ಬಾಲಿವುಡ್ ನಟಿ ಜಾಕ್ವೆಲಿನ್ ಮಧ್ಯಂತರ ಜಾಮೀನು ವಿಸ್ತರಣೆ
Team Udayavani, Oct 22, 2022, 7:15 PM IST
ನವದೆಹಲಿ: ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರು ಸಾಕ್ಷ್ಯಗಳನ್ನು ನಾಶ ಮಾಡಿ, ದೇಶ ಬಿಟ್ಟು ಪರಾರಿಯಾಗಲು ಸಂಚು ರೂಪಿಸಿದ್ದರು. ಆದರೆ, ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿಯಾಗಿರುವುದರಿಂದ ಯತ್ನ ಫಲಿಸಲಿಲ್ಲ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ನವದೆಹಲಿಯ ಪಾಟಿಯಾಲ ಹೌಸ್ ಕೋರ್ಟ್ನಲ್ಲಿ ಶನಿವಾರ ಜಾಕ್ವೆಲಿನ್ ಫರ್ನಾಂಡಿಸ್ ಅವರ ಜಾಮೀನು ಅರ್ಜಿಯನ್ನು ತನಿಖಾ ಸಂಸ್ಥೆ ವಿರೋಧಿಸಿ ವಾದ ಮಂಡಿಸಿದ ವೇಳೆ, ಅಂಶವನ್ನು ಬಹಿರಂಗಪಡಿಸಿದೆ.
ಸದ್ಯ ಜೈಲಲ್ಲಿ ಇರುವ ವಂಚಕ ಸುಕೇಶ್ ಚಂದ್ರಶೇಖರ್ ಜತೆಗೆ 200 ಕೋಟಿ ರೂ. ಮೌಲ್ಯದ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ವಿರುದ್ಧ ಕೇಸು ದಾಖಲಿಸಲಾಗಿದೆ. ತನಿಖೆಯ ವೇಳೆ ಅವರು ಸಹಕರಿಸಿರಲಿಲ್ಲ. ಸೂಕ್ತ ಸಾಕ್ಷ್ಯಗಳನ್ನು ಅವರಿಗೆ ನೀಡಿದಾಗ ಅವರು ಮೌನ ವಹಿಸಿದ್ದರು ಎಂದು ಇ.ಡಿ.ಪರ ವಕೀಲರು ಹೇಳಿದ್ದಾರೆ.
ಅಂತಿಮವಾಗಿ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರು ನಟಿಗೆ ನೀಡಲಾಗಿರುವ ಮಧ್ಯಂತರ ಜಾಮೀನನ್ನು ನ.10ರ ವರೆಗೆ ವಿಸ್ತರಿಸಿ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.