಂಬಂಧ ಮೃತಳ ಪತಿ ನಿಹಾರ್ ರಂಜನ್ ರಾವತ್ನನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. ಕೌಟುಂಬಿಕ ವಿಚಾರದಿಂದ ಜಗಳವಾಗಿ ಇದರಿಂದ ಬೇಸತ್ತು, ಅಪಾರ್ಟ್ಮೆಂಟ್ ಕಟ್ಟಡದ 9 ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಪೊಲೀಸರು ತಿಳಿಸಿದ್ಧಾರೆ.
9 ವರ್ಷಗಳ ಹಿಂದೆ ನಿಹಾರ್ ರಂಜನ್ ರಾವತ್ ಹಾಗೂ ಉಪಾಸನಾ ರಾವತ್ ವಿವಾಹವಾಗಿದ್ದು, ದಂಪತಿ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಇಬ್ಬರು ಖಾಸಗಿ ಕಂಪನಿಯ ಉದ್ಯೋಗಿಗಳಾಗಿದ್ದರು. ಸಂತಾನ ಇಲ್ಲದ ಕಾರಣ ಇಬ್ಬರ ಮಧ್ಯೆ ಮನಸ್ತಾಪ ಬಂದಿದ್ದು, ವಿಚ್ಷೇದನ ಪಡೆಯಲು ಮುಂದಾಗಿದ್ದರು. ಈ ಹಿನ್ನೆಲೆ ಉಪಾಸನಾ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ಧಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.