ದೀಪಾವಳಿ: ಬಿರುಸುಗೊಂಡ ಪಟಾಕಿ ವ್ಯಾಪಾರ

Team Udayavani, Oct 24, 2022, 3:00 PM IST

ದೀಪಾವಳಿ: ಬಿರುಸುಗೊಂಡ ಪಟಾಕಿ ವ್ಯಾಪಾರ

ದೊಡ್ಡಬಳ್ಳಾಪುರ: ದೀಪಾವಳಿ ಹಬ್ಬದ ಸಾಲಿನ ನರಕ ಚತುರ್ದಶಿ ಆಚರಿಸಲು ತಾಲೂಕಿನಲ್ಲಿ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ದೀಪಾವಳಿಯಲ್ಲಿ ಪಟಾಕಿ ವ್ಯಾಪಾರಿಗಳು ಹೆಚ್ಚಿನ ಮಾರಾಟದ ನಿರೀಕ್ಷೆಯಲ್ಲಿದ್ದಾರೆ. ಕೊರೊನಾ ಕಾರಣದಿಂದ ಕಳೆದೆರಡು ವರ್ಷಗಳಿಂದ ಕಳೆಗುಂದಿದ್ದ ಪಟಾಕಿ ವ್ಯಾಪಾರ ಈ ಬಾರಿ ಬಿರುಸಾಗುವ ಲಕ್ಷಣಗಳು ಕಾಣುತ್ತಿವೆ.

ಈ ಬಾರಿಯೂ ಸುಪ್ರೀಂ ಕೋರ್ಟ್‌ ಆದೇಶದಂತೆ ಹಸಿರು ಪಟಾಕಿ ಹಾಗೂ ಮಾಲಿನ್ಯ ರಹಿತ ಪಟಾಕಿಗಳ ಮಾರಾಟಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಎಂದಿನಂತೆ ಪಟಾಕಿ ಮಾರಾಟಕ್ಕೆ ಪರವಾನಗಿ ಸಿಗುವುದು ವಿಳಂಬವಾಗಿತ್ತು. ಪ್ರತಿವರ್ಷ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಪಟಾಕಿಗಳ ವ್ಯಾಪಾರಕ್ಕೆ ಅವಕಾಶ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಕೆಆರ್‌ಎನ್‌ ಲೋಕದ ಬಳಿ ಖಾಸಗಿ ಜಮೀನಿನಲ್ಲಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ನಗರದ ಕೆಆರ್‌ಎನ್‌ ಲೋಕದ ರಸ್ತೆಯ ಕೆಸಿಪಿ ವೃತ್ತದ ಬಳಿ ಪರವಾನಗಿ ಪಡೆದ 8 ಅಂಗಡಿಗಳ ವ್ಯಾಪಾರಿಗಳು ಪಟಾಕಿಗಳನ್ನು ಮಾರಾಟ ಮಾಡಲು ಆರಂಭಿಸಿದ್ದಾರೆ.

ಮಾರ್ಗಸೂಚಿ ಅನ್ವಯ ಮಾರಾಟ: ಸುಪ್ರೀಂ ಕೋರ್ಟ್‌ ಸೂಚನೆಯಂತೆ ಹಸಿರು ಪಟಾಕಿಗಳ ತಯಾರಿಕೆಯ ಮಾರ್ಗಸೂಚಿ ಅನುಸರಿಸಿ ತಯಾರಿಸಲಾಗಿರುವ ಕಂಪನಿಗಳಿಂದಲೇ ನಾವು ಪಟಾಕಿಗಳನ್ನು ಖರೀದಿಸಿ ಮಾರಾಟ ಮಾಡಲಾಗುತ್ತಿದೆ. ಆದ್ದರಿಂದ, ಗ್ರಾಹಕರು ಯಾವುದೇ ಆತಂಕವಿಲ್ಲದೇ ಖರೀದಿಸಬಹುದು. ಆದರೆ, ಎಂದಿನಂತೆ ನಮಗೆ ಪಟಾಕಿ ಅಂಗಡಿ ಇಡುವುದಕ್ಕೆ ಜಾಗ ನೀಡುವುದು ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದು ಪರವಾನಗಿ ಪಡೆಯುವುದು ವಿಳಂಬವಾಗುತ್ತಿದೆ. ಈ ಬಾರಿ ಪರವಾನಗಿ ಬೇಗ ಸಿಕ್ಕಿದರೂ ಸಹ, ಸ್ಥಳವನ್ನು ನಿಗದಿ ಮಾಡಲು, ಪರದಾಡುವಂತಾಗಿ, ಅಂಗಡಿಗಳಿಗೆ ವ್ಯವಸ್ಥೆ ಮಾಡಿಕೊಳ್ಳಲು ತ್ರಾಸವಾಗಿದೆ. ಸರ್ಕಾರ ಯಾವುದೇ ಸುತ್ತೋಲೆ ಹೊರಡಿಸಿದರೂ ಮುಂಚಿತವಾಗಿ ಹೇಳಿದರೆ ನಮಗೆ ಅನುಕೂಲ ಆಗಲಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಪಟಾಕಿಗಳ ಬೆಲೆಗಳು ಹೆಚ್ಚಾಗಿವೆ. ವ್ಯಾಪಾರ ಈಗ ತಾನೇ ಆರಂಭಗೊಳ್ಳುತ್ತಿದ್ದು, ಸೋಮವಾರದಿಂದ ಬಿರುಸುಗೊಳ್ಳಲಿದೆ ಎನ್ನುತ್ತಾರೆ ಪಟಾಕಿ ವ್ಯಾಪಾರಿಗಳು.

ಸಂಜೆ ನಂತರ ಬಿರುಸುಗೊಂಡ ವ್ಯಾಪಾರ: ಟಿ20 ವಿಶ್ವಕಪ್‌ನ ರೋಚಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಜಯ ಗಳಿಸುತ್ತಿದ್ದಂತೆ, ಇತ್ತ ಪಟಾಕಿ ಅಂಗಡಿಗಳಲ್ಲಿ ದಾಂಗುಡಿ ಇಟ್ಟ ಕ್ರಿಕೆಟ್‌ ಅಭಿಮಾನಿಗಳು ಪಟಾಕಿಗಳನ್ನು ಕೊಂಡು ಸಿಡಿಸಿ ಸಂಭ್ರಮಿಸಿದರು. ಬೆಲೆ ಎರಿಕೆ ನಡುವೆ ದೀಪಾವಳಿಗೆ ಸ್ವಾಗತ: ಈ ಬಾರಿ ಅಮಾವಾಸ್ಯೆಯಂದು ಕೇತಗ್ರಸ್ಥ ಸೂರ್ಯ ಗ್ರಹಣ ಇರುವುದರಿಂದ ಅಂದು ನಡೆಯಬೇಕಾದ ಆಚರಣೆಗಳು ಬಹುಪಾಲು ಸೋಮವಾರವೇ ನಡೆಯಲಿವೆ. ದೀಪಾವಳಿ ಹಿನ್ನೆಲೆ ಹೂವು, ಬಾಳೆಕಂದು ಮಾವಿನಸೊಪ್ಪು, ತರಕಾರಿಗಳ ಬೆಲೆ ಗಗನಕ್ಕೇರಿವೆ.

ದೀಪಾವಳಿಯಲ್ಲಿ ಮನೆ ಮುಂದೆ ಹಚ್ಚಿಡುವ ಹಣತೆಗಳ ಮಾರಾಟ ಭರದಿಂದ ಸಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ ದೀಪಾವಳಿಗೆ ತರಕಾರಿ ಹಾಗೂ ಅಗತ್ಯ ವಸ್ತುಗಳನ್ನು ಕೊಂಡೊಯ್ಯುತ್ತಿ ರುವ ಸಾರ್ವಜನಿಕರು ಹಬ್ಬ ಆಚರಿಸಲು ಸಿದ್ಧವಾಗುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

ಪಟಾಕಿ ಹಚ್ಚಲು ನಿರ್ಬಂಧ: ಹಲವಾರು ಶಾಲೆಗಳಲ್ಲಿ ಮಕ್ಕಳಿಗೆ ಪಟಾಕಿ ಹಚ್ಚುವ ಬದಲು ದೀಪ ಹಚ್ಚಿ, ನಾವು ಪಟಾಕಿ ಹೊಡೆಯುವದಿಲ್ಲ ಎನ್ನುವ ಪ್ರಮಾಣಗಳು ಸಹ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಬೇರೆ ಮಕ್ಕಳು ಪಟಾಕಿ ಹೊಡೆಯುತ್ತಿದ್ದರೆ ನಾವು ನೋಡಿ ಕೊಂಡು ಹೇಗೆ ಇರಲು ಸಾಧ್ಯ. ಹಾನಿಕಾರಕ ವಲ್ಲದ ಸಣ್ಣ ಪಟಾಕಿಗಳಾದರೂ ನಮಗೆ ಹಚ್ಚಲು ಹಿರಿಯರು ಹಾಗೂ ಶಿಕ್ಷಕರು ಅನುವು ಮಾಡಿಕೊಡಬೇಕಿದೆ ಎನ್ನುತ್ತಾರೆ ಮಕ್ಕಳಾದ ಸೃಜನ್‌, ಸಂಜನ, ಸುಹಾಸ್‌,ಪ್ರಣವ್‌.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.