ಆರೋಗ್ಯ ಕೇಂದ್ರದಲ್ಲಿ ನರ್ಸ್ ರನ್ನು ಕಟ್ಟಿ ಹಾಕಿ ಅತ್ಯಾಚಾರ; ಅಪ್ರಾಪ್ತ ಸೇರಿ ಮೂವರ ಬಂಧನ
Team Udayavani, Oct 23, 2022, 3:05 PM IST
ರಾಯ್ಪುರ: ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ ನಾಲ್ವರು ಸಾಮೂಹಿಕ ಅತ್ಯಾಚಾರಗೈದ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ.
ಅವರಲ್ಲಿ ಒಬ್ಬ ಅಪ್ರಾಪ್ತ ಎಂದು ಪೊಲೀಸರು ತಿಳಿಸಿದ್ದಾರೆ. 17 ವರ್ಷದ ಯುವಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ.
ಅತ್ಯಾಚಾರಗೈದ ಆರೋಪಿಗಳು ಹಲ್ಲೆ ನಡೆಸಿದ್ದು, ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ನರ್ಸ್ ಆರೋಪಿಸಿದ್ದಾರೆ.
ಇದನ್ನೂ ಓದಿ:ಗಂಡನಿಗಾಗಿ ಕಿಡ್ನಿ ದಾನ ಮಾಡಿದ ಪತ್ನಿ: ಅಪ್ಪ – ಅಮ್ಮನ ಸುಂದರ ಬಾಂಧವ್ಯವನ್ನು ಹಂಚಿಕೊಂಡ ಮಗ
ಮಹೇಂದ್ರಗಢ ಜಿಲ್ಲೆಯ ಚಿಪ್ಚಿಪಿ ಗ್ರಾಮದಲ್ಲಿ ಈ ಘಟನೆ ನಡದಿದೆ. ಶುಕ್ರವಾರ ಸಂಜೆ ಮೂರು ಗಂಟೆ ಸಮಯದಲ್ಲಿ ಸಂತ್ರಸ್ಥೆಯು ಏಕಾಂಗಿಯಾಗಿ ಆರೋಗ್ಯ ಕೇಂದ್ರದಲ್ಲಿದ್ದರು. ಇದನ್ನು ಗಮನಿಸಿದ ಆರೋಪಿಗಳು ಕೇಂದ್ರಕ್ಕೆ ನುಗ್ಗಿ ಆಕೆಯನ್ನು ಕಟ್ಟಿಹಾಕಿ, ಅವಳ ಬಾಯಿಯನ್ನು ಬಿಗಿದರು. ನಂತರ ಆಕೆಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರಗೈದರು ಎಂದು ಪೊಲೀಸರು ಹೇಳಿದ್ದಾರೆ.
ಬಳಿಕ ನರ್ಸ್ ಮನೆಯವರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ. ಭೂಪೇಶ್ ಭಾಗೇಲ್ ನೇತೃತ್ವದ ಛತ್ತೀಸ್ಗಢ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡರು ಪ್ರತಿಭಟನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.