![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 24, 2022, 12:19 AM IST
ಕಾಣಿಯೂರು: ಇಬ್ಬರು ಬೆಡ್ ಶೀಟ್ ವ್ಯಾಪಾರಿಗಳಿಗೆ ಗುಂಪೊಂದು ಕಾಣಿಯೂರು ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆ ಯತ್ನಕ್ಕೆ ಪ್ರಯತ್ನ ಕುರಿತಂತೆ ಬೆಳ್ಳಾರೆ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ಳಾರೆ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ.
ಪುನೀತ್, ರಾಜು, ಪ್ರಸಾದ್, ಕಿಶೋರ್, ಭವಿತ್ ಮತ್ತು ರಂಜಿತ್ ಬಂಧಿತರು. ಮಂಗಳೂರು ತಾಲೂಕಿನ ಅಡೂxರು ನಿವಾಸಿಗಳಾದ ರಮೀಜುದ್ದೀನ್ ಮತ್ತು ರಫೀಕ್ ಅವರು ಮನೆಗೆ ನುಗ್ಗಿ ಮಹಿಳೆಯನ್ನು ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿತ್ತು. ದುಷ್ಕರ್ಮಿಗಳು ಇಬ್ಬರಿಗೂ 2 ಗಂಟೆಗಳ ಕಾಲ ನಿರಂತರವಾಗಿ ಥಳಿಸಿದ್ದರು ಮತ್ತು ಇಬ್ಬರ ಮೇಲೆ ಬೈಕ್ ಹತ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆ ಮನೆಗೆ ಸಚಿವ ಅಂಗಾರ ಭೇಟಿ
ಕಾಣಿಯೂರು: ಬೆಡ್‌ಶೀಟ್ ಮಾರಾಟಕ್ಕೆಂದು ಕಾರಲ್ಲಿ ಬಂದಿದ್ದ ಇಬ್ಬರು ಆರೋಪಿಗಳಿಂದ ಮಾನಭಂಗ ಯತ್ನ ನಡೆದಿರುವ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಮನೆಗೆ ಸಚಿವ ಎಸ್. ಅಂಗಾರ ಅ. 23ರಂದು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಬೆಡ್ ಶೀಟ್ ಮಾರಾಟಕ್ಕೆಂದು ಬಂದಿದ್ದ ಇಬ್ಬರು ಆರೋಪಿಗಳು ತನ್ನ ಮೇಲೆ ಮಾನಭಂಗ ಯತ್ನಿಸಿರುವ ಬಗ್ಗೆ ರಫೀಕ್ ಮತ್ತು ರಮೀಜುದ್ದೀನ್ ವಿರುದ್ಧ ದೋಳ್ಪಾಡಿ ಗ್ರಾಮದ ಕಟ್ಟ ಪರಿಶಿಷ್ಠ ಜಾತಿ ಮಹಿಳೆ ಕಡಬ ಪೋಲಿಸ್ ಠಾಣೆಗೆ ನೀಡಿರುವ ದೂರಿನಂತೆ ಮಾನಭಂಗ ಯತ್ನ ಪ್ರಕರಣ ದಾಖಲಾಗಿತ್ತು.
ಸಚಿವ ಎಸ್. ಅಂಗಾರ ಮಾತನಾಡಿ, ಘಟನೆ ಖಂಡನೀಯ. ದೋಳ್ಪಾಡಿಯಲ್ಲಿ ಮಹಿಳೆ ಮೇಲೆ ನಡೆದಿರುವ ಘಟನೆಯನ್ನು ಮರೆಮಾಚುವ ನಿಟ್ಟಿನಲ್ಲಿ ಸಾರ್ವಜನಿಕ ವಲಯಗಳಲ್ಲಿ ತಪ್ಪು ಅಭಿಪ್ರಾಯವನ್ನು ಮೂಡಿಸುವ ಕೆಲಸ ಕೆಎಫ್ಡಿ, ಎಸ್‌ಡಿಪಿಐ ಮತ್ತು ಕಾಂಗ್ರೆಸ್‌ನವರಿಂದ ನಡೆಯುತ್ತಿದ್ದು, ವಾಸ್ತಾವಿಕವಾಗಿ ಸತ್ಯಾಂಶವನ್ನು ಹೇಳದೆ ಮುಸಲ್ಮಾನರ ಮೇಲೆ ಹಲ್ಲೆ ನಡೆದಿದೆ ಎಂದು ಅಪಪ್ರಚಾರವನ್ನು ಮಾಡಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಸಂಬಧಪಟ್ಟ ಇಲಾಖೆ, ಸರಕಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಚಾರ್ವಾಕ ಸಿ.ಎ. ಬ್ಯಾಂಕ್ ಅಧ್ಯಕ್ಷ ಆನಂದ ಗೌಡ ಮೇಲ್ಮನೆ ಹಾಗೂ ಸ್ಥಳೀಯ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
You seem to have an Ad Blocker on.
To continue reading, please turn it off or whitelist Udayavani.