48 ವರ್ಷ ಬಳಿಕ ತಮಿಳುನಾಡಿಗೆ 530 ಟಿಎಂಸಿ ನೀರು


Team Udayavani, Oct 22, 2022, 5:27 PM IST

48 ವರ್ಷ ಬಳಿಕ ತಮಿಳುನಾಡಿಗೆ 530 ಟಿಎಂಸಿ ನೀರು

ಮಂಡ್ಯ: 48 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜಿಲ್ಲೆಯ ಜೀವನಾಡಿಯಾಗಿರುವ ಕೃಷ್ಣರಾಜ ಸಾಗರ ಜಲಾಶಯದಿಂದ ದಾಖಲೆ ಪ್ರಮಾಣದ 530 ಟಿಎಂಸಿ ನೀರು ಹರಿದು ಹೋಗಿರುವುದು ದಾಖಲಾಗಿದೆ.

ಜುಲೈ 20ರಂದು ಕೆಆರ್‌ಎಸ್‌ ಜಲಾಶಯ ಗರಿಷ್ಠ ಮಟ್ಟ 124.80 ಅಡಿಗೆ ಭರ್ತಿಯಾಗಿತ್ತು. ಅಂದಿನಿಂದ ಆಗಸ್ಟ್‌ 3ರವರೆಗೂ ಗರಿಷ್ಠ ಮಟ್ಟ ಕಾಯ್ದುಕೊಂಡಿದೆ. ಆ.4ರಂದು ಜಲಾಶಯದ ಒಳಹರಿವು 67,712 ಕ್ಯೂಸೆಕ್‌ ಹರಿದು ಬರುತ್ತಿರುವುದರಿಂದ ಹೊರಹರಿ ವನ್ನು 68,100 ಕ್ಯೂಸೆಕ್‌ಗೆ ಹೆಚ್ಚಿಸಲಾಗಿತ್ತು.

ಧಾರಾಕಾರ ಮಳೆಗೆ ಒಳಹರಿವು ಹೆಚ್ಚಳ: ಆಗಸ್ಟ್‌ 1ಕ್ಕೆ ಒಳಹರಿವು 23,081 ಕ್ಯೂಸೆಕ್‌ ಇತ್ತು. ಈಗ ಪ್ರಸ್ತುತ 74,726 ಕ್ಯೂಸೆಕ್‌ ಹರಿದು ಬರುತ್ತಿದೆ. ಇದರಿಂದ ಹೊರಹರಿವನ್ನು 78,316 ಕ್ಯೂಸೆಕ್‌ಗೆ ಏರಿಸಲಾಗಿದೆ. ಆ.2ರಂದು 30,505 ಕ್ಯೂಸೆಕ್‌ಗೆ ಏರಿತು. 3ರಂದು ಏಕಾಏಕಿ 58,062 ಕ್ಯೂಸೆಕ್‌ಗೆ ಏರಿಕೆಯಾಯಿತು. 4ರಂದು 68,586 ಕ್ಯೂಸೆಕ್‌ ಹರಿದು ಬರುತ್ತಿತ್ತು. ಇದರಿಂದ ಹೊರಹರಿವನ್ನು 80 ಸಾವಿರ ಕ್ಯೂಸೆಕ್‌ಗೆ ಏರಿಸಲಾಗಿತ್ತು. ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ತಿಂಗಳಲ್ಲೂ ಮುಂದುವರಿದಿದೆ.

ಒಂದೇ ವರ್ಷಕ್ಕೆ ಎರಡನೇ ಬಾರಿ ಭರ್ತಿ: ಆ.6 ರಂದು 74,068 ಕ್ಯೂಸೆಕ್‌ಗೆ ಏರಿಕೆ ಕಂಡಿತ್ತು. ನಂತರ ಅಲ್ಲಿಂದ ಆ.18ಕ್ಕೆ 9,144 ಕ್ಯೂಸೆಕ್‌ಗೆ ಇಳಿದಿತ್ತು. 19 ರಂದು ಏರಿಕೆ ಕಂಡಿದ್ದ ಒಳಹರಿವು 31ಕ್ಕೆ 21562 ಕ್ಯೂಸೆಕ್‌ ನೀರು ಹರಿದು ಬರುತ್ತಿತ್ತು. ಸೆ.3ಕ್ಕೆ 26247 ಕ್ಯೂಸೆಕ್‌ಗೆ ಏರಿತ್ತು. ನಂತರ ಅ.18ರಂದು ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಜಲಾಶಯ ಭರ್ತಿ ಯಾಗಿತ್ತು. ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿತ್ತು. ಗರಿಷ್ಠ ಮಟ್ಟ ಕಾಯ್ದುಕೊಂಡ ಜಲಾಶಯ: ಆಗಸ್ಟ್‌ ಹಾಗೂ ಸೆಪ್ಟಂಬರ್‌ ತಿಂಗಳಲ್ಲಿ ಜಲಾಶಯ ಗರಿಷ್ಠ ಮಟ್ಟ ಕಾಯ್ದುಕೊಂಡು ಆಕ್ಟೋಬರ್‌ನಲ್ಲೂ ಮುಂದು ವರಿದಿದೆ. ಕಾವೇರಿ ಕೊಳ್ಳದಲ್ಲಿ ವಿಪರೀತ ಮಳೆ ಆಗುತ್ತಿ ರುವುದರಿಂದ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. ಇತಿಹಾಸದಲ್ಲಿಯೇ 72 ದಿನಗಳ ಕಾಲ 124 ಅಡಿ ಗರಿಷ್ಠ ನೀರಿನ ಮಟ್ಟ ಕಾಯ್ದುಕೊಂಡಿದೆ.

ಕಳೆದ ವರ್ಷವೂ ಹೆಚ್ಚುವರಿ ನೀರು: ಕಳೆದ ವರ್ಷವೂ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದಿತ್ತು. ಸುಮಾರು 100 ಟಿಎಂಸಿ ಹೆಚ್ಚುವರಿ ನೀರು ಹರಿದು ಹೋಗಿತ್ತು. 177.25 ಟಿಎಂಸಿಗಿಂತ 275 ಟಿಎಂಸಿ ನೀರು 2021 ಜೂನ್‌ನಿಂದ 2022ರ ಮೇ ಅಂತ್ಯದ ವರೆಗೂ ಹರಿದಿತ್ತು. 352.75 ಟಿಎಂಸಿ ಹೆಚ್ಚುವರಿ ನೀರು: ಮುಂಗಾರು ಮಳೆ ಆರಂಭಗೊಂಡ ಜೂನ್‌ನಿಂದಲೂ ಅ.21ರ ವರೆಗೂ 352.75 ಟಿಎಂಸಿ ಹೆಚ್ಚುವರಿ ನೀರು ಹರಿದು ಹೋಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನಂತೆ ಕರ್ನಾ ಟಕದಿಂದ ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕಿದೆ. ಆದರೆ, ಈಗಾಗಲೇ 352.75 ಟಿಎಂಸಿ ನೀರು ಹರಿದು ಹೋಗಿದೆ. ಜೂನ್‌ನಲ್ಲಿ 9.19 ಟಿ ಎಂಸಿ, ಜುಲೈನಲ್ಲಿ 31.24 ಟಿಎಂಸಿ, ಆಗಸ್ಟ್‌ನಲ್ಲಿ 45.95 ಟಿಎಂಸಿ, ಸೆಪ್ಟಂಬರ್‌ನಲ್ಲಿ 36.76 ಟಿಎಂಸಿ, ಅಕ್ಟೋಬರ್‌ನಲ್ಲಿ 20.22 ಟಿಎಂಸಿ, ನವೆಂಬರ್‌ನಲ್ಲಿ 13.78 ಟಿಎಂಸಿ, ಡಿಸೆಂಬರ್‌ನಲ್ಲಿ 7.35 ಟಿಎಂಸಿ, ಜನವರಿಯಿಂದ ಮೇವರೆಗೆ ಪ್ರತಿ ತಿಂಗಳು 2.50 ಟಿಎಂಸಿ ನೀರು ಕೊಡಬೇಕಿದೆ.

ನವೆಂಬರ್‌ವರೆಗೂ ಮಳೆ ಸಾಧ್ಯತೆ : ಪ್ರಸ್ತುತ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ಮಳೆಯು ನವೆಂಬರ್‌ವರೆಗೂ ಹೀಗೆಯೇ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಜಲಾಶಯಕ್ಕೆ ಮತ್ತೆ ಒಳ ಹರಿವು ಬರಲಿದೆ ಎಂದು ಹವಾಮಾನ ತಜ್ಞರು ಅಂದಾಜು ಮಾಡಿದ್ದಾರೆ. ಹೀಗಾಗಿ ಜಲಾಶಯದ ಒಳ ಮತ್ತು ಹೊರ ಹರಿವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ.

ಮೂರು ಗೇಟ್‌ಗಳಲ್ಲಿ ಹೊರ ಹರಿವು: ಪ್ರಸ್ತುತ ಕೆಆರ್‌ಎಸ್‌ ಜಲಾಶಯದಿಂದ 80 ಮಟ್ಟದ ಮೂರು ಗೇಟ್‌ಗಳಲ್ಲಿ ನೀರನ್ನು ಕಾವೇರಿ ನದಿ ಮತ್ತು ವಿಶ್ವೇಶ್ವರಯ್ಯ ನಾಲೆಗೆ ಬಿಡಲಾಗುತ್ತಿದೆ. ಮೂರು ದಿನಗಳ ಹಿಂದೆ 7 ಗೇಟ್‌ಗಳಲ್ಲಿ ಹೊರ ಹರಿವನ್ನು ಬಿಡಲಾಗಿತ್ತು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಾಗೂ ಜಲಾಶಯದ ಕೆಳಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆಆರ್‌ ಎಸ್‌ ಜಲಾಶಯಕ್ಕೆ ಹೆಚ್ಚು ನೀರು ಹರಿದು ಬರುತ್ತಿದೆ. ಇದರಿಂದ ನದಿಗೆ ಹೊರಹರಿವು ಹೆಚ್ಚಿಸಲಾಗಿದೆ. ಕಳೆದ 48 ವರ್ಷಗಳ ಇತಿಹಾಸದಲ್ಲಿ ತಮಿಳುನಾಡಿಗೆ ಜೂನ್‌ನಿಂದ ಇದುವರೆಗೂ 530 ಟಿಎಂಸಿ ನೀರು ಹರಿದು ಹೋಗಿದೆ. ಶಂಕರೇಗೌಡ, ವ್ಯವಸ್ಥಾಪಕ ನಿರ್ದೇಶಕ, ಕಾವೇರಿ ನೀರಾವರಿ ನಿಗಮ.

ಟಾಪ್ ನ್ಯೂಸ್

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.