ರಾಜ್ಯದ ಭಾಷೆ ಸಂಸ್ಕೃತಿ ಹಾಗೂ ಇತಿಹಾಸವನ್ನು ತಿರುಚಿ ನಾಶಪಡಿಸಲಾಗುತ್ತಿದೆ: ರಾಹುಲ್ ಗಾಂಧಿ

Team Udayavani, Oct 23, 2022, 11:43 AM IST

rahul

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಯಾತ್ರೆಯ ಕರ್ನಾಟಕದ ಚರಣ ಅಂತ್ಯವಾಗಿದೆ. ರಾಯಚೂರು ಜಿಲ್ಲೆಯ ಯರಮರಸ್ ನ ಕೃಷ್ಣಾ ನದಿಯ ತಟದಿಂದ ರಾಹುಲ್ ಗಾಂಧಿ ಕರ್ನಾಟಕದ ಜನತೆಗೆ ಸಂದೇಶ ನೀಡಿದೆ.

ರಾಹುಲ್ ಸಂದೇಶ ಇಲ್ಲಿದೆ

ಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುಧೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದೆ. ಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಬಣ್ಣಿಸಿದ್ದರು. ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.

ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನ ನಿರ್ವಹಿಸಲು ಕಷ್ಟಪಡುತ್ತಿದ್ದಾರೆ. ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗ ಅವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲಾ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ. ಮಾರುಕಟ್ಟೆಯನ್ನೂ ಸಹ ಈ ಸರ್ಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನ, ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನ ತಿರುಚಿ ನಾಶಪಡಿಸಲಾಗುತ್ತಿದೆ.

‘ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು ‘40% ಕಮಿಷನ್’ ಸರ್ಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ “ಸೂಟು-ಬೂಟಿನ ಲೂಟಿ ಸರ್ಕಾರ”ಕ್ಕೆ ತಕ್ಕ ಉದಾಹರಣೆಯಾಗಿದೆ. ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರೀ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ.

ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ. ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ.

– ರಾಹುಲ್ ಗಾಂಧಿ

ಟಾಪ್ ನ್ಯೂಸ್

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.