ಸಮ್ಮಿಶ್ರ ಸರ್ಕಾರ ರಚನೆಯಾದ್ರೆ ಸಿಎಂ ಆಗಲಾರೆ; ಎಚ್.ಡಿ.ಕುಮಾರಸ್ವಾಮಿ
ಕಾಂಗ್ರೆಸ್ ಹಾಗೂ ಬಿಜೆಪಿ ಇತ್ತೀಚೆಗೆ ಪರಸ್ಪರ ಅವರವರ ನಡುವೆಯೇ ಟೀಕೆ ಮಾಡಿಕೊಳ್ಳುತ್ತಿದ್ದಾರೆ.
Team Udayavani, Oct 21, 2022, 5:55 PM IST
ಮೈಸೂರು: ಮುಂಬರುವ ಅಸೆಂಬ್ಲಿ ಚುನಾವಣೆ ನಂತರ ಅತಂತ್ರ ವಿಧಾನ ಸಭೆ ರಚನೆಯಾಗಿ ಸಮ್ಮಿಶ್ರ ಸರ್ಕಾರ ರಚನೆಯ ಸಂದರ್ಭ ಬಂದರೆ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಜೆಡಿಎಸ್‌ಗೆ 30-40 ಸ್ಥಾನ ಬಂದರೆ ನಾನು ಅಧಿಕಾರದಿಂದ ದೂರ ಇರುತ್ತೇನೆ. ಇದು ನನ್ನ ನಿರ್ಧಾರ. ನಮ್ಮಲ್ಲೇ ಯಾರಾದರೂ ಒಬ್ಬರನ್ನು ಆ ಸ್ಥಾನದಲ್ಲಿ ಕೂರಿಸಿ ನಾನು ಮಾರ್ಗದರ್ಶನ ಮಾಡುತ್ತೇನೆ ಎಂದರು. ನನಗೆ ಈ ಬಾರಿ ಸಂಪೂರ್ಣ ಬಹುಮತ ಕೊಡಿ. ಪಂಚರತ್ನದ 5 ಯೋಜನೆಗಳನ್ನು 5 ವರ್ಷಗಳಲ್ಲಿ ಅನುಷ್ಠಾನ ಮಾಡುತ್ತೇನೆ. ಕಾರ್ಯಕ್ರಮ ಅನುಷ್ಠಾನಗೊಳಿಸದಿದ್ದರೆ ಪಕ್ಷ ವಿಸರ್ಜನೆ ಮಾಡುತ್ತೇನೆ. ಚಾಮುಂಡೇಶ್ವರಿ ದೇವಿಯ ಸನ್ನಿಧಾನದಲ್ಲಿ ನಿಂತು ಈ ಮಾತು ಹೇಳುತ್ತಿದ್ದೇನೆ ಎಂದರು.
ಕಾಂಗ್ರೆಸ್ ಹಾಗೂ ಬಿಜೆಪಿ ಇತ್ತೀಚೆಗೆ ಪರಸ್ಪರ ಅವರವರ ನಡುವೆಯೇ ಟೀಕೆ ಮಾಡಿಕೊಳ್ಳುತ್ತಿದ್ದಾರೆ. ಜೆಡಿಎಸ್ ಬಗ್ಗೆ ಅವರು ಚಕಾರ ಎತ್ತುತ್ತಿಲ್ಲ. ಇದರ ಅರ್ಥವನ್ನು ಸೂಕ್ಷ್ಮವಾಗಿ ಗಮನಿಸಬೇಕು. ಜೆಡಿಎಸ್ ಪಕ್ಷವನ್ನು ಒಳ್ಳೆಯತನದಲ್ಲಿ ಇಟ್ಟುಕೊಳ್ಳಲು ಕಾಂಗ್ರೆಸ್, ಬಿಜೆಪಿ ಈ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಸ್ವತಂತ್ರವಾಗಿ ಸರ್ಕಾರ ರಚಿಸುವ ವಿಶ್ವಾಸವಿಲ್ಲ.
ಜೆಡಿಎಸ್ ಅವಶ್ಯಕತೆ ಬೇಕಾಗಬಹುದು ಎಂದು ನಮ್ಮನ್ನು ಯಾರು ಟೀಕೆ ಮಾಡುತ್ತಿಲ್ಲ. ಇದೆಲ್ಲವೂ ನನಗೆ ಅರ್ಥವಾಗಿದೆ ಎಂದರು ಕುಮಾರಸ್ವಾಮಿ. ಯುವ ಮುಖಂಡ ನಿಖೀಲ್ ಕುಮಾರಸ್ವಾಮಿ ತಮ್ಮ ಶಕ್ತಿಯನ್ನು ಬಳಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡಲು ತೀರ್ಮಾನಿಸಿ ದ್ದಾರೆ. ಈಗ ಸಿದ್ಧವಾಗಿರುವ ವಿಧಾನ ಸಭಾ ಚುನಾವಣೆಯ 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರೂ ಇರಬಹುದು ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಶಾಸಕರು, ಮುಂದಿನ ಅಸೆಂಬ್ಲಿ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳ ಜತೆ ಬಸ್ಸಿನಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.