ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿದ್ದು ಮೂಸೆವಾಲಾ ಹತ್ಯೆ ಆರೋಪಿ ಟಿನು ಕೊನೆಗೂ ಅರೆಸ್ಟ್
Team Udayavani, Oct 20, 2022, 11:07 AM IST
ನವದೆಹಲಿ : ಪಂಜಾಬ್ ಗಾಯಕ ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಕುಖ್ಯಾತ ಗ್ಯಾಂಗ್ಸ್ಟರ್ ದೀಪಕ್ ಕುಮಾರ್ ಅಲಿಯಾಸ್ ಟಿನು ನನ್ನು ವಿಶೇಷ ದಳದ ಪೊಲೀಸರು ಬಂಧಿಸಿದ್ದಾರೆ.
ಪಂಜಾಬ್ ಪೊಲೀಸರಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ ಕುಖ್ಯಾತ ದರೋಡೆಕೋರ ದೀಪಕ್ ನನ್ನು ವಿಶೇಷ ದಳದ ಪೊಲೀಸರ ತಂಡವು ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಕುಖ್ಯಾತ ಗ್ಯಾಂಗ್ಸ್ಟರ್ ದೀಪಕ್ ಕುಮಾರ್ ಅಲಿಯಾಸ್ ಟಿನು ಹರಿಯಾಣ 11 ವರ್ಷಗಳ ಹಿಂದೆ ಅಪರಾಧ ಜಗತ್ತಿಗೆ ಪ್ರವೇಶಿಸಿದ್ದ ಎಂದಿದ್ದಾರೆ ಪೊಲೀಸರು. ಟಿನು ಹರಿಯಾಣ ವಿರುದ್ಧ ಕೊಲೆ, ಕೊಲೆ ಯತ್ನ, ಸುಲಿಗೆ ಸೇರಿದಂತೆ ಪಂಜಾಬ್, ಹರಿಯಾಣ, ರಾಜಸ್ಥಾನ, ದೆಹಲಿಯಲ್ಲಿ ಈತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ 32 ಪ್ರಕರಣಗಳು ದಾಖಲಾಗಿವೆ.
ಅಲ್ಲದೆ ದೀಪಕ್ ಈ ಹಿಂದೆಯೂ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಎಂದು ಹೇಳಲಾಗಿದೆ.
ಇದನ್ನೂ ಓದಿ : ವಿಡಿಯೋ: ಪೊಲೀಸ್ ಅಧಿಕಾರಿಯ ನಿರ್ಲಕ್ಷ್ಯದಿಂದ ಹಾರಿದ ಗುಂಡು.. ಮೊಬೈಲ್ ಶಾಪ್ ಸಿಬ್ಬಂದಿ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.