ಗ್ರಾಮೀಣ ಪ್ರದೇಶದಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡಿ


Team Udayavani, Oct 23, 2022, 2:53 PM IST

tdy-8

ನೆಲಮಂಗಲ: ಗ್ರಾಮೀಣ ಭಾಗದಲ್ಲಿನ ಯುವ ಸಮುದಾಯ ಇತ್ತಿಚೀನ ದಿನಗಳಲ್ಲಿ ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳನ್ನು ಪರಿಚಯಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ಇ.ಕೃಷ್ಣಪ್ಪ ಅಭಿಪ್ರಾಪಟ್ಟರು.

ತಾಲೂಕಿನ ತ್ಯಾಮಗೊಂಡ್ಲು ಹೋಬಳಿ ಗೋವೇನಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾಗಿದ್ದ ವಾಲಿಬಾಲ್‌ ಕ್ರೀಡಾಂಗಣಕ್ಕೆ ಹಾಗೂ ಸಮಾಜ ಸೇವಕ ದಿವಗಂತ ಶಿವಕುಮಾರ್‌ ಅವರ ಸವಿ ನೆನಪಿನಲ್ಲಿ ಆಯೋಜಿಸಿದ್ದ ತಾಲೂಕುಮಟ್ಟದ ಜೈ ಶ್ರೀರಾಮ್‌ ವಾಲಿಬಾಲ್‌ ಕಪ್‌ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಗರೀಕರಣದ ಪ್ರಭಾವದಿಂದ ಯುವ ಸಮುದಾಯ ಗ್ರಾಮೀಣ ಕ್ರೀಡಾ ಚಟುವಟಿಕೆಗಳಿಂದ ದೂರ ಸರಿದಿದ್ದರು. ಆದರೆ, ಕಳೆದ ಐದಾರು ವರ್ಷಗಳಿಂದ ದೇಸಿಯ ಆಟಗಳಿಗೆ ಆದ್ಯತೆ ನೀಡುವ ಮೂಲಕ ಆಟಗಾರರನ್ನು ತಯಾರು ಮಾಡಿ, ಜಿಲ್ಲೆ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಕ್ರೀಡಾ ಕೂಟಗಳ ಆಯೋಜನೆಯಿಂದ ದೇಸಿಯ ಸಂಸ್ಕೃತಿಯನ್ನು ಉಳಿಸುತ್ತಿದ್ದಾರೆ ಎಂದರು.

ಉತ್ತಮ ಕ್ರೀಡಾಂಗಣ ನಿರ್ಮಾಣ: ಕ್ರೀಡಾಕೂಟದ ಆಯೋಜಕ ಡಾ. ಮಂಜುನಾಥ್‌ ಮಾತನಾಡಿ, ನಮ್ಮ ಗ್ರಾಮದಲ್ಲಿ ಕಳೆದ 30 ವರ್ಷದಿಂದ ವಾಲಿಬಾಲ್‌ ಪಂದ್ಯ ಆಡುತ್ತಿದ್ದಾರೆ. ಆದರೆ, ಸುಸಜ್ಜಿತವಾದ ಕ್ರೀಡಾಂಗಣ ಅಭಾವ ಹೆಚ್ಚಾಗಿತ್ತು. ಮಳೆ ಬಂದರೆ ಆಡಲು ಸಾಧ್ಯವಾಗುತ್ತಿರಲಿಲ್ಲ, ನಮ್ಮ ಶಾಸಕರ ಅನುದಾನ ಹಾಗೂ ಗ್ರಾಮಸ್ಥರ ಸಹಕಾರದಿಂದ ಉತ್ತಮ ಕ್ರೀಡಾಂಗಣ ನಿರ್ಮಿಸಿದ್ದೇವೆ. ನಮ್ಮ ತಂದೆ ಶಿವಕುಮಾರ್‌ ಅವರ ಸವಿನೆನಪಿನಲ್ಲಿ ಪ್ರತಿ ವರ್ಷವೂ ವಾಲಿಬಾಲ್‌ ಪಂದ್ಯಾವಳಿಗಳನ್ನು ನಡೆಸಿಕೊಂಡು ಹೋಗುತ್ತೇವೆ ಎಂದರು.

ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ: ಮೊದಲ ವರ್ಷದ ತಾಲೂಕುಮಟ್ಟದ ವಾಲಿಬಾಲ್‌ ಕ್ರೀಡಾಕೂಟದಲ್ಲಿ 24 ತಂಡಗಳು ಭಾಗವಹಿಸಿವೆ. ಶನಿವಾರ ಮೊದಲ ಹಂತದ ಪಂದ್ಯಗಳು ನಡೆದಿವೆ. ಭಾನುವಾರ ಫೈನಲ್‌ ಪಂದ್ಯಾವಳಿ ನಡೆಯುತ್ತದೆ. ನಮ್ಮ ತಾಲೂಕಿನ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಲಾಗಿದೆ. ಮೊದಲ ಬಹುಮಾನ 50 ಸಾವಿರ, ದ್ವಿತೀಯ ಬಹುಮಾನ 30 ಸಾವಿರ, ತೃತೀಯ 20ಸಾವಿರ, ಚತುರ್ಥ ಸ್ಥಾನಕ್ಕೆ 10 ಸಾವಿರ ರೂ. ಮತ್ತು ಆಕರ್ಷಕ ಟ್ರೋಫಿ ವಿತರಿಸಲಾಗುತ್ತದೆ ಎಂದು ಕ್ರೀಡಾಕೂಟದ ಆಯೋಜಕ ಮೋಹನ್‌ ತಿಳಿಸಿದರು.

ಮುಖಂಡ ಶಿವಕುಮಾರ್‌, ಡಿ.ಸಿ.ಗೌಡ್ರು, ಜಿ.ಎಚ್‌.ಪ್ರಕಾಶ್‌, ಕೃಷ್ಣಮೂರ್ತಿ, ಎಪಿಎಂಸಿ ಮಾಜಿ ನಿರ್ದೇಶಕ ನಾರಾಯಣಸ್ವಾಮಿ, ಹನುಮೇಗೌಡ, ಹನುಮಂತರಾಯಪ್ಪ, ಮಲ್ಲಿಕಾರ್ಜುನ್‌, ನಾರಾಯಣ್‌, ಮೋಹನ್‌, ಬೆಟ್ಟಪ್ಪ, ಮಂಜುನಾಥ್‌, ರಾಜೇಶ್‌ ಹಾಗೂ ಗ್ರಾಮದ ಯುವಕರು ಇದ್ದರು.

ಟಾಪ್ ನ್ಯೂಸ್

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.