ವಿಜ್ಞಾನ ನಾಟಕ ಸ್ಪರ್ಧೆ: ದಕ್ಷಿಣ ಭಾರತ ಮಟ್ಟಕ್ಕೆ ಮಾರಿಕಾಂಬಾ ಪ್ರೌಢ ಶಾಲೆ ಆಯ್ಕೆ
Team Udayavani, Oct 20, 2022, 10:40 PM IST
ಶಿರಸಿ: ಬೆಂಗಳೂರಿನಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಪಾಲ್ಗೊಂಡ ಇಲ್ಲಿನ ಮಾರಿಕಾಂಬಾ ಪ್ರೌಢಶಾಲಾ ಮಕ್ಕಳ ಒಂದು ಲಸಿಕೆಯ ಕಥೆ ನಾಟಕ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಗೊಂಡಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಯಟ್ ನಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರಾಜ್ಯದ ಒಟ್ಟೂ ಆರು ವಿಭಾಗದಿಂದ ತಂಡಗಳು ಭಾಗವಹಿಸಿದ್ದವು. ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಆಯ್ಕೆಗೊಂಡು ವಿಭಾಗಮಟ್ಟಕ್ಕೆ, ಬೆಳಗಾವಿ ವಿಭಾಗ ಮಟ್ಟದಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಮಾರಿಕಾಂಬಾ ಪ್ರೌಢ ಶಾಲಾ ವಿದ್ಯಾರ್ಥಿಗಳು ಈ ಹಿಂದೆ ಆಯ್ಕೆ ಆಗಿದ್ದರು.
ಸಾಂಕ್ರಾಮಿಕ ರೋಗಗಳ ವಿರುದ್ಧದಲ್ಲಿ ಕೆಲಸ ಮಾಡುವ ಲಸಿಕೆಗಳ ಹುಟ್ಟು, ಅವುಗಳ ಬೆಳವಣಿಗೆ, ಜನರ ವಿರೋಧ ಇದ್ದರೂ ಅದನ್ನು ಎದುರಿಸಿ ಜನತೆಯ ಆರೋಗ್ಯ ರಕ್ಷಣೆಗೆ ಕಟಿಬದ್ಧರಾದ ವಿಜ್ಞಾನಿಗಳು ಹಾಗೂ ಅವರು ನೀಡಿದ ಕೊಡುಗೆಯ ಕುರಿತಾದ ಚಿತ್ರಣವನ್ನು ಹೊಂದಿದ ಒಂದು ಲಸಿಕೆಯ ಕಥೆ ಮೂವತ್ತು ನಿಮಿಷದಲ್ಲಿ ಶತಮಾನದ ಒಟ್ಟೂ ಸಾಧನೆ ಬಿಚ್ಚಿಟ್ಟಿವೆ ಎಂಬುದು ತೀರ್ಪುಗಾರರ ಮೆಚ್ಚುಗೆಗೆ ಕಾರಣವಾಗಿದೆ.
ಇಡೀ ನಾಟಕದಲ್ಲಿ ವಿಜ್ಞಾನದ ಸಂಗತಿಯನ್ನು ಮನೋಜ್ಞವಾಗಿ ತೆರೆದಿಟ್ಟ ಬಗೆ ಹಾಗೂ ವಿದ್ಯಾರ್ಥಿಗಳ ಭಾವಪೂರ್ಣ ಲವಲವಿಕೆಯ ಅಭಿನಯವು ಪ್ರೇಕ್ಷಕರ ಮನಗೆಲ್ಲಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾದವು.
ಈ ನಾಟಕದಲ್ಲಿ ತುಳಸಿ ಹೆಗಡೆ, ಎಂ.ವಿ ಶ್ರೇಯಾ, ಸ್ಪಂದನಾ ಭಟ್ಟ, ಜಯಶ್ರೀ ಭಟ್ಟ, ನವ್ಯಾ ಹೆಗಡೆ, ಶ್ರೀಜಾ ಭಟ್ಟ, ಮಾನ್ಯ ಹೆಗಡೆ, ಕಿಶನ್ ಕುಮಾರ ಹೆಗಡೆ , ದರ್ಶನ್ ಎಸ್. ಭಟ್, ಪ್ರತ್ವಿಕ್ ಮೋಹನದಾಸ ನಾಯಕ ಅಚ್ಚುಕಟ್ಟಾಗಿ ನಿರ್ವಹಿಸಿ ನಾಟಕ ಪರಿಣಾಮಕಾರಿಯಾಗಿಸಿದರು. ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಮಾರಿಕಾಂಬಾದ ಕನ್ನಡ ಭಾಷಾ ಶಿಕ್ಷಕ ನಾರಾಯಣ ಭಾಗ್ವತ್ ನಿರ್ದೇಶನದ ನಾಟಕಕ್ಕೆ ವಿಜ್ಞಾನ ಶಿಕ್ಷಕಿ ಜಯಲಕ್ಷ್ಮೀ ಗುನಗಾ ಅಚ್ಚುಕಟ್ಟಾಗಿ ನಿರ್ವಹಣೆ ನಡೆಸಿದ್ದರು. ಆಂಗ್ಲಾ ಭಾಷಾ ಶಿಕ್ಷಕ ಧರ್ಮಾನಂದ ಭಟ್ಟ ಸಹಕಾರ ನೀಡಿದರು.
ದಕ್ಷಿಣ ಭಾರತ ಮಟ್ಟದಲ್ಲಿ ಒಟ್ಟೂ ಏಳು ರಾಜ್ಯಗಳಿಂದ ಹದಿನಾಲ್ಕು ತಂಡಗಳು ಡಿಸೆಂಬರ್ 1, 2 ರಂದು ಬೆಂಗಳೂರಿನಲ್ಲಿ ಸ್ಪರ್ಧೆ ನೀಡಲಿವೆ.
ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆ ಆದ ಮಾರಿಕಾಂಬಾದ ವಿದ್ಯಾರ್ಥಿ ಹಾಗೂ ಶಿಕ್ಷಕರನ್ನು ಡಿಡಿಪಿಐ ಬಸವರಾಜು, ಬಿಇಓ ಎಂ.ಎಸ್.ಹೆಗಡೆ, ಮಾರಿಕಾಂಬಾ ಪ್ರೌಢಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಆರ್.ವಿ.ನಾಯ್ಕ, ಶಾಲಾಭಿವೃದ್ದಿ ಸಮಿತಿ ಪದಾಧಿಕಾರಿಗಳು, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.