ಉದ್ಘಾಟನೆ ಭಾಗ್ಯ ಕಾಣದ ಇಂದಿರಾ ಕ್ಯಾಂಟೀನ್‌

ಕಾಮಗಾರಿ ಪೂರ್ಣಗೊಂಡು 2 ವರ್ಷ ಕಳೆದದಿದೆ; ಸರ್ಕಾರದ ಮಟ್ಟದಲ್ಲಿ ಟೆಂಡರ್‌ ವಿಳಂಬ

Team Udayavani, Oct 20, 2022, 2:51 PM IST

18

ಹುನಗುಂದ: ಪಟ್ಟಣದ ಗುರುಭವನದ ಪಕ್ಕ ನಿರ್ಮಿಸಿದ ಇಂದಿರಾ ಕ್ಯಾಂಟೀನ್‌ ಕಾಮಗಾರಿ ಪೂರ್ಣಗೊಂಡು ಎರಡು ವರ್ಷ ಕಳೆದರೂ ಉದ್ಘಾಟನೆಗೊಂಡಿಲ್ಲ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಸಿವುಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಪ್ರತಿ ತಾಲೂಕಿಗೆ ಇಂದಿರಾ ಕ್ಯಾಂಟೀನ್‌ ಆರಂಭಿಸುವ ಯೋಜನೆ ಜಾರಿಗೊಳಿಸಿತ್ತು.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಗತ್ಯವಿರುವ ಎಲ್ಲ ಉಪಕರಣ ಅಳವಡಿಸಲಾಗಿದೆ. ಇದುವರೆಗೂ ಈ ಕಟ್ಟಡ ಉದ್ಘಾಟಿಸಿ ಕ್ಯಾಂಟೀನ್‌ ನಡೆಸಲು ಗುತ್ತಿಗೆ ಪ್ರಕ್ರಿಯೆ ನಡೆಸದ ಕಾರಣ ಕಡಿಮೆ ದರದಲ್ಲಿ ಊಟ, ಉಪಾಹಾರ ಸೌಲಭ್ಯದಿಂದ ಇಲ್ಲಿನ ಬಡವರು, ಕೂಲಿಕಾರ್ಮಿಕರು, ವಿದ್ಯಾರ್ಥಿಗಳು ವಂಚಿತವಾಗುತ್ತಿದ್ದಾರೆ. ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎನ್ನುವಂತಾಗಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವದಿಯಲ್ಲಿ ಮಂಜೂರು ಪಡೆದಿದ್ದ ಈ ಇಂದಿರಾ ಕ್ಯಾಂಟೀನ್‌ ಕಾಮಗಾರಿ ಕುಂಟುತ್ತಾ ಸಾಗಿ, ಕಳೆದ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿದೆ. ಕಾಮಗಾರಿ ಪೂರ್ಣಗೊಂಡು 2-3 ವರ್ಷಗಳು ಕಳೆದರೂ ಇದನ್ನು ಬಳಕೆ ಮಾಡದ ಕಾರಣ ಒಳಗೆ ಜೋಡಿಸಿದ ಉಪಕರಣಗಳು ತುಕ್ಕು ಹಿಡಿಯಲಾರಂಭಿಸಿವೆ. ಕಟ್ಟಡ ಹಾಳಾಗುವ ಸ್ಥಿತಿ ತಲುಪಿದೆ.

ಸರ್ಕಾರ ಇಂದಿರಾ ಕ್ಯಾಂಟಿನ್‌ ಆರಂಭಿಸಲು ಟೆಂಡರ್‌ ಕರೆದಿಲ್ಲ. ಹೀಗಾಗಿ ಕ್ಯಾಂಟಿನ್‌ಗೆ ಉದ್ಘಾಟನೆ ಭಾಗ್ಯ ದೊರೆತಿಲ್ಲ. ಇಂದಿರಾ ಕ್ಯಾಂಟೀನ್‌ ಕಟ್ಟಡದ ಪಕ್ಕದಲ್ಲಿ ಸರಕಾರಿ ಪದವಿ ಪೂರ್ವ ಮತ್ತು ಪದವಿ ಕಾಲೇಜು ಇದ್ದು ನಿತ್ಯ ನೂರಾರು ವಿದ್ಯಾರ್ಥಿಗಳಿಗೆ, ಕ್ಷೇತ್ರ ಶಿಕ್ಷಣಾಧಿ ಕಾರಿಗಳ ಕಾರ್ಯಾಲಯಕ್ಕೆ ಬರುವ ಶಿಕ್ಷಕರಿಗೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಉಪಯೋಗವಾಗುತ್ತಿತ್ತು.

ಸರ್ಕಾರದ ಮಟ್ಟದಲ್ಲಿ ಟೆಂಡರ್‌ ಆಗದ ಕಾರಣ ಇಂದಿರಾ ಕ್ಯಾಂಟೀನ್‌ ಇನ್ನೂ ಆರಂಭಿಸಲು ಆಗಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು.  -ಅಶೋಕ ಪಾಟೀಲ, ಮುಖ್ಯಾಧಿಕಾರಿ, ಪುರಸಭೆ ಹುನಗುಂದ

ಸುರೇಶ ಪತ್ತಾರ

ಟಾಪ್ ನ್ಯೂಸ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sandalwood: ತೆರೆಮೇಲೆ ʼಅನಾಥʼನ ಕನಸು

Sandalwood: ತೆರೆಮೇಲೆ ʼಅನಾಥʼನ ಕನಸು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.